LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

BREAKING : ಡಿ. 31ರೊಳಗೆ ‘GBA’ ಚುನಾವಣೆ ನಡೆಸಿ : ರಾಜ್ಯ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಖಡಕ್ ಆದೇಶ.!

ಬೆಂಗಳೂರು : ಜಿಬಿಎ (GBA) ವ್ಯಾಪ್ತಿಯ ಐದು ಪಾಲಿಕೆಗಳ ಚುನಾವಣೆಯನ್ನು 2026ರ ಡಿಸೆಂಬರ್ 31ರೊಳಗೆ ಕಡ್ಡಾಯವಾಗಿ ನಡೆಸಬೇಕು ಎಂದು ಸುಪ್ರೀಂಕೋರ್ಟ್ ಸ್ಪಷ್ಟ ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಪೀಠವು ವಿಚಾರಣೆ ನಡೆಸಿ, ಚುನಾವಣೆ ಮುಂದೂಡಲು ಯಾವುದೇ ನೆಪ ಅಥವಾ ಹೊಸ ಕಾರಣಗಳನ್ನು ಮುಂದಿಡಬಾರದು ಎಂದು ಸರ್ಕಾರಕ್ಕೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದೆ.

ವಿಚಾರಣೆ ವೇಳೆ ಸರ್ಕಾರವು ಚುನಾವಣೆ ನಡೆಸಲು ಡಿಸೆಂಬರ್ 31ರವರೆಗೆ ಕಾಲಾವಕಾಶ ಕೋರಿತ್ತು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ನೀಡಿರುವ ಗಡುವಿನೊಳಗೆ ಚುನಾವಣಾ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಹಾಗೂ ಬಳಿಕ ಮತ್ತೊಂದು ಕಾರಣ ನೀಡಿ ಮುಂದೂಡುವ ಪ್ರಯತ್ನ ಮಾಡಬಾರದು ಎಂದು ಸೂಚಿಸಿದೆ.
ಈ ವೇಳೆ ಸರ್ಕಾರದ ಪರ ಹಾಜರಾದ ಹಿರಿಯ ವಕೀಲ ಕಪಿಲ್ ಸಿಬಲ್, ನಿಗದಿತ ಗಡುವಿನ ಬಳಿಕವೂ ಚುನಾವಣೆ ನಡೆಸದಂತಹ ಪರಿಸ್ಥಿತಿ ಎದುರಾದರೆ, “ಅಂತಹ ಸಂದರ್ಭ ಬಂದರೆ ನಾವು ಸರ್ಕಾರದ ಪರ ಹಾಜರಾಗುವುದಿಲ್ಲ” ಎಂದು ನ್ಯಾಯಾಲಯದಲ್ಲಿ ತಿಳಿಸಿದ್ದಾರೆ ಎಂದು ವರದಿಯಾಗಿದೆ.

ಸುಪ್ರೀಂಕೋರ್ಟ್ನ ಈ ನಿರ್ದೇಶನದೊಂದಿಗೆ ಜಿಬಿಎ ವ್ಯಾಪ್ತಿಯ ಐದು ಪಾಲಿಕೆಗಳ ಚುನಾವಣೆಗೆ ಇದ್ದ ಅನಿಶ್ಚಿತತೆಗೆ ತೆರೆ ಬೀಳುವ ಸಾಧ್ಯತೆ ಹೆಚ್ಚಿದ್ದು, ಚುನಾವಣಾ ಸಿದ್ಧತೆಗಳನ್ನು ತ್ವರಿತಗೊಳಿಸುವಂತೆ ಸರ್ಕಾರದ ಮೇಲೆ ಒತ್ತಡ ಹೆಚ್ಚಿದೆ.ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯ ಐದು ನಗರ ಪಾಲಿಕೆಗಳ ಚುನಾವಣೆಯನ್ನು ಡಿ.31ರೊಳಗೆ ನಡೆಸುವಂತೆ ಸುಪ್ರೀಂಕೋರ್ಟ್ಗೆ ಕರ್ನಾಟಕ ಸರ್ಕಾರ ಹಾಗೂ ಜಿಬಿಎ ಮನವಿ ಸಲ್ಲಿಸಿತ್ತು.. ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಗತಿಯಲ್ಲಿರುವ ಕಾರಣ ಆಗಸ್ಟ್ 31ರೊಳಗೆ ಚುನಾವಣೆ ನಡೆಸುವುದು ಕಷ್ಟಕರವೆಂದು ವಾದಿಸಿ ಹೆಚ್ಚುವರಿ ಕಾಲಾವಕಾಶ ಕೋರಲಾಗಿತ್ತು. ಈ ಹಿನ್ನೆಲೆ ಜಿಬಿಎ (GBA) ವ್ಯಾಪ್ತಿಯ ಐದು ಪಾಲಿಕೆಗಳ ಚುನಾವಣೆಯನ್ನು 2026ರ ಡಿಸೆಂಬರ್ 31ರೊಳಗೆ ಕಡ್ಡಾಯವಾಗಿ ನಡೆಸಬೇಕು ಎಂದು ಸುಪ್ರೀಂಕೋರ್ಟ್ ಸ್ಪಷ್ಟ ನಿರ್ದೇಶನ ನೀಡಿದೆ

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿಮಕ್ಕಳ ಮನಸ್ಸು, ಮೆದುಳಿನ ಶಕ್ತಿಗೆ ದಾರಿದೀಪ ಈ ಪುಸ್ತಕ: ತಪ್ಪದೇ ಖರೀದಿಸಿ, ನಿಮ್ಮ ಮಕ್ಕಳಿಗೆ ತಪ್ಪದೇ ಓದಿಸಿ!ಹಿಂದೂಗಳ ಆಚರಣೆಗೆ ಸರ್ಕಾರ ಅಡ್ಡಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಕಾಂಗ್ರೆಸ್ ಪಕ್ಷ ಸಂಘಟನೆ ಬಲವರ್ಧನೆಗೆ 'ಕೆಪಿಸಿಸಿ ಕನೆಕ್ಟ್ ಸೆಂಟರ್' ಸ್ಥಾಪನೆ: ಪದಾಧಿಕಾರಿಗಳ ನೇಮಕ