LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

BIG NEWS: ಸಾರ್ವಜನಿಕರ ಪೋನ್ ಕರೆ ಸ್ವೀಕರಿಸದ 'ಕಲ್ಮನೆ ಗ್ರಾಮ ಪಂಚಾಯ್ತಿ PDO' ಶಾಕ್: ಸಾಗರ EO ನೋಟಿಸ್, ಈ ಖಡಕ್ ಎಚ್ಚರಿಕೆ

ಸಾಗರ: ಗ್ರಾಮ ಪಂಚಾಯತ್ ವ್ಯಾಪ್ತಿಯ ಸಮಸ್ಯೆಗಳನ್ನು ಹೇಳಿಕೊಳ್ಳಲು ಸಾರ್ವಜನಿಕರು, ಜನಪ್ರತಿನಿಧಿಗಳು ಮತ್ತು ಮೇಲಧಿಕಾರಿಗಳು ಮಾಡುವ ಯಾವುದೇ ಫೋನ್ ಕರೆಗಳನ್ನು ಸ್ವೀಕರಿಸದೆ ಬೇಜವಾಬ್ದಾರಿತನ ಪ್ರದರ್ಶಿಸುತ್ತಿದ್ದ ಕಲ್ಮನೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಒ) ಸೌಮ್ಯ.ಎಸ್ ಅವರಿಗೆ ಸಾಗರ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು (ಇಒ) ಅಧಿಕೃತ ತಿಳುವಳಿಕೆ ಪತ್ರ (ನೋಟಿಸ್) ಜಾರಿ ಮಾಡಿದ್ದಾರೆ.

ಆ ಮೂಲಕ ಜನರ ಸಮಸ್ಯೆಗೆ ಪ್ರತಿಸ್ಪಂದಿಸದೇ ನಿರ್ಲಕ್ಷ್ಯ ವಹಿಸಿದ ಅಧಿಕಾರಿಗೆ ಸಾಗರ ತಾಲ್ಲೂಕು ಕಾರ್ಯನಿರ್ವಾಹಕ ಅಧಿಕಾರಿ ಬಿಸಿ ಮುಟ್ಟಿಸಿದ್ದಾರೆ.

​ನಿರಂತರ ದೂರುಗಳ ಹಿನ್ನೆಲೆಯಲ್ಲಿ ಕ್ರಮ

​ಕಲ್ಮನೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ, ಬೀದಿ ದೀಪಗಳ ನಿರ್ವಹಣೆ ಹಾಗೂ ಇನ್ನಿತರೆ ಸಮಸ್ಯೆಗಳ ಕುರಿತು ಮಾತನಾಡಲು ಸ್ಥಳೀಯ ಸಾರ್ವಜನಿಕರು ಹಾಗೂ ಜನಪ್ರತಿನಿಧಿಗಳು ಪಿಡಿಒ ಅವರಿಗೆ ಕರೆ ಮಾಡಿದರೆ ಅವರು ಫೋನ್ ಕರೆಗಳನ್ನು ಸ್ವೀಕರಿಸುತ್ತಿರಲಿಲ್ಲ. ಈ ಕುರಿತು ಸಾಗರ ತಾಲೂಕು ಪಂಚಾಯತ್ ಕಚೇರಿಗೆ ಸಾರ್ವಜನಿಕರು ಹಾಗೂ ಜನಪ್ರತಿನಿಧಿಗಳಿಂದ ಸಾಲು ಸಾಲು ದೂರುಗಳು ಬಂದಿದ್ದವು.

​ನಡವಳಿಕೆ ತಿದ್ದಿಕೊಳ್ಳಲು ಎಚ್ಚರಿಕೆ

​ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದ ಸಾಗರ ತಾಲ್ಲೂಕು ಕಾರ್ಯನಿರ್ವಾಹಕ ಅಧಿಕಾರಿ ಮೌನೇಶ್ ಬಿ ಬಡಿಗೇರ ಅವರು, "ದೂರವಾಣಿ ಕರೆ ಸ್ವೀಕರಿಸದೆ ನಿರ್ಲಕ್ಷ್ಯ ವಹಿಸುವುದು ಸರ್ಕಾರಿ ನೌಕರರಿಗೆ ತರವಲ್ಲದ ನಡವಳಿಕೆ" ಎಂದು ಎಚ್ಚರಿಸಿದ್ದಾರೆ.

ಇನ್ನು ಮುಂದಾದರೂ ಮೇಲಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರ ಫೋನ್ ಕರೆಗಳನ್ನು ತಪ್ಪದೇ ಸ್ವೀಕರಿಸಿ, ಸಮಸ್ಯೆಗಳನ್ನು ಆಲಿಸಿ ತಕ್ಷಣವೇ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಅಲ್ಲದೇ ಕಲ್ಮನೆ ಗ್ರಾಮ ಪಂಚಾಯತಿ ಪಿಡಿಒ ನಡೆಯ ಬಗ್ಗೆ ಶಿವಮೊಗ್ಗ ಜಿಲ್ಲಾ ಪಂಚಾಯತ್ ಸಿಇಒ ಅವರ ಗಮನಕ್ಕೂ ತರಲಾಗಿದೆ.

ಸಾರ್ವಜನಿಕ ದೂರವಾಣಿ ಕರೆ ಸ್ವೀಕರಿಸಿದೇ ನಿರ್ಲಕ್ಷ್ಯ

ಅಂದಹಾಗೆ ಸಾಗರ ತಾಲ್ಲೂಕಿನ ಕಲ್ಮನೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಜನರು ಪಿಡಿಒಗೆ ತಮ್ಮ ಊರಿನ ನೀರಿನ ಸಮಸ್ಯೆ, ಬೀದಿ ದೀಪಗಳ ಸಮಸ್ಯೆ ಕುರಿತಾಗಿ ಕರೆ ಮಾಡಿದಾಗ ಕರೆ ಸ್ವೀಕರಿಸಿದೇ ನಿರ್ಲಕ್ಷ್ಯ ವಹಿಸಿದ್ದರು. ಅಲ್ಲದೇ ಜನ ಪ್ರತಿನಿಧಿಗಳು, ವಿವಿಧ ಸಮಿತಿಗಳ ಸದಸ್ಯರು ಕರೆ ಮಾಡಿದರೂ ಎತ್ತದ ಆರೋಪ ಕೇಳಿ ಬಂದಿತ್ತು. 

ಕೆಲವೊಮ್ಮೆ ಕರೆ ಸ್ವೀಕರಿಸಿದರೂ ಕರ್ತವ್ಯದ ಅವಧಿಯಲ್ಲಿ ಕರೆ ಮಾಡಿ. ಯಾವಾಗ ಬೇಕೋ ಆಗ ಕರೆ ಮಾಡಬೇಡಿ ಎಂಬುದಾಗಿ ಕರೆ ಮಾಡಿದವರಿಗೆ ಕಡ್ಡಿ ತುಂಡರಿಸಿದಂತೆ ಹೇಳುವ ಮೂಲಕ ದುರಹಂಕಾರದ ನಡೆ ತೋರಿದ್ದರು ಎಂಬುದು ಸಾರ್ವಜನಿಕರ ಮಾತು. ಹೀಗಾಗಿ ಸಾಗರ ಇಒ ಸರ್ಕಾರಿ ಅಧಿಕಾರಿಗೆ ಇದು ತಕ್ಕದಾದ ನಡೆಯಲ್ಲ ಎನ್ನುವ ತಿಳುವಳಿಕೆ ನೋಟಿಸ್ ನೀಡಿ ಕಲ್ಮನೆ ಪಿಡಿಒಗೆ ಬಿಸಿ ಮುಟ್ಟಿಸಿದ್ದಾರೆ. ಹೀಗಾಗಿ ಇನ್ನಾದರೂ ಸಾರ್ವಜನಿಕರ ಕರೆಗೆ ಪ್ರತಿಸ್ಪಂದಿಸಿ, ಸಮಸ್ಯೆ ಆಲಿಸಿ ಸರಿ ಪಡಿಸುವ ವ್ಯವಧಾನವನ್ನು ತೋರುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.

ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು..

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸೇವೆಯಲ್ಲಿರುವ ಅಗ್ನಿವೀರರಿಗೆ ಮಾತ್ರ ಹೊಸ ಬದಲಾವಣೆ‘ರಾಮಾಯಣ’ ಸಿನಿಮಾ ನೋಡಿ ಭಾವುಕರಾದ ಅನುಪಮ್ ಖೇರ್: ಭಾರತೀಯ ಚಿತ್ರರಂಗದ ಸರ್ವಶ್ರೇಷ್ಠ ಸಿನಿಮಾ ಎಂದ ನಟ!ಮುಂಬೈ ಅಂತರ ಶಾಲಾ ಬಾಸ್ಕೆಟ್‌ಬಾಲ್ ಧಮಾಕಾ: ಡಾನ್ ಬೊಸ್ಕೊ ಮಣಿಸಿ ಟ್ರೋಫಿ ಎತ್ತಿಹಿಡಿದ ಅಂಡೇರಿಯಾ ಎಂಪಿಎಸ್!Motorola Signature 27 Snapdragon 8 Elite Extreme Gen 6 ಮತ್ತು 200MP ಟೆಲಿಫೋಟೋ ಲೆನ್ಸ್‌ನೊಂದಿಗೆ ಅನಾವರಣಬಾಲಿವುಡ್ ಅಂಗಳದಲ್ಲಿ ಹೊಸ ಲವ್ ಸ್ಟೋರಿ: ಗೆಳತಿ ಜೊತೆ ಮನೀಶ್ ಮಲ್ಹೋತ್ರಾ ಪಾರ್ಟಿಯಲ್ಲಿ ಮಾಧುರಿ ದೀಕ್ಷಿತ್ ಮಗ!ಬ್ಯಾಂಕ್ ಲಾಕರ್’ ನಲ್ಲಿ ಇಟ್ಟಿದ್ದ ₹47 ಲಕ್ಷದ ಚಿನ್ನಾಭರಣ ನಾಪತ್ತೆ! ಮಹಿಳೆಯ ಹೋರಾಟಕ್ಕೆ ಕೊನೆಗೂ ಸಿಕ್ತು ಜಯ!ರಾಮಾಯಣ’ದಲ್ಲಿ ರಾಮನಾಗಿ ರಣಬೀರ್, ರಾವಣನಾಗಿ ಯಶ್; ಇಬ್ಬರಲ್ಲಿ ಶ್ರೀಮಂತ ನಟ ಯಾರು?ಕೈ ಕೈ ಹಿಡಿದು ಬಂದ ಐಶ್ವರ್ಯಾ ರೈ–ಅಭಿಷೇಕ್ ಜೋಡಿ; ರೊಮ್ಯಾಂಟಿಕ್ ಕ್ಷಣ ವೈರಲ್! ವಿಚ್ಛೇದನದ ವದಂತಿಗಳಿಗೆ ಬ್ರೇಕ್?ಆಸೀಸ್ ಕ್ರಿಕೆಟರ್ ಗೆ ಕೊಕೇನ್ ಶಾಕ್: ತಪ್ಪು ಒಪ್ಪಿಕೊಂಡು ನಿಷೇಧ ಪೂರ್ಣಗೊಳಿಸಿದ ಕ್ರಿಸ್ ಲಿನ್!ಧನ್ತೇರಸ್ 2026: ಚಿನ್ನ ಖರೀದಿಗೆ ಶುಭ ಮುಹೂರ್ತ ಯಾವಾಗ? ಬೆಂಗಳೂರು ಸೇರಿ ಪ್ರಮುಖ ನಗರಗಳ ಪೂಜಾ ಸಮಯ ಇಲ್ಲಿದೆ