LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

BIG NEWS: ಬಿಟ್ ಕಾಯಿನ್ ಹಗರಣ: ಕಾಂಗ್ರೆಸ್ ಮುಖಂಡ ಮೊಹಮ್ಮದ್ ನಲಪಾಡ್ ವಿರುದ್ಧ SIT ಚಾರ್ಜ್ ಶೀಟ್ ಸಲ್ಲಿಕೆ

ಬೆಂಗಳೂರು: ರಾಜ್ಯದಲ್ಲಿ ಸಂಚಲನ ಸೃಷ್ಟಿಸಿದ್ದ ಬಹುಕೋಟಿ ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿರುವ ಎಸ್ಐಟಿ ಅಧಿಕಾರಿಗಳು ಯುವ ಕಾಂಗ್ರೆಸ್ ಮುಖಂಡ ಮೊಹಮ್ಮದ್ ನಲಪಾಡ್ ಹಾಗೂ ಇತರರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.

ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆ ಪೂರ್ಣಗೊಳಿಸಿರುವ ಎಸ್ಐಟಿ ಅಧಿಕಾರಿಗಳು ಹಗರಣದ ಕಿಂಗ್ ಪಿನ್ ಶ್ರೀಕಿ, ರಾಬಿನ್ ಖಂಡೆವಾಲಾ, ಮೊಹಮ್ಮದ್ ನಲಪಾಡ್ ಸೇರಿದಂತೆ ಇತರರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ.

ಚಾರ್ಜ್ ಶೀಟ್ ನಲ್ಲಿ ನಲಪಾಡ್ ಗೆ ಹಣ ಸಂದಾಯವಾಗಿರುವ ಬಗ್ಗೆ ಅಧಿಕಾರಿಗಳು ಉಲ್ಲೇಖಿಸಿದ್ದಾರೆ. ನಲಪಾಡ್ ಆರೋಪಿಗಳ ಜೊತೆ ನಿರಂತರ ಸಂಪರ್ಕದಲ್ಲಿರುವುದು ಬೆಳಕಿಗೆ ಬಂದಿದೆ. ಬಿಟ್ ಕಾಯಿನ್ ನಗದೀಕರಣಕ್ಕೆ ಶ್ರೀಕಿ, ನಲಪಾಡ್ ಸಂಪರ್ಕದಲ್ಲಿದ. ಸ್ನೇಹಿತರ ಮೂಲಕ ನಲಪಾಡ್ ಹಣ ನಗದೀಕರಣ ಮಾಡಿರುವುದು ತನಿಖೆಯಲ್ಲಿ ಬಯಲಾಗಿದೆ. ಮುಂಬೈ ಮೂಲದ ಸ್ನೇಹಿತನ ಮೂಲಕ ಹವಾಲಾ ರೂಪದಲ್ಲಿ ಹಣ ನಗದೀಕರಣವಾಗಿದೆ. ಕಮಿಷನ್ ನಲ್ಲಿ ಮೊಹಮ್ಮದ್ ನಲಪಾಡ್ ಗೂ ಪಾಲು ಹೋಗಿದ್ದು ಪತ್ತೆಯಾಗಿದೆ. ಈ ವಿಚಾರವನ್ನು ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಲಾಗಿದೆ.

ಸದ್ಯ ಬಿಟ್ ಕಾಯಿನ್ ಹಗರಣದ ಬಗ್ಗೆ ಜಾರಿ ನಿರ್ದೇಶನಾಲಯ (ED)ದಿಂದಲೂ ತನಿಖೆ ನಡೆಯುತ್ತಿದೆ. ನಲಪಾಡ್, ಶ್ರೀಕಿ ಸೇರಿ ಕೆಲವರ ಮನೆ ಮೇಲೆ ಇಡಿ ಅಧಿಕಾರಿಗಳು ಈ ಹಿಂದೆ ದಾಳಿ ನಡೆಸಿದ್ದರು. ಶ್ರೀಕಿ, ಸುನೀಶ್ ಹೆಗ್ಡೆ, ರಾಬಿನ್ ಖಂಡೇವಾಲನನ್ನು ಇಡಿ ಅಧಿಕಾರಿಗಳು ಬಂಧಿಸಿದ್ದರು. ಕಸ್ಟಡಿಗೆ ಪಡೆದು ಆರೋಪಿಗಳ ವಿಚಾರಣೆ ಬಳಿಕ ನಲಪಾಡ್ ಗೂ ನೋಟಿಸ್ ಜಾರಿ ಮಾಡಿದ್ದರು.

ಎರಡು ಬಾರಿ ಇಡಿ ಅಧಿಕಾರಿಗಳು ನಲಪಾಡ್ ಗೆ ನೋಟಿಸ್ ನೀಡಿದ್ದಾರೆ. ಈಗ ಮೂರನೇ ಬಾರಿ ನೋಟಿಸ್ ನೀಡಲು ಇಡಿ ಅಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ. ಈ ಮಧ್ಯೆ ಎಸ್ಐಟಿ ತನಿಖೆ ಪೂರ್ಣಗೊಂಡ ಹಿನ್ನೆಲೆಯಲ್ಲಿ ಎಸ್ಐಟಿ ಅಧಿಕಾರಿಗಳು ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ