ಬೆಂಗಳೂರು: ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, : ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಲಾಗಿದೆ . ರಾಜ್ಯದಲ್ಲಿ ಉಂಟಾಗಿರುವ ಬರ ಪರಿಸ್ಥಿತಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನೆರವು ಪಡೆಯಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ಹೇಳಿದರು.
ಬರ ಪರಿಹಾರಕ್ಕಾಗಿ ಕೇಂದ್ರದ ಮೊರೆ ಹೋಗಲಿದ್ದೇವೆ. ಈ ಕುರಿತು ಕೇಂದ್ರ ಸಚಿವರನ್ನು ಭೇಟಿಯಾಗಿ ರಾಜ್ಯದ ಪರಿಸ್ಥಿತಿಯನ್ನು ವಿವರಿಸಿ ಅಗತ್ಯ ಪರಿಹಾರ ಹಾಗೂ ನೆರವು ನೀಡುವಂತೆ ಮನವಿ ಮಾಡಲಾಗುವುದು ಎಂದು ಡಿಸಿಎಂ ಡಾ. ಜಿ. ಪರಮೇಶ್ವರ್ ತಿಳಿಸಿದರು.
ಬರದಿಂದಾಗಿ ರೈತರು ಹಾಗೂ ಗ್ರಾಮೀಣ ಪ್ರದೇಶದ ಜನರು ಎದುರಿಸುತ್ತಿರುವ ಸಮಸ್ಯೆಗಳನ್ನು ಗಮನದಲ್ಲಿಟ್ಟುಕೊಂಡು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.