LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

BREAKING: 52 ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆದಿದ್ದ ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ

ಬೆಂಗಳೂರು: ಕೋಮುಗಲಭೆ ಪ್ರಕರಣಗಳು ಸೇರಿದಂತೆ ಒಟ್ಟು 52 ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆಯಲು ಮುಂದಾಗಿದ್ದ ರಾಜ್ಯ ಸರ್ಕಾರದ ಮಹತ್ವದ ತೀರ್ಮಾನಕ್ಕೆ ಕರ್ನಾಟಕ ಹೈಕೋರ್ಟ್‌ನ ವಿಭಾಗೀಯ ಪೀಠವು ಮಧ್ಯಂತರ ತಡೆಯಾಜ್ಞೆ ನೀಡಿದೆ.

52 ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆಯಲು ಮುಂದಾಗಿದ್ದ ಸರ್ಕಾರದ ಈ ಕ್ರಮವನ್ನು ಪ್ರಶ್ನಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿತ್ತು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಈ ಆದೇಶ ಹೊರಡಿಸಿದೆ.

ರಾಜ್ಯ ಸರ್ಕಾರವು 2026ರ ಮೇ 27ರಂದು ಒಟ್ಟು 52 ಕ್ರಿಮಿನಲ್ ಪ್ರಕರಣಗಳನ್ನು ಅಧಿಕೃತವಾಗಿ ವಾಪಸ್ ಪಡೆಯಲು ತೀರ್ಮಾನಿಸಿ ಆದೇಶ ಹೊರಡಿಸಿತ್ತು. ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದೆ.

ಕಲಬುರಗಿ ಜಿಲ್ಲೆಯ ಲಾಡ್ಲೆ ಮಶಾಕ್ ದರ್ಗಾ ಗಲಭೆ ಕೇಸ್, ಕೋಮುಗಲಭೆ ಕೇಸ್​ಗಳೂ ಸೇರಿ 52 ಪ್ರಕರಣ ವಾಪಸಾತಿಗೆ ನಿರ್ಧರಿಸಲಾಗಿತ್ತು. ಆದರೆ 2026 ಮೇ 27ರ ರಾಜ್ಯ ಸರ್ಕಾರದ ತೀರ್ಮಾನಕ್ಕೆ ಹೈಕೋರ್ಟ್ ತಡೆ ನೀಡಿದೆ. ಕೋಮುಗಲಭೆ ಆರೋಪಿಗಳ ಪರ ಯು.ಟಿ.ಖಾದರ್ ಶಿಫಾರಸು ಆರೋಪ ಸಂಬಂಧ ಯು.ಟಿ.ಖಾದರ್​ಗೆ ನೋಟಿಸ್ ನೀಡಲು ಹೈಕೋರ್ಟ್ ನಕಾರ ವ್ಯಕ್ತಪಡಿಸಿದ್ದು, ಗೃಹ ಇಲಾಖೆ ಮತ್ತು ಅಭಿಯೋಜನೆ ಇಲಾಖೆಗೆ ನೋಟಿಸ್ ನೀಡಿದೆ.

ರಾಜ್ಯ ಸರ್ಕಾರ ಹೊರಡಿಸಿರುವ ಆದೇಶವು ಇದೇ ರೀತಿಯ ಅಧಿಸೂಚನೆಯನ್ನು ರದ್ದುಗೊಳಿಸಿದ್ದ ಹೈಕೋರ್ಟ್‌ನ ಹಿಂದಿನ ತೀರ್ಪಿಗೆ ಪ್ರಾಥಮಿಕ ದೃಷ್ಟಿಯಿಂದ ವಿರುದ್ಧವಾಗಿದೆ ಎಂದು ಮುಖ್ಯ ನ್ಯಾಯಮೂರ್ತಿ ವಿಬು ಬಖ್ರು ಹಾಗೂ ನ್ಯಾಯಮೂರ್ತಿ ಕೆ.ಎಸ್. ಹೇಮಲೇಖಾ ಅವರ ವಿಭಾಗೀಯ ಪೀಠ ಅಭಿಪ್ರಾಯಪಟ್ಟಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಹಾಗೂ ಪ್ರಾಸಿಕ್ಯೂಷನ್ ನಿರ್ದೇಶನಾಲಯಕ್ಕೆ ನೀಡಲಾದ ನೋಟಿಸ್​​ಗೆ ಎರಡು ವಾರಗಳೊಳಗೆ ಉತ್ತರ ಸಲ್ಲಿಸುವಂತೆ ನಿರ್ದೇಶನ ನೀಡಿದೆ.

ಇನ್ನು 52 ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆದ ಕ್ರಮಕ್ಕೆ ತಡೆ ವಿಚಾರ ಸಂಬಂಧ ಪ್ರತಿಕ್ರಿಯಿಸಿರುವ ಗೃಹ ಸಚಿವ ಪ್ರಿಯಾಂಕ್​​ ಖರ್ಗೆ, ಕೋರ್ಟ್​ ಆದೇಶದ ಕಾಪಿ ಸಿಕ್ಕಿದ ಬಳಿಕ ಚರ್ಚೆ ಮಾಡುತ್ತೇವೆ. ಆ ಪ್ರಕರಣಗಳಲ್ಲಿ ಬಿಜೆಪಿ ನಾಯಕರ ಕೇಸ್​ ಕೂಡ ಸೇರಿವೆ. ಕಾನೂನು ಮೀರಿ ನಾವು ಯಾವುದೇ ಆದೇಶವನ್ನು ಮಾಡಿಲ್ಲ. ಕಾನೂನು ಚೌಕಟ್ಟಿನಲ್ಲೇ ಸಂಪುಟದಲ್ಲಿ ನಿರ್ಧಾರ ಮಾಡಲಾಗಿತ್ತು ಎಂದವರು ಹೇಳಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿಮಕ್ಕಳ ಮನಸ್ಸು, ಮೆದುಳಿನ ಶಕ್ತಿಗೆ ದಾರಿದೀಪ ಈ ಪುಸ್ತಕ: ತಪ್ಪದೇ ಖರೀದಿಸಿ, ನಿಮ್ಮ ಮಕ್ಕಳಿಗೆ ತಪ್ಪದೇ ಓದಿಸಿ!ಹಿಂದೂಗಳ ಆಚರಣೆಗೆ ಸರ್ಕಾರ ಅಡ್ಡಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಕಾಂಗ್ರೆಸ್ ಪಕ್ಷ ಸಂಘಟನೆ ಬಲವರ್ಧನೆಗೆ 'ಕೆಪಿಸಿಸಿ ಕನೆಕ್ಟ್ ಸೆಂಟರ್' ಸ್ಥಾಪನೆ: ಪದಾಧಿಕಾರಿಗಳ ನೇಮಕ