LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

BREAKING : ರಾಜ್ಯದಲ್ಲಿ ಖಾಸಗಿ ಬಸ್ ಟಿಕೆಟ್ ದರ ಶೇ.20-30ರಷ್ಟು ಏರಿಕೆ ; ಇಂದು ಮಧ್ಯರಾತ್ರಿಯಿಂದಲೇ ಜಾರಿ |Bus Ticket price hike

ಬೆಂಗಳೂರು : ರಾಜ್ಯದ ಜನತೆಗೆ ಬೆಲೆ ಏರಿಕೆಯ ಮತ್ತೊಂದು ಬರೆ ಬಿದ್ದಿದೆ. ಮಧ್ಯಪ್ರಾಚ್ಯದ ಬಿಕ್ಕಟ್ಟಿನಿಂದಾಗಿ ಇಂಧನ ದರ ಏರಿಕೆಯಾಗುತ್ತಿರುವ ಬೆನ್ನಲ್ಲೇ, ರಾಜ್ಯದ ಖಾಸಗಿ ಬಸ್ ಮಾಲೀಕರು ಇಂದಿನಿಂದಲೇ ಜಾರಿಗೆ ಬರುವಂತೆ ಟಿಕೆಟ್ ದರವನ್ನು ಶೇಕಡಾ 20 ರಿಂದ 30 ರಷ್ಟು ಹೆಚ್ಚಿಸಿದ್ದಾರೆ. ಡೀಸೆಲ್ ಬೆಲೆಯಲ್ಲಿ 3 ರೂಪಾಯಿ ಏರಿಕೆಯಾದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಬೆಂಗಳೂರಿನಿಂದ ರಾಜ್ಯದ ವಿವಿಧ ಪ್ರಮುಖ ನಗರಗಳಿಗೆ ಸಂಚರಿಸುವ ಪ್ರಯಾಣಿಕರ ಜೇಬಿಗೆ ಈಗ ನೇರ ಹೊರೆ ಬೀಳಲಿದೆ.

ಹೌದು, ಮಧ್ಯಪ್ರಾಚ್ಯದ  ಬಿಕ್ಕಟ್ಟಿನಿಂದಾಗಿ ಕಚ್ಚಾ ತೈಲ ದರ ಏರಿಕೆಯಾಗಿದ್ದು, ಭಾರತದಲ್ಲಿ ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 3 ರೂಪಾಯಿ ಹೆಚ್ಚಳವಾಗಿದೆ. ಇದರ ಬೆನ್ನಲ್ಲೇ ರಾಜ್ಯದ ಖಾಸಗಿ ಬಸ್ ಮಾಲೀಕರು ಅನಿವಾರ್ಯವಾಗಿ ಬಸ್ ಟಿಕೆಟ್ ದರವನ್ನು ಏರಿಸಲು ನಿರ್ಧರಿಸಿದ್ದಾರೆ.

ಹೌದು. ಖಾಸಗಿ ಬಸ್ ಟಿಕೆಟ್ ದರವನ್ನು ಶೇಕಡಾ 20 ರಿಂದ 30 ರಷ್ಟು ಹೆಚ್ಚಳ ಮಾಡಲು ನಿರ್ಧರಿಸಲಾಗಿದೆ. ಇಂದು (ಮೇ 15) ಮಧ್ಯರಾತ್ರಿಯಿಂದಲೇ ಹೊಸ ದರ ಅನ್ವಯವಾಗಲಿದೆ ಎಂದು ಹೇಳಲಾಗುತ್ತಿದೆ. ಈಗಾಗಲೇ ಟಿಕೆಟ್ ಕಾಯ್ದಿರಿಸಿದವರಿಗೆ ಹಳೆಯ ದರವೇ ಇರಲಿದೆ. ಹೊಸದಾಗಿ ಬುಕ್ ಮಾಡುವವರಿಗೆ ಹೆಚ್ಚಿನ ದರ ಅನ್ವಯವಾಗಲಿದೆ.

ಪ್ರಮುಖ ನಗರಗಳ ನಡುವಿನ ಪರಿಷ್ಕೃತ ದರ ಪಟ್ಟಿ (ನಾನ್ ಎಸಿ ಸ್ಲೀಪರ್ ಬಸ್)

ಡೀಸೆಲ್ ದರ ಏರಿಕೆಯ ನಂತರ ಪ್ರಮುಖ ನಗರಗಳ ನಡುವಿನ ಟಿಕೆಟ್ ಬೆಲೆ ಈ ಕೆಳಗಿನಂತೆ ಬದಲಾಗಲಿದೆ:

ಮಾರ್ಗ (ಬೆಂಗಳೂರಿನಿಂದ)ಹಳೆಯ ದರ (ಅಂದಾಜು)ಹೊಸ ದರ (ಅಂದಾಜು)
ಬೆಳಗಾವಿ₹ 1,000₹ 1,200
ಮಂಗಳೂರು₹ 900₹ 1,150
ಮಡಿಕೇರಿ₹ 700₹ 900
ಹುಬ್ಬಳ್ಳಿ₹ 900₹ 1,050
ಕಲಬುರ್ಗಿ₹ 1,200₹ 1,400
ಬಳ್ಳಾರಿ₹ 800₹ 950

ಬಸ್ ಮಾಲೀಕರ ಸಂಘದ ಸ್ಪಷ್ಟನೆ

ಖಾಸಗಿ ಬಸ್ ಮಾಲೀಕರ ಸಂಘದ ಅಧ್ಯಕ್ಷ ನಟರಾಜ್ ಶರ್ಮಾ ಈ ಕುರಿತು ಮಾತನಾಡುತ್ತಾ:”ಡೀಸೆಲ್ ಬೆಲೆ ಏರಿಕೆಯಿಂದಾಗಿ ದರ ಹೆಚ್ಚಳ ಮಾಡುವುದು ಅನಿವಾರ್ಯವಾಗಿದೆ. ಈಗಾಗಲೇ ನಾವು ನಷ್ಟದಲ್ಲಿದ್ದೇವೆ. ಒಂದು ವೇಳೆ ಸರ್ಕಾರ ಖಾಸಗಿ ವಾಹನಗಳ ಮೇಲಿನ ರಸ್ತೆ ತೆರಿಗೆಯನ್ನು (Road Tax) ಕಡಿತಗೊಳಿಸಿದರೆ, ನಾವು ಕೂಡ ಟಿಕೆಟ್ ದರವನ್ನು ಇಳಿಸಲು ಸಿದ್ಧರಿದ್ದೇವೆ.”ಎಂದರು.

ಗಮನಿಸಿ: ಮಾರ್ಗಗಳಿಗೆ ಅನುಗುಣವಾಗಿ ದರ ಏರಿಕೆಯಲ್ಲಿ ಸಣ್ಣ ಪ್ರಮಾಣದ ವ್ಯತ್ಯಾಸಗಳಿರಬಹುದು. ಪ್ರಯಾಣಿಕರು ಪ್ರಯಾಣಿಸುವ ಮುನ್ನ ಲೇಟೆಸ್ಟ್ ದರಗಳನ್ನು ಪರಿಶೀಲಿಸಿಕೊಳ್ಳುವುದು ಒಳಿತು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ