LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

BIG NEWS : 'KPSC' ಹಗರಣ ಹೊರ ಬಂದ್ರೆ ಹಲವು ಮಂತ್ರಿಗಳು ಜೈಲಿಗೆ ಹೋಗ್ತಾರೆ : ಛಲವಾದಿ ನಾರಾಯಣಸ್ವಾಮಿ ಹೊಸ ಬಾಂಬ್

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಹಗರಣ ಹೊರಬಂದರೆ ರಾಜ್ಯ ಸರ್ಕಾರದ ಅನೇಕ ಸಚಿವರು ಜೈಲಿಗೆ ಹೋಗುವುದು ಖಚಿತ. ಹೀಗಾಗಿ ಈ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರದ ಎಸ್‌.ಐ.ಟಿಗೆ (SIT) ನೀಡುವ ಬದಲು ತಕ್ಷಣವೇ ಸಿಬಿಐಗೆ (CBI) ವಹಿಸಬೇಕು ಎಂದು ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಆಗ್ರಹಿಸಿದ್ದಾರೆ. ವಿಧಾನಪರಿಷತ್‌ನಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿದ ಅವರು ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಕೆಪಿಎಸ್‌ಸಿ ಸಂಸ್ಥೆಯನ್ನು ಯಾವ ಕಾನೂನಿನ ಅಡಿಯಲ್ಲಿ ಮುಚ್ಚಲು ಅವಕಾಶವಿದೆ ಎಂಬುದರ ಕುರಿತು ಸದನದಲ್ಲಿ ಚರ್ಚೆಗೆ ಅವಕಾಶ ಮಾಡಿಕೊಡಬೇಕು ಎಂದು ಸಭಾಪತಿ ಸಲೀಂ ಅಹ್ಮದ್ ಅವರಲ್ಲಿ ನಾರಾಯಣಸ್ವಾಮಿ ಒತ್ತಾಯಿಸಿದರು. ಆಡಳಿತಾರೂಢ ಕಾಂಗ್ರೆಸ್ ಶಾಸಕರು ಮತ್ತು ನಾಯಕರು ಈ ಪ್ರಸ್ತಾಪಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರಿಂದ ಸದನದಲ್ಲಿ ತೀವ್ರ ವಾಗ್ವಾದ ಹಾಗೂ ಗದ್ದಲದ ವಾತಾವರಣ ನಿರ್ಮಾಣವಾಯಿತು.

ಈ ವೇಳೆ ಮಧ್ಯಪ್ರವೇಶಿಸಿದ ಸಭಾನಾಯಕ ಯತೀಂದ್ರ ಸಿದ್ದರಾಮಯ್ಯ, "ಕೆಪಿಎಸ್‌ಸಿ ಪ್ರಕರಣವು ಪ್ರಸ್ತುತ ನ್ಯಾಯಾಲಯದ ಹಂತದಲ್ಲಿದೆ. ಹೀಗಾಗಿ ಸುಭಾಷಿತ ನಿಯಮಗಳ ಪ್ರಕಾರ ನ್ಯಾಯಾಲಯದಲ್ಲಿರುವ ವಿಷಯವನ್ನು ಸದನದಲ್ಲಿ ಚರ್ಚಿಸಲು ಸಾಧ್ಯವಿಲ್ಲ" ಎಂದು ಸ್ಪಷ್ಟಪಡಿಸಿದರು. ಅಲ್ಲದೆ, ಕಲಾಪ ಸಲಹಾ ಸಮಿತಿ (BAC) ಸಭೆಯಲ್ಲಿ ಕೇವಲ ಬರಗಾಲದ ಕುರಿತು ಚರ್ಚೆ ನಡೆಸಿ ಸದನವನ್ನು ಒಂದು ದಿನ ವಿಸ್ತರಿಸುವಂತೆ ಮಾತ್ರ ವಿಪಕ್ಷಗಳು ಮನವಿ ಮಾಡಿದ್ದವು ಹೊರತು ಕೆಪಿಎಸ್‌ಸಿ ಚರ್ಚೆಯ ಪ್ರಸ್ತಾಪ ತಂದಿರಲಿಲ್ಲ. ಮುಖ್ಯಮಂತ್ರಿಗಳು ಸದನಕ್ಕೆ ಬಂದಾಗ ಈ ಬಗ್ಗೆ ಮಾತನಾಡಿ, ಈಗ ಬೇಡ ಎಂದು ಸಭಾನಾಯಕರು ಹೇಳಿದರು.

ಆದರೆ ಸರ್ಕಾರದ ಸಮಜಾಯಿಷಿಗೆ ಒಪ್ಪದ ವಿಪಕ್ಷ ನಾಯಕರು, ಕಲಾಪ ಸಲಹಾ ಸಮಿತಿಯಲ್ಲೇ ಎಲ್ಲವೂ ತೀರ್ಮಾನವಾಗುವುದಿಲ್ಲ. ಅಭ್ಯರ್ಥಿಗಳ ಭವಿಷ್ಯಕ್ಕೆ ಸಂಬಂಧಿಸಿದ ಕೆಪಿಎಸ್‌ಸಿ ವಿಚಾರ ಅತ್ಯಂತ ಪ್ರಮುಖವಾಗಿದ್ದು, ಚರ್ಚೆಗೆ ಪೀಠದಿಂದಲೇ ಸೂಕ್ತ ತೀರ್ಮಾನವಾಗಬೇಕು ಎಂದು ಪಟ್ಟು ಹಿಡಿದರು. ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ವಿಪಕ್ಷ ನಾಯಕರ ಬೆಂಬಲಕ್ಕೆ ನಿಂತು, ಬರಗಾಲದ ಚರ್ಚೆ ಮುಗಿದ ತಕ್ಷಣ ಕೆಪಿಎಸ್‌ಸಿ ಬಗ್ಗೆ ಮಾತನಾಡಲು ಅವಕಾಶ ನೀಡಬೇಕು ಎಂದು ಧ್ವನಿಗೂಡಿಸಿದರು. ಅಂತಿಮವಾಗಿ ವಿಪಕ್ಷಗಳ ತೀವ್ರ ಪಟ್ಟು ಮತ್ತು ಕೋಲಾಹಲದ ನಡುವೆಯೂ, ಕೆಪಿಎಸ್‌ಸಿ ಕುರಿತ ಚರ್ಚೆಗೆ ತಕ್ಷಣವೇ ಅವಕಾಶ ನೀಡದೆ ಕಲಾಪದ ಪಟ್ಟಿಯಂತೆ ಬರಗಾಲದ ವಿಷಯದ ಮೇಲಿನ ಚರ್ಚೆಯನ್ನೇ ಮುಂದುವರಿಸುವಂತೆ ಸಭಾಪತಿಗಳು ಸೂಚನೆ ನೀಡಿದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸೇವೆಯಲ್ಲಿರುವ ಅಗ್ನಿವೀರರಿಗೆ ಮಾತ್ರ ಹೊಸ ಬದಲಾವಣೆ‘ರಾಮಾಯಣ’ ಸಿನಿಮಾ ನೋಡಿ ಭಾವುಕರಾದ ಅನುಪಮ್ ಖೇರ್: ಭಾರತೀಯ ಚಿತ್ರರಂಗದ ಸರ್ವಶ್ರೇಷ್ಠ ಸಿನಿಮಾ ಎಂದ ನಟ!ಮುಂಬೈ ಅಂತರ ಶಾಲಾ ಬಾಸ್ಕೆಟ್‌ಬಾಲ್ ಧಮಾಕಾ: ಡಾನ್ ಬೊಸ್ಕೊ ಮಣಿಸಿ ಟ್ರೋಫಿ ಎತ್ತಿಹಿಡಿದ ಅಂಡೇರಿಯಾ ಎಂಪಿಎಸ್!Motorola Signature 27 Snapdragon 8 Elite Extreme Gen 6 ಮತ್ತು 200MP ಟೆಲಿಫೋಟೋ ಲೆನ್ಸ್‌ನೊಂದಿಗೆ ಅನಾವರಣಬಾಲಿವುಡ್ ಅಂಗಳದಲ್ಲಿ ಹೊಸ ಲವ್ ಸ್ಟೋರಿ: ಗೆಳತಿ ಜೊತೆ ಮನೀಶ್ ಮಲ್ಹೋತ್ರಾ ಪಾರ್ಟಿಯಲ್ಲಿ ಮಾಧುರಿ ದೀಕ್ಷಿತ್ ಮಗ!ಬ್ಯಾಂಕ್ ಲಾಕರ್’ ನಲ್ಲಿ ಇಟ್ಟಿದ್ದ ₹47 ಲಕ್ಷದ ಚಿನ್ನಾಭರಣ ನಾಪತ್ತೆ! ಮಹಿಳೆಯ ಹೋರಾಟಕ್ಕೆ ಕೊನೆಗೂ ಸಿಕ್ತು ಜಯ!ರಾಮಾಯಣ’ದಲ್ಲಿ ರಾಮನಾಗಿ ರಣಬೀರ್, ರಾವಣನಾಗಿ ಯಶ್; ಇಬ್ಬರಲ್ಲಿ ಶ್ರೀಮಂತ ನಟ ಯಾರು?ಕೈ ಕೈ ಹಿಡಿದು ಬಂದ ಐಶ್ವರ್ಯಾ ರೈ–ಅಭಿಷೇಕ್ ಜೋಡಿ; ರೊಮ್ಯಾಂಟಿಕ್ ಕ್ಷಣ ವೈರಲ್! ವಿಚ್ಛೇದನದ ವದಂತಿಗಳಿಗೆ ಬ್ರೇಕ್?ಆಸೀಸ್ ಕ್ರಿಕೆಟರ್ ಗೆ ಕೊಕೇನ್ ಶಾಕ್: ತಪ್ಪು ಒಪ್ಪಿಕೊಂಡು ನಿಷೇಧ ಪೂರ್ಣಗೊಳಿಸಿದ ಕ್ರಿಸ್ ಲಿನ್!ಧನ್ತೇರಸ್ 2026: ಚಿನ್ನ ಖರೀದಿಗೆ ಶುಭ ಮುಹೂರ್ತ ಯಾವಾಗ? ಬೆಂಗಳೂರು ಸೇರಿ ಪ್ರಮುಖ ನಗರಗಳ ಪೂಜಾ ಸಮಯ ಇಲ್ಲಿದೆ