ಬೆಂಗಳೂರು: ಕರ್ನಾಟಕ ರಾಜ್ಯ ಮೀಸಲು ಪೊಲೀಸ್ (#KSRP) ಪಡೆಯ 2,314 ಕಾನ್ಸ್‌ಟೇಬಲ್ ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಇಂದು ನಡೆಸಿದ ಲಿಖಿತ ಪರೀಕ್ಷೆ ಸುಗಮವಾಗಿ ನಡೆಯಿತು.
ಬೆಳಿಗ್ಗೆ ನಡೆದ ಪರೀಕ್ಷೆಯನ್ನು ಮಿಕ್ಕುಳಿಕೆ ವೃಂದದ ಒಟ್ಟು 1,42,912 ಅಭ್ಯರ್ಥಿಗಳ ಪೈಕಿ 1,12,125 (ಶೇ 78) ಮಂದಿ ಹಾಗೂ ಮಧ್ಯಾಹ್ನ ನಡೆದ ಪರೀಕ್ಷೆಯನ್ನು ಕಲ್ಯಾಣ ಕರ್ನಾಟಕ ವೃಂದದ 38,332 ಅಭ್ಯರ್ಥಿಗಳ ಪೈಕಿ 32,694 (ಶೇ 85) ಮಂದಿ ಬರೆದರು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ.
ಪರೀಕ್ಷೆ ಮುಗಿದ ಕೂಡಲೇ ಓಎಂಅರ್ ಪ್ರತಿಗಳನ್ನು ಸ್ಕ್ಯಾನ್ ಮಾಡಿ, ವೆಬ್ ಸೈಟ್ ಗೆ ಅಪ್ ಲೋಡ್ ಮಾಡಲಾಯಿತು. ಬೆಂಗಳೂರು, ಮೈಸೂರು, ಕಲ್ಬುರ್ಗಿಯಲ್ಲಿ ಆಯಾ ಭಾಗದ ಓಎಂಅರ್ ಪ್ರತಿಗಳನ್ನು ಸ್ಕ್ಯಾನ್ ಮಾಡಲಾಯಿತು ಎಂದು ಅವರು ವಿವರಿಸಿದರು.
ವೆಬ್ ಕಾಸ್ಟಿಂಗ್ ಮೂಲಕ ಎಲ್ಲ ಪರೀಕಾ ಕೇಂದ್ರಗಳ ಮೇಲೆ ನಿಗಾ ಇಡಲು ಪ್ರಾಧಿಕಾರದಲ್ಲಿ ಕಮಾಂಡ್ ಸೆಂಟರ್ ಸ್ಥಾಪಿಸಲಾಗಿತ್ತು.
https://twitter.com/KEA_karnataka/status/2101640328235323556