ಬಳ್ಳಾರಿ : ಬಿಜೆಪಿ ನಾಯಕರಿಂದ ಬಳ್ಳಾರಿ ಚಲೋ ಪಾದಯಾತ್ರೆ ವಿಚಾರಕ್ಕೆ ಸಂಬಂಧಪಟ್ಟಂತೆ ಪಾದಯಾತ್ರೆ ಬಳಿ ನಿಯಮ ಮೀರಿ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಮಾಜಿ ಶಾಸಕರು ಸೇರಿದಂತೆ 22 ಜನರ ವಿರುದ್ಧ ಇದೀಗ FIR ದಾಖಲಾಗಿದೆ. ಬಳ್ಳಾರಿ ಚಲೋ ಪಾದಯಾತ್ರೆ ಹಿನ್ನೆಲೆಯಲ್ಲಿ ಬಳ್ಳಾರಿ ಪಾಲಿಕೆ ವ್ಯಾಪ್ತಿಯಲ್ಲಿ ಪೂರ್ವಾನುಮತಿ ಇಲ್ಲದೆ ಬಿಜೆಪಿ ಬಾವುಟ ಮತ್ತು ಬ್ಯಾನರ್ ಅಳವಡಿಸಲಾಗಿತ್ತು. ಕಾರ್ಯಕ್ರಮದ ಒಂದು ದಿನ ಮುಂಚೆ ಬ್ಯಾನರ್ ಮತ್ತು ಬಿಜೆಪಿಯ ಬಾವುಟಗಳನ್ನು ಪಾಲಿಕೆ ಸಿಬ್ಬಂದಿಗಳು ತೆರವು ಮಾಡಿದರು.
ತೆರವುಗೊಳಿಸಿದ್ದನ್ನು ಖಂಡಿಸಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಧರಣಿ ನಡೆಸಲಾಗಿತ್ತು. ರಸ್ತೆ ಸಂಚಾರ ತಡೆದು ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಮಾಜಿ ಶಾಸಕ ಸೋಮಶೇಖರ ರೆಡ್ಡಿ ರೇಣುಕಾಚಾರ್ಯ ಸೇರಿದಂತೆ 22 ವಿರುದ್ಧ ಬಳ್ಳಾರಿ ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿದೆ ಸೆಪ್ಟೆಂಬರ್ 9 ರಂದು ಬಿಜೆಪಿ ಪಾದಯಾತ್ರೆ, ಬಳ್ಳಾರಿ ನಗರಕ್ಕೆ ಆಗಮಿಸಿತ್ತು. ಬಿಐಟಿಎಂ ಕಾಲೇಜುವರೆಗೆ ಅಷ್ಟೇ ಬಾವುಟ ಅಳವಡಿಕೆಗೆ ಅವಕಾಶ ನೀಡಲಾಗಿತ್ತು. ಯಾವುದೇ ಕಾರಣಕ್ಕೂ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬ್ಯಾನರ್ ಕಟ್ಟದಂತೆ ಜಿಲ್ಲಾಧಿಕಾರಿ ನಿಷೇಧಾಜ್ಞೆ ಆದೇಶ ಹೊರಡಿಸಿದ್ದರು.
ಆದರೆ ನಿಯಮ ಮೀರಿ ಬಾವುಟ ಮತ್ತು ಬ್ಯಾನರ್ ಅಳವಡಿಸಲಾಗಿತ್ತು ಬ್ಯಾರರ್ ಮತ್ತು ಬಾವುಟಗಳನ್ನು ಪಾಲಿಕೆ ಸಿಬ್ಬಂದಿಗಳು ತೆರವುಗೊಳಿಸಿದರು. ಇದರಿಂದ ಆಕ್ರೋಶಗೊಂಡು ರಸ್ತೆ ಸಂಚಾರ ತಡೆದು ಪ್ರತಿಭಟನೆ ನಡೆಸಿದ್ದರು. ಸೆಪ್ಟೆಂಬರ್ 9 ರಂದು ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿದ್ದರು. ಬಳ್ಳಾರಿ ಮತ್ತು ಹೊಸಪೇಟೆ ರಾಷ್ಟ್ರೀಯ ಹೆದ್ದಾರಿ 67 ರಲ್ಲಿ ಪ್ರತಿಭಟನೆ ನಡೆಸಿದ್ದರು. ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ಮಾಡಿದ ಹಿನ್ನೆಲೆಯಲ್ಲಿ FIR ದಾಖಲಾಗಿದೆ.