LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

BREAKING : ಬೆಂಗಳೂರು ವಿಧಾನಸೌಧ ಬಾಂಬ್ ಸ್ಫೋಟಿಸಿದಂತೆ AI ನಕಲಿ ವಿಡಿಯೋ ಹಂಚಿಕೆ : ಬಿಹಾರ ಮೂಲದ ಆರೋಪಿ ಅರೆಸ್ಟ್!

ಬೆಂಗಳೂರು: ಕರ್ನಾಟಕದ ಅತ್ಯುನ್ನತ ಆಡಳಿತ ಶಕ್ತಿ ಸೌಧವಾದ ವಿಧಾನಸೌಧವನ್ನು ಬಾಂಬ್ ಇಟ್ಟು ಸ್ಫೋಟಿಸಿದಂತೆ ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನ ಬಳಸಿ ನಕಲಿ ವಿಡಿಯೋ ತಯಾರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದ ಕಿಡಿಗೇಡಿಯನ್ನು ವಿಧಾನಸೌಧ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಬಿಹಾರ ಮೂಲದ ಹಜರತ್ ಅಲಿ ಎಂದು ಗುರುತಿಸಲಾಗಿದ್ದು, ಈತ ಪ್ರಸ್ತುತ ಬೆಂಗಳೂರಿನ ಪೈಪ್ ಮಾರಾಟ ಮಳಿಗೆಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿ ಹಜರತ್ ಅಲಿ ತನ್ನ ‘Jnx king Hg’ ಎಂಬ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಈ ಎಐ ನಿರ್ಮಿತ ವೀಡಿಯೋವನ್ನು ಅಪ್‌ಲೋಡ್ ಮಾಡಿದ್ದನು. ವಿಡಿಯೋಗೆ "ವಿಧಾನಸೌಧ ಉಡಾ ದಿಯಾ ಬಾಂಬ್" (ವಿಧಾನಸೌಧವನ್ನು ಬಾಂಬ್‌ನಿಂದ ಉಡಾಯಿಸಲಾಯಿತು) ಎಂಬ ಆತಂಕಕಾರಿ ಶೀರ್ಷಿಕೆ (ಕ್ಯಾಪ್ಷನ್) ನೀಡಲಾಗಿತ್ತು. ತಂತ್ರಜ್ಞಾನವನ್ನು ದುರುಪಯೋಗಪಡಿಸಿಕೊಂಡು ವಿಧಾನಸೌಧ ಧ್ವಂಸಗೊಂಡಂತೆ ಸೃಷ್ಟಿಸಲಾಗಿದ್ದ ಈ ದೃಶ್ಯಗಳು ಜಾಲತಾಣಗಳಲ್ಲಿ ವೈರಲ್ ಆಗಿ ಸಾರ್ವಜನಿಕರಲ್ಲಿ ತೀವ್ರ ಭೀತಿ, ಆತಂಕ ಮತ್ತು ಗೊಂದಲವನ್ನುಂಟು ಮಾಡಿದ್ದವು.

ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುತ್ತಿದ್ದಂತೆ ಎಚ್ಚೆತ್ತ ವಿಧಾನಸೌಧ ಠಾಣೆ ಪೊಲೀಸರು ತಕ್ಷಣವೇ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೆತ್ತಿಕೊಂಡಿದ್ದರು. ಸೈಬರ್ ಕ್ರೈಂ ವಿಭಾಗದ ತಾಂತ್ರಿಕ ನೆರವಿನೊಂದಿಗೆ ಆರೋಪಿಯ ಇನ್‌ಸ್ಟಾಗ್ರಾಮ್ ಖಾತೆಯನ್ನು ಪರಿಶೀಲಿಸಿ, ಆತನ ಮೊಬೈಲ್ ಲೊಕೇಶನ್ ಆಧರಿಸಿ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸುವಲ್ಲಿ ಸಫಲರಾಗಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಡಿಪ್‌ಫೇಕ್ ಹಾಗೂ ಎಐ ತಂತ್ರಜ್ಞಾನವನ್ನು ದುರುಪಯೋಗಪಡಿಸಿಕೊಂಡು ಸುಳ್ಳು ಸುದ್ದಿ ಹರಡುವುದು ಮತ್ತು ಸಾರ್ವಜನಿಕ ಶಾಂತಿ ಕದಡುವ ಕೃತ್ಯಗಳು ಹೆಚ್ಚಾಗುತ್ತಿವೆ. ಸಮಾಜದಲ್ಲಿ ಗೊಂದಲ ಸೃಷ್ಟಿಸುವ ಇಂತಹ ಕೃತ್ಯಗಳಲ್ಲಿ ತೊಡಗುವವರ ವಿರುದ್ಧ ಯಾವುದೇ ಮುಲಾಜಿಲ್ಲದೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಇಲಾಖೆಯು ಖಡಕ್ ಎಚ್ಚರಿಕೆ ನೀಡಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುಂಬೈ ಅಂತರ ಶಾಲಾ ಬಾಸ್ಕೆಟ್‌ಬಾಲ್ ಧಮಾಕಾ: ಡಾನ್ ಬೊಸ್ಕೊ ಮಣಿಸಿ ಟ್ರೋಫಿ ಎತ್ತಿಹಿಡಿದ ಅಂಡೇರಿಯಾ ಎಂಪಿಎಸ್!Motorola Signature 27 Snapdragon 8 Elite Extreme Gen 6 ಮತ್ತು 200MP ಟೆಲಿಫೋಟೋ ಲೆನ್ಸ್‌ನೊಂದಿಗೆ ಅನಾವರಣಬಾಲಿವುಡ್ ಅಂಗಳದಲ್ಲಿ ಹೊಸ ಲವ್ ಸ್ಟೋರಿ: ಗೆಳತಿ ಜೊತೆ ಮನೀಶ್ ಮಲ್ಹೋತ್ರಾ ಪಾರ್ಟಿಯಲ್ಲಿ ಮಾಧುರಿ ದೀಕ್ಷಿತ್ ಮಗ!ಬ್ಯಾಂಕ್ ಲಾಕರ್’ ನಲ್ಲಿ ಇಟ್ಟಿದ್ದ ₹47 ಲಕ್ಷದ ಚಿನ್ನಾಭರಣ ನಾಪತ್ತೆ! ಮಹಿಳೆಯ ಹೋರಾಟಕ್ಕೆ ಕೊನೆಗೂ ಸಿಕ್ತು ಜಯ!ರಾಮಾಯಣ’ದಲ್ಲಿ ರಾಮನಾಗಿ ರಣಬೀರ್, ರಾವಣನಾಗಿ ಯಶ್; ಇಬ್ಬರಲ್ಲಿ ಶ್ರೀಮಂತ ನಟ ಯಾರು?ಕೈ ಕೈ ಹಿಡಿದು ಬಂದ ಐಶ್ವರ್ಯಾ ರೈ–ಅಭಿಷೇಕ್ ಜೋಡಿ; ರೊಮ್ಯಾಂಟಿಕ್ ಕ್ಷಣ ವೈರಲ್! ವಿಚ್ಛೇದನದ ವದಂತಿಗಳಿಗೆ ಬ್ರೇಕ್?ಆಸೀಸ್ ಕ್ರಿಕೆಟರ್ ಗೆ ಕೊಕೇನ್ ಶಾಕ್: ತಪ್ಪು ಒಪ್ಪಿಕೊಂಡು ನಿಷೇಧ ಪೂರ್ಣಗೊಳಿಸಿದ ಕ್ರಿಸ್ ಲಿನ್!ಧನ್ತೇರಸ್ 2026: ಚಿನ್ನ ಖರೀದಿಗೆ ಶುಭ ಮುಹೂರ್ತ ಯಾವಾಗ? ಬೆಂಗಳೂರು ಸೇರಿ ಪ್ರಮುಖ ನಗರಗಳ ಪೂಜಾ ಸಮಯ ಇಲ್ಲಿದೆಉತ್ತರ ಪ್ರದೇಶದಲ್ಲಿ ಮೂರನೇ ಅವಧಿಗಾಗಿ ಬಿಜೆಪಿಯ ತಂತ್ರ: ಕಲ್ಯಾಣ ಯೋಜನೆ, ಮಹಿಳಾ ಮತ ಮತ್ತು ಯೋಗಿ ವರ್ಚಸ್ಸಿನ ಮೇಲೆ ಭರವಸೆಭಾರತದಲ್ಲಿ ಅತಿ ಹೆಚ್ಚು ಸಕ್ಕರೆ ಉತ್ಪಾದಿಸುವ ಟಾಪ್ 5 ಕಂಪನಿಗಳು ಯಾವುದು ಗೊತ್ತಾ? ಇಲ್ಲಿದೆ ಮಾಹಿತಿ!