LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

BREAKING : ತಮಿಳುನಾಡಿನಲ್ಲಿ ‘ಮದ್ಯ’ ಖರೀದಿಸಲು ಇನ್ಮುಂದೆ 21 ವರ್ಷ ಕಡ್ಡಾಯ ; ಸಿಎಂ ದಳಪತಿ ವಿಜಯ್ ಆದೇಶ

ತಮಿಳುನಾಡು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಸಿ. ಜೋಸೆಫ್ ವಿಜಯ್ ಅವರು ಮದ್ಯ ಮಾರಾಟದ ಮೇಲೆ ಸಮರ ಸಾರಿದ್ದಾರೆ.  ಸಾರ್ವಜನಿಕ ಹಿತದೃಷ್ಟಿಯಿಂದ ಮದ್ಯದ ಅಂಗಡಿಗಳ ಮೇಲೆ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೆ ತರುತ್ತಿರುವ ವಿಜಯ್ ಸರ್ಕಾರ, ಇದೀಗ ವಯಸ್ಸಿನ ತಪಾಸಣೆ ಕಡ್ಡಾಯಗೊಳಿಸಿರುವುದು ಮತ್ತು ಅಂಗಡಿಗಳ ಅವಧಿ ಕಡಿತಕ್ಕೆ ಮುಂದಾಗಿರುವುದು ದೊಡ್ಡ ಮಟ್ಟದ ಸಂಚಲನ ಮೂಡಿಸಿದೆ.

ರಾಜ್ಯದಲ್ಲಿ ಮದ್ಯಪಾನಕ್ಕೆ ನಿಗದಿಪಡಿಸಿರುವ 21 ವರ್ಷದ ಮಿತಿಯನ್ನು ಕಟ್ಟುನಿಟ್ಟಾಗಿ ಪಾಲಿಸಲು ಸೂಚಿಸಲಾಗಿದೆ. ಅನುಮಾನ ಬಂದಲ್ಲಿ ಟಾಸ್ಮಾಕ್ ಸಿಬ್ಬಂದಿ ಕಡ್ಡಾಯವಾಗಿ ಗುರುತಿನ ಚೀಟಿಗಳನ್ನು (ID Proof) ಪರಿಶೀಲಿಸಿಯೇ ಮದ್ಯ ಮಾರಾಟ ಮಾಡಬೇಕು.ಪ್ರಸ್ತುತ ರಾತ್ರಿ 10 ಗಂಟೆಯವರೆಗೆ ಇರುವ ಮದ್ಯದ ಅಂಗಡಿಗಳ ಅವಧಿಯನ್ನು ರಾತ್ರಿ 8 ಗಂಟೆಗೆ ಇಳಿಸುವ ಪ್ರಸ್ತಾವನೆ ಸರ್ಕಾರದ ಮುಂದಿದ್ದು, ಶೀಘ್ರದಲ್ಲೇ ಅಧಿಕೃತ ಆದೇಶ ಹೊರಬೀಳುವ ಸಾಧ್ಯತೆಯಿದೆ. . ಗ್ರಾಹಕರ ವಯಸ್ಸಿನ ಬಗ್ಗೆ ಸಂಶಯವಿದ್ದರೆ ಟಾಸ್ಮಾಕ್ ಸಿಬ್ಬಂದಿಯು ಕಡ್ಡಾಯವಾಗಿ ಆಧಾರ್ ಕಾರ್ಡ್, ಚಾಲನಾ ಪರವಾನಗಿ (Driving License) ಅಥವಾ ಇತರ ಸರ್ಕಾರಿ ಗುರುತಿನ ಚೀಟಿಗಳನ್ನು ಪರಿಶೀಲಿಸಬೇಕು ಎಂದು ಆದೇಶಿಸಲಾಗಿದೆ.

ಬೃಹತ್ ಕಾರ್ಯಾಚರಣೆ: ಈಗಾಗಲೇ ಶಾಲೆ, ಕಾಲೇಜು ಮತ್ತು ಧಾರ್ಮಿಕ ಸ್ಥಳಗಳ ಸಮೀಪವಿದ್ದ 717 ಮದ್ಯದ ಅಂಗಡಿಗಳನ್ನು ಮುಚ್ಚಿಸುವ ಮೂಲಕ ಸರ್ಕಾರ ತನ್ನ ದೃಢ ನಿಲುವನ್ನು ಪ್ರದರ್ಶಿಸಿದೆ. ರಾಜ್ಯದ ಆದಾಯದ ಮೂಲವಾಗಿದ್ದರೂ ಸಹ, ಸಾರ್ವಜನಿಕ ಹಿತದೃಷ್ಟಿಯಿಂದ ಮತ್ತು ಮದ್ಯ ವ್ಯಸನವನ್ನು ನಿಯಂತ್ರಿಸುವ ಉದ್ದೇಶದಿಂದ ಈ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಸರ್ಕಾರ ತಿಳಿಸಿದೆ.

ರಾಜ್ಯದ ಬೊಕ್ಕಸಕ್ಕೆ ಟಾಸ್ಮಾಕ್ ದೊಡ್ಡ ಆದಾಯ ತಂದುಕೊಡುತ್ತಿದ್ದರೂ, ಕಂದಾಯಕ್ಕಿಂತ ಜನರ ಕ್ಷೇಮವೇ ಮುಖ್ಯ ಎಂಬ ಸಂದೇಶವನ್ನು ಮುಖ್ಯಮಂತ್ರಿ ವಿಜಯ್ ಈ ಮೂಲಕ ರವಾನಿಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ