LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಎಸ್ಐಆರ್ ಪ್ರತಿಭಟನೆ ಮಧ್ಯೆಯೇ ವಿದೇಶ ಪ್ರವಾಸಕ್ಕೆ ತೆರಳಿದ ರಾಹುಲ್ ಗಾಂಧಿ: BJP ವ್ಯಂಗ್ಯ

ನವದೆಹಲಿ: ಎಸ್​ಐಆರ್​​ನಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಹಾಗೂ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್ ಕುಆರ್ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ನೇತೃತ್ವದಲ್ಲಿ ಪ್ರತಿಭಟನೆಗಳು ಮುಂದುವರಿದಿರುವ ಬೆನ್ನಲ್ಲೇ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿದೇಶ ಪ್ರವಾಸಕ್ಕೆ ತೆರಳಿದ್ದಾರೆ.

ರಾಹುಲ್ ಗಾಂಧಿ ವಿಯೆಟ್ನಾಮ್‌ಗೆ ತೆರಳಿದ್ದು, ಇದೇ ವಿಚಾರವಾಗಿ ಇದೀಗ ಬಿಜೆಪಿ ವ್ಯಂಗ್ಯವಾಡಿದೆ. “ದೇಶಾದ್ಯಂತ ಸುಳ್ಳುಗಳನ್ನು ಹರಡಿ ವಿರಾಮ ತೆಗೆದುಕೊಂಡಿದ್ದಾರೆ” ಎಂದು ರಾಹುಲ್ ಗಾಂಧಿ ಅವರನ್ನು ಟೀಕಿಸಿರುವ ಬಿಜೆಪಿ, ರಾಹುಲ್ ಗಾಂಧಿ ಬಿಸಿನೆಸ್ ಕ್ಲಾಸ್ ಕ್ಯಾಬಿನ್‌ನಲ್ಲಿ ಕುಳಿತಿರುವುದನ್ನು ತೋರಿಸುವ ವಿಡಿಯೋವನ್ನು ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದೆ.

ವಿಮಾನದ ಒಳಗೆ ರಾಹುಲ್ ಗಾಂಧಿ ಕುಳಿತಿರುವುದನ್ನು ತೋರಿಸುವ ವಿಡಿಯೋವನ್ನು ಬಿಜೆಪಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದೆ. “ತುಂಬಾ ಆಯಾಸಗೊಂಡಿದ್ದೀರಾ?” ಎಂಬ ಕ್ಯಾಪ್ಷನ್ ಹಾಕಿರುವ ಬಿಜೆಪಿ, ಭಾರತದಲ್ಲಿ ರಾಜಕೀಯ ಬಿಕ್ಕಟ್ಟುಗಳು ಹಾಗೂ ಪ್ರಮುಖ ಪ್ರತಿಭಟನೆಗಳ ಸಮಯದಲ್ಲೂ ರಾಹುಲ್ ಗಾಂಧಿ ಪದೇ ಪದೇ ವಿದೇಶ ಪ್ರವಾಸ ಕೈಗೊಳ್ಳುತ್ತಾರೆ ಎಂದು ಟೀಕಿಸಿದೆ.

ಚುನಾವಣೆಗೆ ಸಿದ್ಧತೆ ನಡೆಸಿರುವ ಗೋವಾದಲ್ಲಿ ನಡೆದ ‘ಗೋವಾ ರಕ್ಷಕೋ ಯಾತ್ರೆ’ಯಲ್ಲಿ ಭಾಗವಹಿಸಿ ಪಕ್ಷದ ನಾಯಕರೊಂದಿಗೆ 2 ಕಿಲೋಮೀಟರ್ ನಡೆದ ನಂತರ ರಾಹುಲ್ ಗಾಂಧಿ ಈಗ ವಿದೇಶ ಪ್ರವಾಸ ಕೈಗೊಂಡಿದ್ದಾರೆ. ಮುಂದಿನ ವರ್ಷ ಗೋವಾದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಚುನಾವಣಾ ದುರ್ನಡತೆ ಆರೋಪ ಮಾಡಿ ಕಾಂಗ್ರೆಸ್ ಮತ್ತು ಇತರ ‘ಇಂಡಿಯಾ’ ಒಕ್ಕೂಟದ ಪಕ್ಷಗಳು ಪ್ರತಿಭಟನೆ ನಡೆಸುತ್ತಿರುವ ಸಮಯದಲ್ಲೇ ರಾಹುಲ್ ಗಾಂಧಿ ವಿಯೆಟ್ನಾಮ್ ಗೆ ತೆರಳಿದ್ದು, ಬಿಜೆಪಿ ವ್ಯಂಗ್ಯವಾಡಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುಂಬೈ ಅಂತರ ಶಾಲಾ ಬಾಸ್ಕೆಟ್‌ಬಾಲ್ ಧಮಾಕಾ: ಡಾನ್ ಬೊಸ್ಕೊ ಮಣಿಸಿ ಟ್ರೋಫಿ ಎತ್ತಿಹಿಡಿದ ಅಂಡೇರಿಯಾ ಎಂಪಿಎಸ್!Motorola Signature 27 Snapdragon 8 Elite Extreme Gen 6 ಮತ್ತು 200MP ಟೆಲಿಫೋಟೋ ಲೆನ್ಸ್‌ನೊಂದಿಗೆ ಅನಾವರಣಬಾಲಿವುಡ್ ಅಂಗಳದಲ್ಲಿ ಹೊಸ ಲವ್ ಸ್ಟೋರಿ: ಗೆಳತಿ ಜೊತೆ ಮನೀಶ್ ಮಲ್ಹೋತ್ರಾ ಪಾರ್ಟಿಯಲ್ಲಿ ಮಾಧುರಿ ದೀಕ್ಷಿತ್ ಮಗ!ಬ್ಯಾಂಕ್ ಲಾಕರ್’ ನಲ್ಲಿ ಇಟ್ಟಿದ್ದ ₹47 ಲಕ್ಷದ ಚಿನ್ನಾಭರಣ ನಾಪತ್ತೆ! ಮಹಿಳೆಯ ಹೋರಾಟಕ್ಕೆ ಕೊನೆಗೂ ಸಿಕ್ತು ಜಯ!ರಾಮಾಯಣ’ದಲ್ಲಿ ರಾಮನಾಗಿ ರಣಬೀರ್, ರಾವಣನಾಗಿ ಯಶ್; ಇಬ್ಬರಲ್ಲಿ ಶ್ರೀಮಂತ ನಟ ಯಾರು?ಕೈ ಕೈ ಹಿಡಿದು ಬಂದ ಐಶ್ವರ್ಯಾ ರೈ–ಅಭಿಷೇಕ್ ಜೋಡಿ; ರೊಮ್ಯಾಂಟಿಕ್ ಕ್ಷಣ ವೈರಲ್! ವಿಚ್ಛೇದನದ ವದಂತಿಗಳಿಗೆ ಬ್ರೇಕ್?ಆಸೀಸ್ ಕ್ರಿಕೆಟರ್ ಗೆ ಕೊಕೇನ್ ಶಾಕ್: ತಪ್ಪು ಒಪ್ಪಿಕೊಂಡು ನಿಷೇಧ ಪೂರ್ಣಗೊಳಿಸಿದ ಕ್ರಿಸ್ ಲಿನ್!ಧನ್ತೇರಸ್ 2026: ಚಿನ್ನ ಖರೀದಿಗೆ ಶುಭ ಮುಹೂರ್ತ ಯಾವಾಗ? ಬೆಂಗಳೂರು ಸೇರಿ ಪ್ರಮುಖ ನಗರಗಳ ಪೂಜಾ ಸಮಯ ಇಲ್ಲಿದೆಉತ್ತರ ಪ್ರದೇಶದಲ್ಲಿ ಮೂರನೇ ಅವಧಿಗಾಗಿ ಬಿಜೆಪಿಯ ತಂತ್ರ: ಕಲ್ಯಾಣ ಯೋಜನೆ, ಮಹಿಳಾ ಮತ ಮತ್ತು ಯೋಗಿ ವರ್ಚಸ್ಸಿನ ಮೇಲೆ ಭರವಸೆಭಾರತದಲ್ಲಿ ಅತಿ ಹೆಚ್ಚು ಸಕ್ಕರೆ ಉತ್ಪಾದಿಸುವ ಟಾಪ್ 5 ಕಂಪನಿಗಳು ಯಾವುದು ಗೊತ್ತಾ? ಇಲ್ಲಿದೆ ಮಾಹಿತಿ!