LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

BREAKIN: ಶೀಘ್ರದಲ್ಲೇ ಸಾರಿಗೆ ಬಸ್ ಟಿಕೆಟ್ ದರ ಹೆಚ್ಚಳಕ್ಕೆ ನಿರ್ಧಾರ: ಸಚಿವ ಬೈರತಿ ಸುರೇಶ್

ಬೆಂಗಳೂರು: ಸರ್ಕಾರಿ ಸ್ವಾಮ್ಯದ ಸಾರಿಗೆ ನಿಗಮಗಳ ಬಸ್ ಪ್ರಯಾಣ ದರ ಹೆಚ್ಚಳಕ್ಕೆ ಸಂಬಂಧಿಸಿದಂತೆ ನೇಮಕಗೊಂಡಿರುವ ನಿವೃತ್ತ ಐಎಎಸ್ ಅಧಿಕಾರಿ ಅತುಲ್ ತಿವಾರಿ ನೇತೃತ್ವದ ಉನ್ನತ ಮಟ್ಟದ ಸಮಿತಿ ಒಂದೆರಡು ದಿನಗಳಲ್ಲಿ ಸರ್ಕಾರಕ್ಕೆ ವರದಿ ಸಲ್ಲಿಸಲಿದೆ ಎಂದು ಸಾರಿಗೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಬುಧವಾರ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ಉಪಸ್ಥಿತಿಯಲ್ಲಿ ರಾಜಧಾನಿಯ ಸಂಚಾರ ದಟ್ಟಣೆ ನಿಯಂತ್ರಣ, ರಸ್ತೆ ಸುರಕ್ಷತೆ ಹೆಚ್ಚಿಸುವುದು ಹಾಗೂ ಸಂಚಾರಿ ನಿಯಮಗಳ ಉಲ್ಲಂಘನೆಗೆ ಪರಿಣಾಮಕಾರಿಯಾಗಿ ಕಡಿವಾಣ ಹಾಕುವ ಸಂಬಂಧ ನಡೆದ ಸಭೆಯಲ್ಲಿ ಪಾಲ್ಗೊಂಡ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಾರಿಗೆ ನಿಗಮಗಳು ಆರ್ಥಿಕವಾಗಿ ತೀವ್ರ ಸಂಕಷ್ಟ ಎದುರಿಸುತ್ತಿರುವುದರಿಂದ ಪ್ರಯಾಣ ದರವನ್ನು ಹೆಚ್ಚಳ ಮಾಡುವುದು ಅನಿವಾರ್ಯವಾಗಿದೆ ಎಂದು  ತಿಳಿಸಿದರು.

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಕಳೆದ ಒಂದು ವರ್ಷದಲ್ಲಿ ನಾಲ್ಕು ಬಾರಿ ಡೀಸೆಲ್ ಬೆಲೆ ಹೆಚ್ಚಳ ಮಾಡಿದೆ. ಇದರ ಪರಿಣಾಮ ಪ್ರತಿ ಲೀಟರ್ ಡೀಸೆಲ್ ಬೆಲೆ 15 ರಿಂದ 16 ರೂಪಾಯಿ ಹೆಚ್ಚಳವಾಗಿದ್ದು, ನಮ್ಮ ಸಾರಿಗೆ ನಿಗಮಗಳಿಗೆ ವಾರ್ಷಿಕ 8 ಸಾವಿರ ಕೋಟಿ ರೂಪಾಯಿ ನಷ್ಟವಾಗುತ್ತಿದೆ ಎಂದು ಹೇಳಿದರು.

ಸಿಎಂ ಅನುಮೋದನೆ ನಂತರ ನಿರ್ಧಾರ 

ಅತುಲ್ ತಿವಾರಿ ಅವರು ಎಲ್ಲಾ ಸಾರಿಗೆ ನಿಗಮಗಳ ಆರ್ಥಿಕ ಪರಿಸ್ಥಿತಿ ಬಗ್ಗೆ ಅಧ್ಯಯನ ನಡೆಸಿದ್ದು, ವರದಿ ನೀಡಲಿದ್ದಾರೆ. ಆ ವರದಿಯನ್ನು ಸಚಿವ ಸಂಪುಟ ಸಭೆಯಲ್ಲಿಟ್ಟು ಚರ್ಚಿಸಿ, ಮುಖ್ಯಮಂತ್ರಿಗಳ ಅನುಮೋದನೆ ಪಡೆದ ನಂತರ ಪ್ರಯಾಣ ದರವನ್ನು ಪರಿಷ್ಕರಣೆ ಮಾಡಲಾಗುತ್ತದೆ ಎಂದು ಸ್ಪಷ್ಟಪಡಿಸಿದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಾಹಿತಿ ಸುರಕ್ಷತೆಯ ವ್ಯವಸ್ಥೆಗಾಗಿ ಬೆಸ್ಕಾಂಗೆ ISO ಪ್ರಮಾಣಪತ್ರಮಂಗಳೂರು ಎಂಆರ್‌ಪಿಎಲ್‌ನಲ್ಲಿ ಭೀಕರ ಬಾಯ್ಲರ್ ಸ್ಫೋಟ: ಓರ್ವ ಸಾವು, 8 ಮಂದಿಗೆ ಗಾಯಮಂಗಳೂರು MRPL ಸ್ಫೋಟ ದುರಂತಕ್ಕೆ ಸಿಎಂ ಡಿ.ಕೆ ಶಿವಕುಮಾರ್ ಸಂತಾಪ: ಸಮಗ್ರ ತನಿಖೆಗೆ ಆದೇಶಬಾವಿಗೆ ಹಾರಿ ತಾಯಿ-ಮಗಳು ಆತ್ಮಹತ್ಯೆಗೆ ಶರಣುಮಣಿಪಾಲ ಕೆಎಂಸಿ ಆಸ್ಪತ್ರೆ ಕಟ್ಟಡದಿಂದ ಜಿಗಿದು ರೋಗಿ ಆತ್ಮಹತ್ಯೆಗೆ ಯತ್ನ: ಐಸಿಯುನಲ್ಲಿ ಚಿಕಿತ್ಸೆ, ಸ್ಥಿತಿ ಗಂಭೀರ!ಬರ ಪರಿಹಾರ ನೀಡಿಲ್ಲ, ನಾವಿಟ್ಟ ಬೇಡಿಕೆ ಈಡೇರಿಸಿಲ್ಲ, ಜನತಾ ನ್ಯಾಯಾಲಯಕ್ಕೆ ಹೋಗುತ್ತೇವೆ: ಆರ್‌.ಅಶೋಕ್ಸಂಚಾರಿ ನಿಯಮ ಉಲ್ಲಂಘನೆಗೆ ಕಡಿವಾಣ ಹಾಕಲು ಕಠಿಣ ಕ್ರಮ: ಗೃಹ ಸಚಿವ ಪ್ರಿಯಾಂಕ್ ಖರ್ಗೆರಾಜ್ಯದ ಜನತೆಗೆ ಮತ್ತೊಂದು ಶಾಕ್: ಶೀಘ್ರದಲ್ಲೇ KSRTC ಬಸ್ ಟಿಕೆಟ್ ದರ ಹೆಚ್ಚಳವೆಂದ ಸಾರಿಗೆ ಸಚಿವರುಯುವ ಕಾಂಗ್ರೆಸ್ ಅಂತರ ಕಾಲೇಜು ಕ್ರಿಕೆಟ್ ಪಂದ್ಯಾವಳಿ ಟೈಸ್ ಕಾಪಿ ಬಿಡುಗಡೆಗೊಳಿಸಿದ ಅಧ್ಯಕ್ಷ ಮಂಜುನಾಥ್ ಗೌಡಮುಂದಿನ 2 ತಿಂಗಳಲ್ಲಿ ಮಹಿಳೆಯರಿಗೆ ‘ಶಕ್ತಿ ಸ್ಮಾರ್ಟ್ ಕಾರ್ಡ್’ ವಿತರಣೆ: ಸಚಿವ ಬೈರತಿ ಸುರೇಶ್