LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ನಾಳೆಯಿಂದ ಮನೆ ಮನೆಗೆ BLO ಗಳು ಭೇಟಿ: SIR ಬಗ್ಗೆ ಮಾಹಿತಿ ನೀಡಿದ ರಾಜ್ಯ ಚುನಾವಣಾಧಿಕಾರು ಅನ್ಬುಕುಮಾರ್

ಬೆಂಗಳೂರು: ರಾಜ್ಯದಲ್ಲಿ ನಾಳೆ ಜೂನ್​​ 30ರಿಂದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (SIR) ಆರಂಭವಾಗಲಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್ ತಿಳಿಸಿದ್ದಾರೆ.

ಈ ನಿಟ್ಟಿನಲ್ಲಿ ಆಯೋಗ ಅಗತ್ಯ ತಯಾರಿ ಮಾಡಿಕೊಂಡಿದೆ. ರಾಜ್ಯದಲ್ಲಿ ಪ್ರಸ್ತುತ ಒಟ್ಟು 5,54,32,314 ಮತದಾರಿದ್ದು, ಎಲ್ಲರು ವಿಶೇಷ ಸಮಗ್ರ ಪರಿಷ್ಕರಣೆಗೆ ಒಳಪಡಲಿದ್ದಾರೆ. ಈಗಾಗಲೇ ಶೇ 91.61ನಷ್ಟು ಮತದಾರರು ಮ್ಯಾಪಿಂಗ್‌ಗೆ ಒಳಪಟ್ಟಿದ್ದಾರೆ. 46,52,504 ಮ್ಯಾಪಿಂಗ್‌ನಿಂದ ಹೊರ ಉಳಿದಿದ್ದಾರೆ ಎಂದು ಮಾಹಿತಿ ನೀಡಿದರು.

ನಾಳೆಯಿಂದ ಜುಲೈ 29ರವರೆಗೆ ರಾಜ್ಯದಲ್ಲಿ SIR ಪ್ರಕ್ರಿಯೆ ನಡೆಯುತ್ತೆ. BLOಗಳು ಮನೆ ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹ ಮಾಡುತ್ತಾರೆ. ಆಗಸ್ಟ್​ 5ರಂದು ಮತದಾರರ ಕರಡು ಪಟ್ಟಿ ಬಿಡುಗಡೆ ಮಾಡಲಾಗುವುದು. ಆಗಸ್ಟ್ 5ರಿಂದ ಸೆಪ್ಟೆಂಬರ್ 4ರವರೆಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ಇದೆ. ನಂತರ ಅಕ್ಟೋಬರ್ 7ರಂದು ಅಂತಿಮ ಮತದಾರರ ಪಟ್ಟಿ ಬಿಡುಗಡೆ ಮಾಡಲಾಗುತ್ತೆ ಎಂದು ತಿಳಿಸಿದರು.

ಇನ್ನು ರಾಜ್ಯದಾದ್ಯಂತ 59,050 ಬೂತ್ ಮಟ್ಟದ ಅಧಿಕಾರಿಗಳ ನಿಯೋಜಿಸಲಾಗಿದೆ. 31 ಜಿಲ್ಲಾ ಚುನಾವಣಾಧಿಕಾರಿಗಳು, 4 ಅಪರ ಜಿಲ್ಲಾ ಚುನಾವಣಾಧಿಕಾರಿಗಳು, 224 ನೋಂಣಾಧಿಕಾರಿಗಳು, 336 ಸಹಾಯಕ ನೋಂದಣಾಧಿಕಾರಿಗಳು, 7556 BLOಗಳು, 1,15,112 ಬಿಎಲ್​ಎಗಳ ನೇಮಕ ಮಾಡಲಾಗಿದೆ ಎಂದು ಹೇಳಿದರು.

ನಮೂನೆಯನ್ನು ಏನು ಮಾಡಬೇಕು?
BLOಗಳು ಮನೆ ಮನೆಗೆ ಭೇಟಿ ನೀಡಿ ಗಣತಿ ನಮೂನೆ ವಿತರಣೆ ಮಾಡುತ್ತಾರೆ. ಭರ್ತಿ ಮಾಡಿದ ನಮೂನೆಗಳನ್ನು BLOಗಳು ಡಿಜಿಟಲೀಕರಣಕ್ಕೆ ಕಳಿಸುತ್ತಾರೆ. ಮನೆಗೆ ಅರ್ಜಿ ನೀಡಿದ ಬಳಿಕ ಮನೆಗಳಿಗೆ ಸ್ಟಿಕ್ಕರ್​ ಅಂಟಿಸಲಾಗುತ್ತದೆ. ಎನ್ಯೂಮರೇಷನ್ ಫಾರ್ಮ್ ಭರ್ತಿ ದಯವಿಟ್ಟು ಬಿಎಲ್​ಒಗಳಿಗೆ ವಾಪಸ್ ಕೊಡಬೇಕು. ಭರ್ತಿ ಮಾಡಿದ ನಮೂನೆ ಪಡೆಯಲು ಅಗತ್ಯವಿದ್ದರೆ ಕನಿಷ್ಟ ಮೂರು ಬಾರಿ ಅಧಿಕಾರಿಗಳು ಮನೆಗೆ ಭೇಟಿ ನೀಡುತ್ತಾರೆ. ರಾಜ್ಯದಲ್ಲಿ 1 ಕೋಟಿ 88 ಲಕ್ಷ ಮನೆಗಳಿವೆ ಎಂದರು.

ಬಿಎಲ್​ಒ, BLAಗಳ ನಂಬರ್ ಕೂಡ ಆಯೋಗದ ವೆಬ್​ಸೈಟ್​ನಲ್ಲಿದೆ. ಬಿಎಲ್​ಒಗಳಿಗೆ ಯಾವುದೇ ದಾಖಲೆ ಕೊಡಬಾರದು. SIR ಬಗ್ಗೆ ಪ್ರತಿದಿನ ಅಪ್​ಡೇಟ್ ಕೊಡುತ್ತೇವೆ. ಎಷ್ಟು ಮನೆಗೆ ಭೇಟಿ ಕೊಟ್ಟಿದ್ದೇವೆ, ಎಷ್ಟು ಮತದಾರರು ಮೃತಪಟ್ಟಿದ್ದಾರೆ. ಎಷ್ಟು ಫಾರ್ಮ್ ಕೊಟ್ಟಿದ್ದೇವೆ, ಎಷ್ಟು ಮನೆಗೆ ಭೇಟಿ ಕೊಟ್ಟಿದ್ದೇವೆ, ಎಷ್ಟು ಮತದಾರರು ಮೃತಪಟ್ಟಿದ್ದಾರೆ ಹೀಗೆ ಪ್ರತಿಯೊಂದು ಮಾಹಿತಿಯನ್ನು ಅಪ್​ಡೇಟ್ ಮಾಡುತ್ತೇವೆ. ಪ್ರತಿಯೊಂದು ಪಂಚಾಯಿತಿ ವ್ಯಾಪ್ತಿಯಲ್ಲಿ ವೋಟರ್ ಫೆಸಿಲಿಟಿ ಸೆಂಟರ್ ಇರುತ್ತೆ. ತಾಲೂಕು ವ್ಯಾಪ್ತಿಯಲ್ಲಿ ಬಿಎಲ್​ಒ ಅನುಕೂಲಕ್ಕಾಗಿ ಸೆಂಟರ್ ಇರುತ್ತೆ. ಇನ್ನು SIR ಸಂದರ್ಭದಲ್ಲಿ ನೆಟ್​ವರ್ಕ್, ಟೆಕ್ನಿಕಲ್‌ ಸಮಸ್ಯೆಯಾದಂತೆ ಸಿದ್ಧತೆಯಾಗಿದೆ. ನೆಟ್​ವರ್ಕ್ ಇಲ್ಲದ ಕಡೆ ಬಿಎಲ್​ಒಗಳಿಗೆ ವೈ-ಫೈ ಸೌಲಭ್ಯ ಕೊಟ್ಟಿದ್ದೇವೆ ಎಂದು ಹೇಳಿದರು.

ಎನ್ಯೂಮರೇಷನ್ ಫಾರ್ಮ್​ಗೆ ಆ ಕುಟುಂಬದ ಯಾರು ಬೇಕಾದರು ಸಹಿ ಹಾಕಬಹುದು. ಆ ಅರ್ಜಿಯ ಮತದಾರ ಹೊರಗಡೆ ಹೋಗಿದ್ದರೆ, ಗಂಡನ ಪರವಾಗಿ ಹೆಂಡತಿ ಅಥವಾ ಅಕ್ಕನ ಪರವಾಗಿ ಸಹೋದರ ಸಹಿ ಮಾಡಬಹುದು. BLOಗಳಿಗೆ ನಿಗದಿತ ಸಮಯ ಇಲ್ಲ. ಮ್ಯಾಪಿಂಗ್ ಮಾಡಿದ ಸಮಯವನ್ನ ಆಧರಿಸಿ ಕೆಲವೊಂದು ಏರಿಯಾ, ಜಿಲ್ಲೆಗಳಿಗೆ ಅನುಗುಣವಾಗಿ ನಿರ್ಧಾರ ಮಾಡುತ್ತಾರೆ ಎಂದು ಮಾಹಿತಿ ನೀಡಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ