LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

BIG NEWS : ರಾಜ್ಯದ SC/ST ಪೊಲೀಸ್ ಸಿಬ್ಬಂದಿಗಳಿಗೆ ವಸತಿ ಗೃಹ ಹಂಚಿಕೆ ; ಸರ್ಕಾರದಿಂದ ಮಹತ್ವದ ಆದೇಶ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡದ (ST) ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ವಸತಿ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ರಾಜ್ಯ ಪೊಲೀಸ್ ಮಹಾನಿರ್ದೇಶಕರ ಕಚೇರಿಯು ಮಹತ್ವದ ಸುತ್ತೋಲೆಯನ್ನು ಹೊರಡಿಸಿದೆ.

ಕೆಲವು ಪ್ರದೇಶಗಳಲ್ಲಿ ಎಸ್‌.ಸಿ/ಎಸ್‌.ಟಿ ವರ್ಗಕ್ಕೆ ಸೇರಿದ ಪೊಲೀಸ್ ಸಿಬ್ಬಂದಿಗಳಿಗೆ ಜಾತಿ ಆಧಾರದ ಮೇಲೆ ಖಾಸಗಿ ಮನೆಗಳನ್ನು ಬಾಡಿಗೆಗೆ ನೀಡಲು ಮಾಲೀಕರು ನಿರಾಕರಿಸುತ್ತಿದ್ದಾರೆ ಎಂಬ ಗಂಭೀರ ವಿಷಯವು ಸರ್ಕಾರದ ಗಮನಕ್ಕೆ ಬಂದಿದೆ. ಈ ಕಾರಣದಿಂದಾಗಿ ಸಿಬ್ಬಂದಿಗಳು ದೂರದ ಊರುಗಳಲ್ಲಿ ವಾಸಿಸಬೇಕಾದ ಅನಿವಾರ್ಯತೆ ಎದುರಾಗಿದ್ದು, ಇದು ಅವರ ಕರ್ತವ್ಯದ ಮೇಲೂ ಪರಿಣಾಮ ಬೀರುತ್ತಿದೆ.

ಯಾವುದೇ ಪೊಲೀಸ್ ಸಿಬ್ಬಂದಿಗೆ ಜಾತಿ ಕಾರಣಕ್ಕಾಗಿ ಬಾಡಿಗೆ ಮನೆ ಸಿಗದಿದ್ದಲ್ಲಿ, ಅವರು ತಮ್ಮ ಘಟಕದ ಅಧಿಕಾರಿಗಳಿಗೆ ಮನವಿ ಸಲ್ಲಿಸಬಹುದು.ಅಂತಹ ಮನವಿಗಳನ್ನು ಪರಿಶೀಲಿಸಿ, ಇಲಾಖೆಯ ವತಿಯಿಂದ ನಿರ್ಮಿಸಲಾದ ವಸತಿಗೃಹಗಳಲ್ಲಿ ಖಾಲಿ ಇರುವ ಮನೆಗಳನ್ನು ಆದ್ಯತೆಯ ಮೇರೆಗೆ ಈ ಸಿಬ್ಬಂದಿಗಳಿಗೆ ಹಂಚಿಕೆ ಮಾಡಲು ಕ್ರಮ ಕೈಗೊಳ್ಳಲಾಗುವುದು.

ವಿಧಾನಸಭಾ ಸಮಿತಿಯ ಚರ್ಚೆ: ದಿನಾಂಕ 28/4/2026 ರಂದು ನಡೆದ ಸರ್ಕಾರಿ ವಿಧಾನಸಭಾ ಭರವಸೆಗಳ ಸಮಿತಿಯ ಸಭೆಯಲ್ಲಿ ಈ ವಿಷಯವನ್ನು ಚರ್ಚಿಸಲಾಗಿದ್ದು, ಅದರಂತೆ ಈ ಆದೇಶ ಹೊರಡಿಸಲಾಗಿದೆ. ಈ ಆದೇಶವನ್ನು ಡಿಜಿ ಮತ್ತು ಐಜಿಪಿ ಅವರ ಅನುಮೋದನೆಯೊಂದಿಗೆ ಹೊರಡಿಸಲಾಗಿದ್ದು, ರಾಜ್ಯದ ಎಲ್ಲಾ ಘಟಕಾಧಿಕಾರಿಗಳಿಗೆ ಸೂಕ್ತ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿಮಕ್ಕಳ ಮನಸ್ಸು, ಮೆದುಳಿನ ಶಕ್ತಿಗೆ ದಾರಿದೀಪ ಈ ಪುಸ್ತಕ: ತಪ್ಪದೇ ಖರೀದಿಸಿ, ನಿಮ್ಮ ಮಕ್ಕಳಿಗೆ ತಪ್ಪದೇ ಓದಿಸಿ!ಹಿಂದೂಗಳ ಆಚರಣೆಗೆ ಸರ್ಕಾರ ಅಡ್ಡಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಕಾಂಗ್ರೆಸ್ ಪಕ್ಷ ಸಂಘಟನೆ ಬಲವರ್ಧನೆಗೆ 'ಕೆಪಿಸಿಸಿ ಕನೆಕ್ಟ್ ಸೆಂಟರ್' ಸ್ಥಾಪನೆ: ಪದಾಧಿಕಾರಿಗಳ ನೇಮಕ