ಕೊಪ್ಪಳ: ಚಾಲಕನ ನಿಯಂತ್ರಣ ತಪ್ಪಿ ತುಂಗಭದ್ರಾ ಸೇತುವೆ ಮೇಲಿನಿಂದ ಟ್ರ್ಯಾಕ್ಟರ್ ಕೆಳಗೆ ಬಿದ್ದು 7 ಜನರು ಸಾವನ್ನಪ್ಪಿರುವ ಘಟನೆ ಕೊಪ್ಪಳ ತಾಲೂಕಿನ ಮುನಿರಾಬಾದ್ ಬಳಿ ನಡೆದಿದೆ.
ಸೇತುವೆ ಮೇಲಿಂದ ಟ್ರ್ಯಾಕ್ಟರ್ ಕೆಳಗೆ ಬಿದ್ದ ಪರಿಣಾಮ ಈ ದುರಂತ ಸಂಭವಿಸಿದೆ. ಓರ್ವ ಮಗು ಸೇರಿ ಒಂದೇ ಕುಟುಂಬದ 7 ಜನರು ಮೃತಪಟ್ಟಿದ್ದಾರೆ. ಘಟನೆಯಲ್ಲಿ 10ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹೊಸಪೇಟೆ, ಕೊಪ್ಪಳ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.
ಮೃತರೆಲ್ಲರೂ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಮರ್ಲಾಯನಹಳ್ಳಿ ನಿವಾಸಿಗಳು. ಮುನಿರಾಬಾದ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ