LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

BREAKING : ‘ರಾಜ್ಯ ಸರ್ಕಾರಿ’ ನೌಕರರಿಗೆ ಬಿಗ್ ಶಾಕ್ : ಜುಲೈ 31ರವರೆಗೆ ವಿಸ್ತರಿಸಿದ್ದ ‘ಸಾರ್ವತ್ರಿಕ ವರ್ಗಾವಣೆ ಅವಧಿ’ ರದ್ದು

ಬೆಂಗಳೂರು, ಜು.16: ಕರ್ನಾಟಕ ಸರ್ಕಾರವು 2026-27ನೇ ಸಾಲಿನ ರಾಜ್ಯ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆ ಅವಧಿಯನ್ನು ಜುಲೈ 31ರವರೆಗೆ ವಿಸ್ತರಿಸಿದ್ದ ಆದೇಶವನ್ನು ಹಿಂಪಡೆದಿದೆ. ಈ ಮೂಲಕ ಜುಲೈ 15ರಂದು ಹೊರಡಿಸಿದ್ದ ವಿಸ್ತರಣೆಯ ಆದೇಶವು ತಕ್ಷಣದಿಂದಲೇ ಅಮಾನ್ಯವಾಗಿದೆ.

ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (ಸೇವಾ ನಿಯಮಗಳು-3) ಈ ಕುರಿತು ಜುಲೈ 16ರಂದು ಹೊಸ ಸರ್ಕಾರಿ ಆದೇಶ ಹೊರಡಿಸಿದೆ. ಈ ಹಿಂದೆ 2026-27ನೇ ಸಾಲಿನ ಸಾರ್ವತ್ರಿಕ ವರ್ಗಾವಣೆಯನ್ನು ಏಪ್ರಿಲ್ 15ರಿಂದ ಮೇ 31, 2026ರವರೆಗೆ ನಡೆಸಲು ಏಪ್ರಿಲ್ 13ರಂದು ಸರ್ಕಾರ ಅನುಮತಿ ನೀಡಿತ್ತು. ಬಳಿಕ ವಿವಿಧ ಹಂತಗಳಲ್ಲಿ ಆದೇಶಗಳನ್ನು ಹೊರಡಿಸಿ, ಕೊನೆಯದಾಗಿ ಜುಲೈ 15ರಂದು ವರ್ಗಾವಣೆ ಅವಧಿಯನ್ನು ಜುಲೈ 31ರವರೆಗೆ ವಿಸ್ತರಿಸಲಾಗಿತ್ತು.

ಆದರೆ, ಕಾರಣಾಂತರಗಳಿಂದ ಈ ವಿಸ್ತರಣೆಯನ್ನು ಹಿಂಪಡೆಯಲು ಸರ್ಕಾರ ನಿರ್ಧರಿಸಿದೆ. ಹೀಗಾಗಿ, ಜುಲೈ 15ರ ಸರ್ಕಾರಿ ಆದೇಶವನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ರದ್ದುಗೊಳಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಇದರೊಂದಿಗೆ, ಜುಲೈ 31ರವರೆಗೆ ವರ್ಗಾವಣೆ ಪ್ರಕ್ರಿಯೆ ನಡೆಸುವ ಅವಕಾಶ ಇನ್ನು ಇರುವುದಿಲ್ಲ. ಏಪ್ರಿಲ್ 13ರಂದು ಹೊರಡಿಸಿದ್ದ ಮೂಲ ಆದೇಶದಲ್ಲಿನ ಷರತ್ತು ಹಾಗೂ ನಿರ್ಬಂಧಗಳೇ ಅನ್ವಯವಾಗಲಿವೆ. ಸರ್ಕಾರದ ಉಪ ಕಾರ್ಯದರ್ಶಿ ಎಸ್.ಆರ್. ಶಿವಶಂಕರ್ ಅವರು ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಈ ಆದೇಶಕ್ಕೆ ಸಹಿ ಹಾಕಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ