ಬೆಂಗಳೂರು : ಬೆಂಗಳೂರಿಗೆ ಬರುತ್ತಿದ್ದ ವಿಮಾನಕ್ಕೆ ಹಕ್ಕಿ ಒಂದು ಡಿಕ್ಕಿ ಹೊಡೆದಿದೆ. ವಿಶಾಖಪಟ್ಟಣಂನಿಂದ ಬೆಂಗಳೂರಿಗೆ ಬರುತ್ತಿದ್ದ ಇಂಡಿಯಾ ವಿಮಾನಕ್ಕೆ ಹಕ್ಕಿ ಡಿಕ್ಕಿ ಹೊಡೆದ ಕಾರಣ ವಿಮಾನದಲ್ಲಿ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡಿದೆ.
ತಾಂತ್ರಿಕ ಸಮಸ್ಯೆ ನಡುವೆ ಕೂಡ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪೈಲಟ್ ಸೇಫ್ ಆಗಿ ವಿಮಾನವನ್ನು ಲ್ಯಾಂಡಿಂಗ್ ಮಾಡಲಾಗಿದೆ. ತಾಂತ್ರಿಕ ಸಮಸ್ಯೆ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣದ V49 ಸ್ಟಾಂಡ್ ನಲ್ಲಿ ವಿಮಾನ ನಿಂತಿದೆ. 148 ಪ್ರಯಾಣಿಕರನ್ನು ಈ ಒಂದು ಇಂಡಿಯಾ ಎಕ್ಸ್ಪ್ರೆಸ್ ವಿಮಾನ ಸೇಫ್ ಆಗಿ ಲ್ಯಾಂಡಿಂಗ್ ಆಗಿದ್ದು, ಪೈಲಟ್ ಸಮಯ ಪ್ರಜ್ಞೆಯಿಂದ 148 ಪ್ರಯಾಣಿಕರ ಜೀವ ಉಳಿದಿದೆ.