LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

BREAKING : ತೋತಾಪುರಿ ಮಾವು ಬೆಳೆಗಾರರಿಗೆ ಕೇಂದ್ರದಿಂದ ಭರ್ಜರಿ ಗುಡ್ ನ್ಯೂಸ್ : ಪ್ರತಿ ಕ್ವಿಂಟಾಲ್’ಗೆ ₹1,750 ಸಹಾಯಧನ ಘೋಷಣೆ !

ನವದೆಹಲಿ: ಮಾವು ಬೆಳೆಗಾರರಿಗೆ ಕೇಂದ್ರ ಸರ್ಕಾರ ಭರ್ಜರಿ ಸಿಹಿ ಸುದ್ದಿ ನೀಡಿದ್ದು, ಪ್ರತಿ ಕ್ವಿಂಟಾಲಿಗೆ ₹1,750 ಸಹಾಯಧನ ಘೋಷಿಸಿದೆ. ಮಾರುಕಟ್ಟೆ ಬೆಲೆ ಕುಸಿತದಿಂದ ಸಂಕಷ್ಟದಲ್ಲಿದ್ದ ರೈತರಿಗೆ ಈ ನಿರ್ಧಾರದಿಂದ ನೇರ ಆರ್ಥಿಕ ನೆರವು ಸಿಗಲಿದ್ದು, ಕೃಷಿ ಕ್ಷೇತ್ರದಲ್ಲಿ ಸ್ಥಿರತೆ ತರಲು ಈ ಕ್ರಮ ಕೈಗೊಳ್ಳಲಾಗಿದೆ.

ಈ ನಿರ್ಧಾರದಿಂದ ಮಾರುಕಟ್ಟೆ ದರ ಕುಸಿತದಿಂದ ಸಂಕಷ್ಟಕ್ಕೆ ಒಳಗಾಗುತ್ತಿದ್ದ ರೈತರಿಗೆ ನೇರ ಆರ್ಥಿಕ ನೆರವು ಸಿಗಲಿದೆ ಎಂದು ಸರ್ಕಾರ ತಿಳಿಸಿದೆ. ಕೃಷಿ ಕ್ಷೇತ್ರದಲ್ಲಿ ಸ್ಥಿರತೆ ತರಲು ಹಾಗೂ ರೈತರ ಆದಾಯ ಹೆಚ್ಚಿಸಲು ಈ ಕ್ರಮ ಕೈಗೊಳ್ಳಲಾಗಿದೆ. ಮಾವು ಬೆಳೆ ಹೆಚ್ಚು ಉತ್ಪಾದನೆಯಾಗುವ ಸಮಯದಲ್ಲಿ ಬೆಲೆ ಇಳಿಕೆಯಾಗುವ ಸಮಸ್ಯೆ ಎದುರಾಗುತ್ತದೆ. ಇಂತಹ ಸಂದರ್ಭದಲ್ಲಿ ಈ ಸಹಾಯಧನ ರೈತರಿಗೆ ದೊಡ್ಡ ಪರಿಹಾರವಾಗಲಿದೆ ಎಂದು ಕೃಷಿ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಈ ಕುರಿತು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿದ್ದಾರೆ.

ಪ್ರಹ್ಲಾದ್ ಜೋಶಿ ಟ್ವೀಟ್

ಕರ್ನಾಟಕದಲ್ಲಿ ಹವಾಮಾನ ವೈಪರೀತ್ಯ ಹಾಗೂ ಮಾರುಕಟ್ಟೆಯಲ್ಲಿ ಬೆಲೆ ಕುಸಿತದಿಂದ ತೋತಾಪುರಿ ಮಾವು ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳಿಗೆ ಸ್ಪಂದಿಸುವಂತೆ ಕೇಂದ್ರ ಕೃಷಿ ಸಚಿವರಾದ ಶ್ರೀ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಪತ್ರ ಬರೆದು ಬೆಲೆ ಕೊರತೆ ಪಾವತಿ ಯೋಜನೆ (PDPS) ಅಡಿಯಲ್ಲಿ ಬೆಂಬಲ ನೀಡುವಂತೆ ನಾನು ಮನವಿ ಮಾಡಿದ್ದೆ. ನನ್ನ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವರು ಮಾರುಕಟ್ಟೆ ಹಸ್ತಕ್ಷೇಪ ಯೋಜನೆ (Market Intervention Scheme – MIS) ಅಡಿಯಲ್ಲಿ 1,30,000 ಮೆಟ್ರಿಕ್ ಟನ್ ತೋತಾಪುರಿ ಮಾವಿಗೆ ಪ್ರತಿ ಕ್ವಿಂಟಾಲ್‌ಗೆ ₹1,750 ರೈತರಿಗೆ ಸಹಾಯಧನವನ್ನು ನೀಡಲು ಅನುಮೋದನೆ ನೀಡಿದ್ದಾರೆ. ರಾಜ್ಯದ ಮಾವು ಬೆಳೆಗಾರರ ಹಿತಾಸಕ್ತಿಯನ್ನು ಕಾಪಾಡಲು ಅಗತ್ಯ ಕ್ರಮ ಕೈಗೊಂಡಿರುವ ಕೇಂದ್ರ ಕೃಷಿ ಸಚಿವರಿಗೆ ಹೃತ್ಪೂರ್ವಕ ಧನ್ಯವಾದಗಳು. ಈ ನಿರ್ಧಾರವು ಸಾವಿರಾರು ರೈತ ಕುಟುಂಬಗಳಿಗೆ ನೆರವಾಗಲಿದ್ದು, ಅವರ ಆರ್ಥಿಕ ಸ್ಥಿರತೆ ಮತ್ತು ಆತ್ಮವಿಶ್ವಾಸವನ್ನು ಹೆಚ್ಚಿಸಲಿದೆ. ಸದಾ ರೈತರ ಕಲ್ಯಾಣಕ್ಕೆ ಬದ್ಧವಾಗಿರುವ ಪ್ರಧಾನಮಂತ್ರಿ @narendramodi ನರೇಂದ್ರ ಮೋದಿ ಅವರಿಗೆ ಹಾಗೂ ಕೃಷಿ ಸಚಿವ ಶ್ರೀ ಶಿವರಾಜಸಿಂಗ್ ಚವ್ಹಾಣ @ChouhanShivrajಅವರಿಗೆ ಕರ್ನಾಟಕದ ಸಮಸ್ತ ರೈತರ ಪರವಾಗಿ ಧನ್ಯವಾದಗಳು ಎಂದು ಟ್ವೀಟ್ ಮಾಡಿದ್ದಾರೆ.

ಈ ನಿರ್ಧಾರದಿಂದ ದೇಶದಾದ್ಯಂತ ಮಾವು ಬೆಳೆಗಾರರಿಗೆ ಮಾರುಕಟ್ಟೆ ಬೆಲೆ ಕುಸಿತದ ಸಂದರ್ಭದಲ್ಲಿ ಸಹಾಯವಾಗಲಿದೆ ಎಂದು ಸರ್ಕಾರ ತಿಳಿಸಿದೆ. ರೈತರ ಆದಾಯವನ್ನು ಸ್ಥಿರಗೊಳಿಸುವುದು ಹಾಗೂ ಕೃಷಿ ಕ್ಷೇತ್ರದಲ್ಲಿ ನಷ್ಟವನ್ನು ಕಡಿಮೆ ಮಾಡುವುದೇ ಈ ಕ್ರಮದ ಮುಖ್ಯ ಉದ್ದೇಶವಾಗಿದೆ.

ಮಾರುಕಟ್ಟೆಯಲ್ಲಿ ಬೆಲೆ ಇಳಿಕೆಯಾಗುವ ಸಂದರ್ಭದಲ್ಲಿ ಸರ್ಕಾರದ ಬೆಂಬಲ ಖರೀದಿ ವ್ಯವಸ್ಥೆಯಿಂದ ರೈತರಿಗೆ ನ್ಯಾಯಸಮ್ಮತ ದರ ದೊರಕುವ ನಿರೀಕ್ಷೆಯಿದೆ. ವಿಶೇಷವಾಗಿ ಮಾವು ಬೆಳೆ ಹೆಚ್ಚು ಆಗುವ ರಾಜ್ಯಗಳಾದ ಉತ್ತರ ಪ್ರದೇಶ, ಮಹಾರಾಷ್ಟ್ರ, ಕರ್ನಾಟಕ ಸೇರಿದಂತೆ ಹಲವು ಕಡೆ ರೈತರಿಗೆ ಇದರಿಂದ ಲಾಭವಾಗಲಿದೆ.ಕೃಷಿ ತಜ್ಞರ ಪ್ರಕಾರ, ಈ ರೀತಿಯ ಬೆಂಬಲ ಬೆಲೆ ಕ್ರಮವು ರೈತರ ಆತ್ಮವಿಶ್ವಾಸವನ್ನು ಹೆಚ್ಚಿಸುವುದರ ಜೊತೆಗೆ ಕೃಷಿ ಉತ್ಪಾದನೆಯನ್ನು ಉತ್ತೇಜಿಸುತ್ತದೆ.ರೈತ ಸಂಘಟನೆಗಳು ಈ ನಿರ್ಧಾರವನ್ನು ಸ್ವಾಗತಿಸಿದ್ದು, ಇನ್ನಷ್ಟು ಬೆಳೆಗಳಿಗೆ ಇಂತಹ ಬೆಂಬಲ ಬೆಲೆ ನೀಡಬೇಕೆಂದು ಒತ್ತಾಯಿಸಿವೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿಮಕ್ಕಳ ಮನಸ್ಸು, ಮೆದುಳಿನ ಶಕ್ತಿಗೆ ದಾರಿದೀಪ ಈ ಪುಸ್ತಕ: ತಪ್ಪದೇ ಖರೀದಿಸಿ, ನಿಮ್ಮ ಮಕ್ಕಳಿಗೆ ತಪ್ಪದೇ ಓದಿಸಿ!ಹಿಂದೂಗಳ ಆಚರಣೆಗೆ ಸರ್ಕಾರ ಅಡ್ಡಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಕಾಂಗ್ರೆಸ್ ಪಕ್ಷ ಸಂಘಟನೆ ಬಲವರ್ಧನೆಗೆ 'ಕೆಪಿಸಿಸಿ ಕನೆಕ್ಟ್ ಸೆಂಟರ್' ಸ್ಥಾಪನೆ: ಪದಾಧಿಕಾರಿಗಳ ನೇಮಕ