LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

BREAKING: ಕೆಇಎಯಿಂದ ಪೊಲೀಸ್ ನೇಮಕಾತಿ ಪರೀಕ್ಷೆಯ ಕೀ ಉತ್ತರ ಪ್ರಕಟ

ಬೆಂಗಳೂರು: ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದ ಮತ್ತು ಕಲ್ಯಾಣ ಕರ್ನಾಟಕ ವೃಂದದ ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ (CAR/DAR) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ನಡೆಸಲಾದ ಸ್ಪರ್ಧಾತ್ಮಕ ಪರೀಕ್ಷೆಯ ‘ಕೀ ಉತ್ತರಗಳನ್ನು’ (Key Answers) ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ.

ಸೆಪ್ಟೆಂಬರ್ 06, 2026 ರಂದು ನಡೆದ ಸಾಮಾನ್ಯ ಜ್ಞಾನ ವಿಷಯದ ಸ್ಪರ್ಧಾತ್ಮಕ ಪರೀಕ್ಷೆಯ ಕೀ ಉತ್ತರಗಳನ್ನು ಅಭ್ಯರ್ಥಿಗಳ ಮಾಹಿತಿಗಾಗಿ ಸೆಪ್ಟೆಂಬರ್ 07, 2026 ರಂದು ಪ್ರಕಟಿಸಲಾಗಿದೆ.

https://twitter.com/KEA_karnataka/status/2096938217962709366

ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ 09 ಕೊನೆಯ ದಿನಾಂಕ

ಪ್ರಾಧಿಕಾರ ಪ್ರಕಟಿಸಿರುವ ಕೀ ಉತ್ತರಗಳಿಗೆ ಏನಾದರೂ ಆಕ್ಷೇಪಣೆಗಳಿದ್ದಲ್ಲಿ, ಅಭ್ಯರ್ಥಿಗಳು ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್‌ https://cetonline.karnataka.gov.in/kea/ ನಲ್ಲಿ ಒದಗಿಸಲಾದ ಆನ್‌ಲೈನ್ ಪೋರ್ಟಲ್ ಮೂಲಕ ಸೆಪ್ಟೆಂಬರ್ 09, 2026 ರ ಬೆಳಿಗ್ಗೆ 10:30 ಗಂಟೆಯೊಳಗೆ ಸಲ್ಲಿಸಲು ಅವಕಾಶ ನೀಡಲಾಗಿದೆ.

ಆಕ್ಷೇಪಣೆ ಸಲ್ಲಿಸುವ ನಿಯಮಗಳು

ಆಕ್ಷೇಪಣೆಗಳನ್ನು ಸಲ್ಲಿಸುವಾಗ ಅಭ್ಯರ್ಥಿಗಳು ಪತ್ರಿಕೆಯ ವಿವರ, ಪರೀಕ್ಷಾ ದಿನಾಂಕ, ವರ್ಷನ್ ಕೋಡ್, ಪ್ರಶ್ನೆ ಸಂಖ್ಯೆ ಹಾಗೂ ಸಮರ್ಥನೀಯ ಪೂರಕ ದಾಖಲೆಗಳನ್ನು ಪಿಡಿಎಫ್ (PDF) ರೂಪದಲ್ಲಿ ಅಪ್‌ಲೋಡ್ ಮಾಡಬೇಕಾಗುತ್ತದೆ. ಪ್ರತಿಯೊಂದು ಆಕ್ಷೇಪಣೆಗೆ 25 ರೂಪಾಯಿ ಶುಲ್ಕ ಪಾವತಿಸಬೇಕಿದ್ದು, ಈ ಶುಲ್ಕವನ್ನು ಹಿಂತಿರುಗಿಸಲಾಗುವುದಿಲ್ಲ. ಪ್ರಶ್ನೆ ಸಂಖ್ಯೆ, ವರ್ಷನ್ ಕೋಡ್ ನಮೂದಿಸದ, ಅಪೂರ್ಣ ಅಥವಾ ಆಧಾರರಹಿತವಾದ ಮತ್ತು ಶುಲ್ಕ ಪಾವತಿಸದ ಆಕ್ಷೇಪಣೆಗಳನ್ನು ತಿರಸ್ಕರಿಸಲಾಗುವುದು ಎಂದು ಪ್ರಾಧಿಕಾರ ಸ್ಪಷ್ಟಪಡಿಸಿದೆ. ಸಲ್ಲಿಕೆಯಾದ ಆಕ್ಷೇಪಣೆಗಳನ್ನು ವಿಷಯ ತಜ್ಞರ ಸಮಿತಿಯು ಪರಿಶೀಲಿಸಿ ಅಂತಿಮ ಕೀ ಉತ್ತರಗಳನ್ನು ತೀರ್ಮಾನಿಸಲಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ