LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

BREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರ

ಬೆಂಗಳೂರು: ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ರಾಜ್ಯದ ನಾಲ್ಕೂ ರಸ್ತೆ ಸಾರಿಗೆ ನಿಗಮಗಳಿಗೆ ನೆರವಾಗಲು ರಾಜ್ಯ ಸರ್ಕಾರವು ಮುಂದಾಗಿದ್ದು, ವಿವಿಧ ಸಹಾಯಧನ ಹಾಗೂ ಬಾಕಿ ಪಾವತಿಗಾಗಿ ಒಟ್ಟು 593.99 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿ ಅಧಿಕೃತ ಆದೇಶ ಹೊರಡಿಸಿದೆ. ಡೀಸೆಲ್ ಪೂರೈಕೆದಾರರಿಗೆ ಹಾನಿಯಾಗದಂತೆ ಮತ್ತು ಬಸ್ ಸೇವೆಗಳಲ್ಲಿ ಯಾವುದೇ ವ್ಯತ್ಯಯವಾಗದಂತೆ ಎಚ್ಚರಿಕೆ ವಹಿಸಲು ಈ ಹಣವು ನೆರವಾಗಲಿದೆ.

ಕೆಲ ದಿನಗಳ ಹಿಂದೆ ಡೀಸೆಲ್ ಬಾಕಿ ಪಾವತಿಸದ ಕಾರಣ ಕೆಲವು ಡಿಪೋಗಳಲ್ಲಿ ಬಸ್ ಸೇವೆ ವ್ಯತ್ಯಯವಾಗಿತ್ತು. ನಾಲ್ಕೂ ನಿಗಮಗಳು ಡೀಸೆಲ್ ಬಾಕಿ ಮತ್ತು ಸಾಲದ ಸುಳಿಗೆ ಸಿಲುಕಿ ಸಾವಿರಾರು ಕೋಟಿ ರೂ.ಗಳ ಹೊಣೆಗಾರಿಕೆ ಹೊಂದಿವೆ. ಈ ಹಿನ್ನೆಲೆಯಲ್ಲಿ, 2026-27ನೇ ಸಾಲಿನಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ವಿತರಿಸಲಾದ 1.97 ಲಕ್ಷ ಉಚಿತ ಬಸ್ ಪಾಸ್‌ಗಳ ಪೈಕಿ ಸರ್ಕಾರದಿಂದ ಬರಬೇಕಿದ್ದ 286.08 ಕೋಟಿ ರೂ.ಗಳಲ್ಲಿ ಇದೀಗ ಹಂತ ಹಂತವಾಗಿ 63.99 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ.

ಪ್ರತಿದಿನ 26 ಸಾವಿರ ಬಸ್‌ಗಳಿಗೆ 16.26 ಲಕ್ಷ ಲೀಟರ್ ಡೀಸೆಲ್ ಅವಶ್ಯಕತೆಯಿದ್ದು, ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೋರೇಷನ್ ಲಿಮಿಟೆಡ್ (HPCL) ಸಂಸ್ಥೆಗೆ ಒಟ್ಟು 1124.91 ಕೋಟಿ ರೂ. ಬಾಕಿ ಪಾವತಿಸಬೇಕಿದೆ. ಸಾರಿಗೆ ನಿಗಮಗಳ ಈ ಬಿಕ್ಕಟ್ಟನ್ನು ನಿವಾರಿಸಲು ಹಾಗೂ ಸಾರ್ವಜನಿಕ ಸಾರಿಗೆ ವ್ಯವಸ್ಥೆ ಸರಾಗವಾಗಿ ಮುಂದುವರಿಯಲು ಸರ್ಕಾರದ ಈ ಅನುದಾನ ಬಿಡುಗಡೆ ಮಹತ್ವದ ಹೆಜ್ಜೆಯಾಗಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?BREAKING: ಇನ್ಮುಂದೆ ವೃತ್ತಿಪರ ಕೋರ್ಸ್ ಗಳಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಶೇ.15ರಷ್ಟು ಮೀಸಲಾತಿ: ರಾಜ್ಯ ಸರ್ಕಾರ ಅಧಿಕೃತ ಆದೇಶGOOD NEWS: ಗೃಹಜ್ಯೋತಿ ಫಲಾನುಭವಿಗಳಿಗೆ ಗುಡ್ ನ್ಯೂಸ್: ಮಾಹಿತಿ ದಾಖಲಿಸಲು ಅವಧಿ ವಿಸ್ತರಣೆ!ಗ್ರಾಹಕರಿಗೆ ಜಿಯೋ ಭರ್ಜರಿ ಆಫರ್: 1,499 ರೂ. JioBharat ಫೋನ್ ನೊಂದಿಗೆ 6 ತಿಂಗಳ ಉಚಿತ ರೀಚಾರ್ಜ್