LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

BREAKING : ರಾಜ್ಯದ 45 ಐಸ್‌ಕ್ರೀಂ ಘಟಕಗಳ ಮೇಲೆ 'FSSAI' ದಿಢೀರ್ ದಾಳಿ: ಕಳಪೆ ಸಾಮಗ್ರಿ, ಅವಧಿ ಮೀರಿದ ಐಸ್‌ಕ್ರೀಂ ಪತ್ತೆ!

ಬೆಂಗಳೂರು: ರಾಜ್ಯಾದ್ಯಂತ ಜನರಿಗೆ ಸರಬರಾಜಾಗುವ ಐಸ್‌ಕ್ರೀಂ ಗುಣಮಟ್ಟ ಹಾಗೂ ನೈರ್ಮಲ್ಯ ತಪಾಸಣೆಗಾಗಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ (FSSAI) ಅಧಿಕಾರಿಗಳು ಭಾರಿ ಕಾರ್ಯಾಚರಣೆ ನಡೆಸಿದ್ದಾರೆ. ಬೆಂಗಳೂರು, ಮೈಸೂರು, ರಾಯಚೂರು ಸೇರಿದಂತೆ ರಾಜ್ಯದ ಒಟ್ಟು 45 ಐಸ್‌ಕ್ರೀಂ ತಯಾರಿಕಾ ಘಟಕಗಳ ಮೇಲೆ ಅಧಿಕಾರಿಗಳ ತಂಡ ಏಕಕಾಲಕ್ಕೆ ದಾಳಿ ನಡೆಸಿ, ತೀವ್ರ ಪರಿಶೀಲನೆಗೆ ಒಳಪಡಿಸಿದೆ. ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ನಡೆದ ಈ ದಿಢೀರ್ ದಾಳಿಯು ಕಲಬೆರಕೆ ಮತ್ತು ನಕಲಿ ಐಸ್‌ಕ್ರೀಂ ಉತ್ಪಾದಕರಲ್ಲಿ ತೀವ್ರ ಆತಂಕ ಮೂಡಿಸಿದೆ.

ದಾಳಿಯ ವೇಳೆ ಪ್ರಮುಖ ನಗರಗಳ ಪ್ರಸಿದ್ಧ ಐಸ್‌ಕ್ರೀಂ ಉತ್ಪಾದನಾ ಕೇಂದ್ರಗಳಲ್ಲಿ ಹಲವು ಗಂಭೀರ ಲೋಪದೋಷಗಳು ಕಂಡುಬಂದಿವೆ. ಬೆಂಗಳೂರಿನ ಜಯನಗರ 3ನೇ ಬ್ಲಾಕ್‌ನಲ್ಲಿರುವ ‘ಸಾಗರ್ ಐಸ್‌ಕ್ರೀಂ’, ಹಳ್ಳಿಯ ಬನ್ನೇರುಘಟ್ಟ ರಸ್ತೆಯಲ್ಲಿರುವ ‘ಎಎನ್ ಎಂಟರ್‌ಪ್ರೈಸಸ್’, ಮೈಸೂರಿನ ‘ಜಾನ್ ಕ್ಯಾಂಡಿ ಐಸ್‌ಕ್ರೀಂ’ ಹಾಗೂ ರಾಯಚೂರಿನ ‘ಜಮೀನಿ ಐಸ್‌ಕ್ರೀಂ’ ತಯಾರಿಕಾ ಘಟಕಗಳ ಮೇಲೆಯೂ ದಾಳಿ ನಡೆಸಿ ಜಾಲಾಡಲಾಗಿದೆ. ಈ ಪರಿಶೀಲನೆ ವೇಳೆ ಬಳಕೆಗೆ ಯೋಗ್ಯವಲ್ಲದ ಮತ್ತು ನಿಯಮ ಉಲ್ಲಂಘಿಸಿ ತಯಾರಿಸುತ್ತಿದ್ದ ಐಸ್‌ಕ್ರೀಂಗಳನ್ನು ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ.

ಈ ಕಾರ್ಯಾಚರಣೆ ಸಮಯದಲ್ಲಿ ತಯಾರಿಕೆಗೆ ಬಳಸುತ್ತಿದ್ದ ಹಾಲಿನ ಉತ್ಪನ್ನಗಳು, ಸಕ್ಕರೆ ಸೇರಿದಂತೆ ಒಟ್ಟು 70 ವಿವಿಧ ಆಹಾರ ಮಾದರಿಗಳನ್ನು (ಸಾCategorized Samples) ಸಂಗ್ರಹಿಸಿ ಪ್ರಯೋಗಾಲಯದ ಪರೀಕ್ಷೆಗೆ ಕಳುಹಿಸಲಾಗಿದೆ. ಪ್ರಮುಖವಾಗಿ, ದಾಳಿ ನಡೆಸಿದ ಸ್ಥಳಗಳಲ್ಲಿ ಅವಧಿ ಮೀರಿದ (Expired) ಐಸ್‌ಕ್ರೀಂ, ಹಾಲು, ಬಿಸ್ಕತ್ತು ಹಾಗೂ ಕೊಬ್ಬರಿ ಪುಡಿಯನ್ನು ಬಳಸಿ ಐಸ್‌ಕ್ರೀಂ ತಯಾರಿಸುತ್ತಿದ್ದುದು ಪತ್ತೆಯಾಗಿದೆ. ಅಷ್ಟೇ ಅಲ್ಲದೆ, ಪ್ಯಾಕೇಟ್‌ಗಳ ಮೇಲೆ ಕಡ್ಡಾಯವಾಗಿ ಇರಬೇಕಾದ ನಿಯಮಾನುಸಾರ ಲೇಬಲಿಂಗ್ (Labeling Rules) ಪಾಲಿಸದೇ ಇರುವುದು ಕಂಡುಬಂದಿದ್ದು, ಆಹಾರ ಸುರಕ್ಷತಾ ಅಧಿಕಾರಿಗಳು ಸೂಕ್ತ ಕಾನೂನು ಕ್ರಮ ಜರುಗಿಸಲು ಮುಂದಾಗಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸೇವೆಯಲ್ಲಿರುವ ಅಗ್ನಿವೀರರಿಗೆ ಮಾತ್ರ ಹೊಸ ಬದಲಾವಣೆ‘ರಾಮಾಯಣ’ ಸಿನಿಮಾ ನೋಡಿ ಭಾವುಕರಾದ ಅನುಪಮ್ ಖೇರ್: ಭಾರತೀಯ ಚಿತ್ರರಂಗದ ಸರ್ವಶ್ರೇಷ್ಠ ಸಿನಿಮಾ ಎಂದ ನಟ!ಮುಂಬೈ ಅಂತರ ಶಾಲಾ ಬಾಸ್ಕೆಟ್‌ಬಾಲ್ ಧಮಾಕಾ: ಡಾನ್ ಬೊಸ್ಕೊ ಮಣಿಸಿ ಟ್ರೋಫಿ ಎತ್ತಿಹಿಡಿದ ಅಂಡೇರಿಯಾ ಎಂಪಿಎಸ್!Motorola Signature 27 Snapdragon 8 Elite Extreme Gen 6 ಮತ್ತು 200MP ಟೆಲಿಫೋಟೋ ಲೆನ್ಸ್‌ನೊಂದಿಗೆ ಅನಾವರಣಬಾಲಿವುಡ್ ಅಂಗಳದಲ್ಲಿ ಹೊಸ ಲವ್ ಸ್ಟೋರಿ: ಗೆಳತಿ ಜೊತೆ ಮನೀಶ್ ಮಲ್ಹೋತ್ರಾ ಪಾರ್ಟಿಯಲ್ಲಿ ಮಾಧುರಿ ದೀಕ್ಷಿತ್ ಮಗ!ಬ್ಯಾಂಕ್ ಲಾಕರ್’ ನಲ್ಲಿ ಇಟ್ಟಿದ್ದ ₹47 ಲಕ್ಷದ ಚಿನ್ನಾಭರಣ ನಾಪತ್ತೆ! ಮಹಿಳೆಯ ಹೋರಾಟಕ್ಕೆ ಕೊನೆಗೂ ಸಿಕ್ತು ಜಯ!ರಾಮಾಯಣ’ದಲ್ಲಿ ರಾಮನಾಗಿ ರಣಬೀರ್, ರಾವಣನಾಗಿ ಯಶ್; ಇಬ್ಬರಲ್ಲಿ ಶ್ರೀಮಂತ ನಟ ಯಾರು?ಕೈ ಕೈ ಹಿಡಿದು ಬಂದ ಐಶ್ವರ್ಯಾ ರೈ–ಅಭಿಷೇಕ್ ಜೋಡಿ; ರೊಮ್ಯಾಂಟಿಕ್ ಕ್ಷಣ ವೈರಲ್! ವಿಚ್ಛೇದನದ ವದಂತಿಗಳಿಗೆ ಬ್ರೇಕ್?ಆಸೀಸ್ ಕ್ರಿಕೆಟರ್ ಗೆ ಕೊಕೇನ್ ಶಾಕ್: ತಪ್ಪು ಒಪ್ಪಿಕೊಂಡು ನಿಷೇಧ ಪೂರ್ಣಗೊಳಿಸಿದ ಕ್ರಿಸ್ ಲಿನ್!ಧನ್ತೇರಸ್ 2026: ಚಿನ್ನ ಖರೀದಿಗೆ ಶುಭ ಮುಹೂರ್ತ ಯಾವಾಗ? ಬೆಂಗಳೂರು ಸೇರಿ ಪ್ರಮುಖ ನಗರಗಳ ಪೂಜಾ ಸಮಯ ಇಲ್ಲಿದೆ