LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

BPL ಕಾರ್ಡ್‌ಗಳ e-Kyc ಪರಿಷ್ಕರಣೆ : ಸರ್ಕಾರದ ಹೊಸ ಆದೇಶದಿಂದ ಜನಸಾಮಾನ್ಯರಿಗೆ ತಪ್ಪದ ಗೋಳಾಟ

ಬೆಂಗಳೂರು: ರಾಜ್ಯದಲ್ಲಿ ಅನರ್ಹ ಬಿಪಿಎಲ್ ಕಾರ್ಡ್‌ಗಳಿಗೆ ಕತ್ತರಿ ಹಾಕುವ ಪ್ರಕ್ರಿಯೆಯನ್ನು ಮತ್ತಷ್ಟು ವಿಸ್ತರಿಸಿರುವ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯು, ಕಳೆದ ಒಂದು ವರ್ಷದ ಅವಧಿಯಲ್ಲಿ ಇ-ಕೆವೈಸಿ ಮಾಡಿಸಿಕೊಂಡವರನ್ನೂ ಕಡ್ಡಾಯವಾಗಿ ಮರುಪರಿಶೀಲನೆಗೆ ಒಳಪಡಿಸಿದೆ. ಸರ್ಕಾರದ ಈ ದಿಢೀರ್ ನಿರ್ಧಾರದಿಂದ ಲಕ್ಷಾಂತರ ಪಡಿತರದಾರರು ಮತ್ತೊಮ್ಮೆ ನ್ಯಾಯಬೆಲೆ ಅಂಗಡಿಗಳ ಮುಂದೆ ಸರತಿ ಸಾಲಿನಲ್ಲಿ ನಿಲ್ಲುವ ಅಥವಾ ಮೊಬೈಲ್ ಆ್ಯಪ್‌ಗಳ ಮೊರೆ ಹೋಗುವ ಅನಿವಾರ್ಯತೆಗೆ ಸಿಲುಕಿದ್ದಾರೆ.

ಅನರ್ಹರ ಪಾಲಾಗುತ್ತಿದ್ದ ಉಚಿತ ಪಡಿತರವನ್ನು ತಡೆಯಲು ಕೇಂದ್ರ ಸರ್ಕಾರದ ಸೂಚನೆಯಂತೆ ಈ ಪ್ರಕ್ರಿಯೆ ಕೈಗೆತ್ತಿಕೊಳ್ಳಲಾಗಿದೆ ಎಂದು ಸರ್ಕಾರ ಸಮರ್ಥಿಸಿಕೊಂಡಿದೆ. ನಕಲಿ ಮತ್ತು ಅಕ್ರಮ ಕಾರ್ಡ್‌ಗಳ ರದ್ದತಿ ಕ್ರಮ ಸ್ವಾಗತಾರ್ಹವಾದರೂ, ಪದೇಪದೆ ಇ-ಕೆವೈಸಿ ಹೆಸರಿನಲ್ಲಿ ಸಾರ್ವಜನಿಕರನ್ನು ಅಲೆದಾಡಿಸುತ್ತಿರುವುದು ಸರಿಯಲ್ಲ ಎಂಬ ಆಕ್ಷೇಪ ವ್ಯಕ್ತವಾಗಿದೆ. ವಿವಿಧ ಕೆಲಸಗಳ ನಿಮಿತ್ತ ಹೊರೂರುಗಳಲ್ಲಿ ನೆಲೆಸಿರುವವರು ತಮ್ಮ ಕೆಲಸ-ಕಾರ್ಯಗಳನ್ನು ಬಿಟ್ಟು ರಜೆ ಹಾಕಿ ಊರಿಗೆ ಬಂದು ದಿನಗಟ್ಟಲೇ ಕಾಯಬೇಕಾದ ದುಸ್ಥಿತಿ ನಿರ್ಮಾಣವಾಗಿದೆ.

ಸಮಸ್ಯೆ ನಿವಾರಣೆಗೆ ಸರ್ಕಾರ ಮೊಬೈಲ್ ಆ್ಯಪ್ ಬಿಡುಗಡೆ ಮಾಡಿದ್ದರೂ, ತಾಂತ್ರಿಕ ದೋಷಗಳು ಮತ್ತು ಸರ್ವರ್ ಸಮಸ್ಯೆಯಿಂದಾಗಿ ಮನೆಯಲ್ಲಿ ಕುಳಿತು ಪ್ರಕ್ರಿಯೆ ಪೂರ್ಣಗೊಳಿಸುವುದು ಕಷ್ಟಕರವಾಗಿದೆ. ಇದರೊಂದಿಗೆ ಕೆಲವು ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಿರುವ ದೂರುಗಳೂ ಕೇಳಿಬಂದಿವೆ. ಈಗಾಗಲೇ ಚುನಾವಣೆ ಸೇರಿದಂತೆ ನಾನಾ ಸರ್ಕಾರಿ ಕೆಲಸಗಳಿಗೆ ಇ-ಕೆವೈಸಿ ಮಾಡಿಸಿ ಬೇಸತ್ತಿರುವ ಜನರಿಗೆ, ಈಗ ವರ್ಷದ ಹಿಂದಷ್ಟೇ ಕೆವೈಸಿ ಮಾಡಿದ್ದರೂ ಮತ್ತೆ ಪರಿಶೀಲನೆ ಕಡ್ಡಾಯಗೊಳಿಸಿರುವುದು ಗಾಯದ ಮೇಲೆ ಬರೆ ಎಳೆದಂತಾಗಿದೆ.

ಮುಂದಿನ ದಿನಗಳಲ್ಲಿ ಇಂತಹ ಗೊಂದಲಗಳನ್ನು ತಪ್ಪಿಸಲು ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕಿದೆ. ಕಾರ್ಡ್‌ ವಿತರಿಸಿದ ಬಳಿಕ ಜರಡಿ ಹಿಡಿದು ಸಾರ್ವಜನಿಕರನ್ನು ಸತಾಯಿಸುವ ಬದಲು, ಆರಂಭಿಕ ಹಂತದಲ್ಲಿಯೇ ನೈಜ ಫಲಾನುಭವಿಗಳನ್ನು ಗುರುತಿಸಿ ಪಡಿತರ ಚೀಟಿ ವಿತರಿಸುವ ಪ್ರಾಮಾಣಿಕ ಕಾರ್ಯವನ್ನು ಸಂಬಂಧಿತ ಇಲಾಖೆಗಳು ಮಾಡಬೇಕಿದೆ ಎಂದು ಸಾರ್ವಜನಿಕ ವಲಯದಲ್ಲಿ ಒತ್ತಾಯ ಕೇಳಿಬಂದಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುಂಬೈ ಅಂತರ ಶಾಲಾ ಬಾಸ್ಕೆಟ್‌ಬಾಲ್ ಧಮಾಕಾ: ಡಾನ್ ಬೊಸ್ಕೊ ಮಣಿಸಿ ಟ್ರೋಫಿ ಎತ್ತಿಹಿಡಿದ ಅಂಡೇರಿಯಾ ಎಂಪಿಎಸ್!Motorola Signature 27 Snapdragon 8 Elite Extreme Gen 6 ಮತ್ತು 200MP ಟೆಲಿಫೋಟೋ ಲೆನ್ಸ್‌ನೊಂದಿಗೆ ಅನಾವರಣಬಾಲಿವುಡ್ ಅಂಗಳದಲ್ಲಿ ಹೊಸ ಲವ್ ಸ್ಟೋರಿ: ಗೆಳತಿ ಜೊತೆ ಮನೀಶ್ ಮಲ್ಹೋತ್ರಾ ಪಾರ್ಟಿಯಲ್ಲಿ ಮಾಧುರಿ ದೀಕ್ಷಿತ್ ಮಗ!ಬ್ಯಾಂಕ್ ಲಾಕರ್’ ನಲ್ಲಿ ಇಟ್ಟಿದ್ದ ₹47 ಲಕ್ಷದ ಚಿನ್ನಾಭರಣ ನಾಪತ್ತೆ! ಮಹಿಳೆಯ ಹೋರಾಟಕ್ಕೆ ಕೊನೆಗೂ ಸಿಕ್ತು ಜಯ!ರಾಮಾಯಣ’ದಲ್ಲಿ ರಾಮನಾಗಿ ರಣಬೀರ್, ರಾವಣನಾಗಿ ಯಶ್; ಇಬ್ಬರಲ್ಲಿ ಶ್ರೀಮಂತ ನಟ ಯಾರು?ಕೈ ಕೈ ಹಿಡಿದು ಬಂದ ಐಶ್ವರ್ಯಾ ರೈ–ಅಭಿಷೇಕ್ ಜೋಡಿ; ರೊಮ್ಯಾಂಟಿಕ್ ಕ್ಷಣ ವೈರಲ್! ವಿಚ್ಛೇದನದ ವದಂತಿಗಳಿಗೆ ಬ್ರೇಕ್?ಆಸೀಸ್ ಕ್ರಿಕೆಟರ್ ಗೆ ಕೊಕೇನ್ ಶಾಕ್: ತಪ್ಪು ಒಪ್ಪಿಕೊಂಡು ನಿಷೇಧ ಪೂರ್ಣಗೊಳಿಸಿದ ಕ್ರಿಸ್ ಲಿನ್!ಧನ್ತೇರಸ್ 2026: ಚಿನ್ನ ಖರೀದಿಗೆ ಶುಭ ಮುಹೂರ್ತ ಯಾವಾಗ? ಬೆಂಗಳೂರು ಸೇರಿ ಪ್ರಮುಖ ನಗರಗಳ ಪೂಜಾ ಸಮಯ ಇಲ್ಲಿದೆಉತ್ತರ ಪ್ರದೇಶದಲ್ಲಿ ಮೂರನೇ ಅವಧಿಗಾಗಿ ಬಿಜೆಪಿಯ ತಂತ್ರ: ಕಲ್ಯಾಣ ಯೋಜನೆ, ಮಹಿಳಾ ಮತ ಮತ್ತು ಯೋಗಿ ವರ್ಚಸ್ಸಿನ ಮೇಲೆ ಭರವಸೆಭಾರತದಲ್ಲಿ ಅತಿ ಹೆಚ್ಚು ಸಕ್ಕರೆ ಉತ್ಪಾದಿಸುವ ಟಾಪ್ 5 ಕಂಪನಿಗಳು ಯಾವುದು ಗೊತ್ತಾ? ಇಲ್ಲಿದೆ ಮಾಹಿತಿ!