LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

BREAKING : ನಂದಿನಿ ಹಾಲು ಲೀಟರ್‌ಗೆ ₹5 ರಿಂದ ₹6 ಹೆಚ್ಚಳ ಸಾಧ್ಯತೆ: ನಾಳೆಯಿಂದಲೇ ಹೊಸ ದರ ಜಾರಿ?!

ಬೆಂಗಳೂರು: ರಾಜ್ಯದಲ್ಲಿ ನಂದಿನಿ ಹಾಲಿನ ದರ ಶೀಘ್ರದಲ್ಲೇ ಪರಿಷ್ಕರಣೆಯಾಗುವ ಸಾಧ್ಯತೆಯಿದ್ದು, ಲೀಟರ್‌‌ಗೆ 5ರಿಂದ 6 ರೂಪಾಯಿಗಳವರೆಗೆ ಬೆಲೆ ಏರಿಕೆಯಾಗುವ ನಿರೀಕ್ಷೆಯಿದೆ. ನಾಳೆ ನಡೆಯಲಿರುವ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು. ಸಂಪುಟದ ಅನುಮೋದನೆ ದೊರೆತರೆ, ಅಕ್ಟೋಬರ್ 2ರಿಂದಲೇ (ನಾಳೆಯಿಂದಲೇ) ನೂತನ ದರಗಳು ರಾಜ್ಯಾದ್ಯಂತ ಜಾರಿಗೆ ಬರಲಿವೆ.

ಹಾಲು ಉತ್ಪಾದಕರ ಹಿತರಕ್ಷಣೆಯ ದೃಷ್ಟಿಯಿಂದ ಹಲವು ಜಿಲ್ಲಾ ಹಾಲು ಒಕ್ಕೂಟಗಳು ಲೀಟರ್‌ಗೆ ₹10ರಿಂದ ₹12ರವರೆಗೆ ದರ ಹೆಚ್ಚಿಸುವಂತೆ ಮನವಿ ಮಾಡಿದ್ದವು. ಪ್ರಸ್ತುತ ಎದುರಾಗಿರುವ ಬರ ಪರಿಸ್ಥಿತಿಯಿಂದಾಗಿ ರೈತರಿಗೆ ಉಂಟಾಗಿರುವ ಆರ್ಥಿಕ ಹೊರೆಯನ್ನು ತಗ್ಗಿಸುವ ಉದ್ದೇಶದಿಂದ ಕರ್ನಾಟಕ ಹಾಲು ಮಹಾಮಂಡಳಿ (KMF) ನೀಡಿರುವ ಬೆಲೆ ಏರಿಕೆಯ ಪ್ರಸ್ತಾವನೆಗೆ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಮ್ಮತಿ ಸೂಚಿಸಿದ್ದಾರೆ.

ದರ ಹೆಚ್ಚಳದಿಂದ ಬರುವ ಹೆಚ್ಚುವರಿ ಮೊತ್ತವನ್ನು ರೈತರು ಮತ್ತು ಹಾಲು ಒಕ್ಕೂಟಗಳ ನಡುವೆ ಹಂಚಿಕೆ ಮಾಡಲು ಯೋಜನೆ ರೂಪಿಸಲಾಗಿದೆ. ಸಂಗ್ರಹವಾಗುವ ಒಟ್ಟು ಮೊತ್ತದ ಶೇಕಡಾ 70ರಷ್ಟು ಭಾಗವನ್ನು ನೇರವಾಗಿ ಹಾಲು ಉತ್ಪಾದಿಸುವ ರೈತರಿಗೆ ತಲುಪಿಸಲಾಗುತ್ತದೆ. ಇನ್ನುಳಿದ ಶೇಕಡಾ 30ರಷ್ಟು ಮೊತ್ತವನ್ನು ಕೆಎಂಎಫ್ ಮತ್ತು ವಿವಿಧ ಜಿಲ್ಲಾ ಹಾಲು ಒಕ್ಕೂಟಗಳ ಸಾಗಣೆ ಹಾಗೂ ನಿರ್ವಹಣಾ ವೆಚ್ಚಗಳಿಗೆ ಬಳಸಿಕೊಳ್ಳಲು ಪ್ರಸ್ತಾವನೆಯಲ್ಲಿ ತೀರ್ಮಾನಿಸಲಾಗಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುಂಬೈ ಅಂತರ ಶಾಲಾ ಬಾಸ್ಕೆಟ್‌ಬಾಲ್ ಧಮಾಕಾ: ಡಾನ್ ಬೊಸ್ಕೊ ಮಣಿಸಿ ಟ್ರೋಫಿ ಎತ್ತಿಹಿಡಿದ ಅಂಡೇರಿಯಾ ಎಂಪಿಎಸ್!Motorola Signature 27 Snapdragon 8 Elite Extreme Gen 6 ಮತ್ತು 200MP ಟೆಲಿಫೋಟೋ ಲೆನ್ಸ್‌ನೊಂದಿಗೆ ಅನಾವರಣಬಾಲಿವುಡ್ ಅಂಗಳದಲ್ಲಿ ಹೊಸ ಲವ್ ಸ್ಟೋರಿ: ಗೆಳತಿ ಜೊತೆ ಮನೀಶ್ ಮಲ್ಹೋತ್ರಾ ಪಾರ್ಟಿಯಲ್ಲಿ ಮಾಧುರಿ ದೀಕ್ಷಿತ್ ಮಗ!ಬ್ಯಾಂಕ್ ಲಾಕರ್’ ನಲ್ಲಿ ಇಟ್ಟಿದ್ದ ₹47 ಲಕ್ಷದ ಚಿನ್ನಾಭರಣ ನಾಪತ್ತೆ! ಮಹಿಳೆಯ ಹೋರಾಟಕ್ಕೆ ಕೊನೆಗೂ ಸಿಕ್ತು ಜಯ!ರಾಮಾಯಣ’ದಲ್ಲಿ ರಾಮನಾಗಿ ರಣಬೀರ್, ರಾವಣನಾಗಿ ಯಶ್; ಇಬ್ಬರಲ್ಲಿ ಶ್ರೀಮಂತ ನಟ ಯಾರು?ಕೈ ಕೈ ಹಿಡಿದು ಬಂದ ಐಶ್ವರ್ಯಾ ರೈ–ಅಭಿಷೇಕ್ ಜೋಡಿ; ರೊಮ್ಯಾಂಟಿಕ್ ಕ್ಷಣ ವೈರಲ್! ವಿಚ್ಛೇದನದ ವದಂತಿಗಳಿಗೆ ಬ್ರೇಕ್?ಆಸೀಸ್ ಕ್ರಿಕೆಟರ್ ಗೆ ಕೊಕೇನ್ ಶಾಕ್: ತಪ್ಪು ಒಪ್ಪಿಕೊಂಡು ನಿಷೇಧ ಪೂರ್ಣಗೊಳಿಸಿದ ಕ್ರಿಸ್ ಲಿನ್!ಧನ್ತೇರಸ್ 2026: ಚಿನ್ನ ಖರೀದಿಗೆ ಶುಭ ಮುಹೂರ್ತ ಯಾವಾಗ? ಬೆಂಗಳೂರು ಸೇರಿ ಪ್ರಮುಖ ನಗರಗಳ ಪೂಜಾ ಸಮಯ ಇಲ್ಲಿದೆಉತ್ತರ ಪ್ರದೇಶದಲ್ಲಿ ಮೂರನೇ ಅವಧಿಗಾಗಿ ಬಿಜೆಪಿಯ ತಂತ್ರ: ಕಲ್ಯಾಣ ಯೋಜನೆ, ಮಹಿಳಾ ಮತ ಮತ್ತು ಯೋಗಿ ವರ್ಚಸ್ಸಿನ ಮೇಲೆ ಭರವಸೆಭಾರತದಲ್ಲಿ ಅತಿ ಹೆಚ್ಚು ಸಕ್ಕರೆ ಉತ್ಪಾದಿಸುವ ಟಾಪ್ 5 ಕಂಪನಿಗಳು ಯಾವುದು ಗೊತ್ತಾ? ಇಲ್ಲಿದೆ ಮಾಹಿತಿ!