LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

BREAKING : ಬೆಂಗಳೂರಿನ ವಿಧಾನಸೌಧಕ್ಕೆ ಬಾಂಬ್ ಇಟ್ಟು ಸ್ಪೋಟಿಸಿದ್ದೇನೆ : AI ವಿಡಿಯೋ ಹರಿಬಿಟ್ಟ ಕಿಡಿಗೇಡಿ | Video Viral

ಬೆಂಗಳೂರು: ರಾಜ್ಯದ ಆಡಳಿತದ ಶಕ್ತಿ ಕೇಂದ್ರವಾದ ವಿಧಾನಸೌಧಕ್ಕೆ ಬಾಂಬ್ ಇಟ್ಟು ಸ್ಫೋಟಿಸಿರುವುದಾಗಿ ಬಿಂಬಿಸುವ ಕೃತಕ ಬುದ್ಧಿಮತ್ತೆ (AI) ಆಧಾರಿತ ವಿಡಿಯೋವೊಂದು ಇನ್‌ಸ್ಟಾಗ್ರಾಂನಲ್ಲಿ ಪ್ರತ್ಯಕ್ಷವಾಗಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಆತಂಕ ಹಾಗೂ ಆಕ್ರೋಶಕ್ಕೆ ಕಾರಣವಾಗಿದೆ. 'jnx king hg' ಎಂಬ ಇನ್‌ಸ್ಟಾಗ್ರಾಂ ಖಾತೆಯಿಂದ ಈ ವಿಡಿಯೋವನ್ನು ಹಂಚಿಕೊಳ್ಳಲಾಗಿದ್ದು, ವಿಧಾನಸೌಧದ ಮೇಲೆ ಗುಂಡಿನ ದಾಳಿ ನಡೆಸಿ, ಬಳಿಕ ಭೀಕರ ಸ್ಫೋಟ ಸಂಭವಿಸುವಂತೆ ಅತ್ಯಂತ ನೈಜವಾಗಿ ವಿಡಿಯೋವನ್ನು ಎಡಿಟ್ ಮಾಡಿ ಪೋಸ್ಟ್ ಮಾಡಲಾಗಿದೆ.

ಸದರಿ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಕ್ಷಣಾರ್ಧದಲ್ಲಿ ವೈರಲ್ ಆಗಿದ್ದು, 500ಕ್ಕೂ ಹೆಚ್ಚು ಕಾಮೆಂಟ್‌ಗಳು ಬಂದಿವೆ. ಘಟನೆಯ ತೀವ್ರತೆಯನ್ನು ಅರಿತ ನೆಟ್ಟಿಗರು ಇಂತಹ ಸೂಕ್ಷ್ಮ ಹಾಗೂ ಆತಂಕಕಾರಿ ವಿಡಿಯೋವನ್ನು ತಕ್ಷಣವೇ ಡಿಲೀಟ್ ಮಾಡುವಂತೆ ಪೋಸ್ಟ್ ಮಾಡಿದ ವ್ಯಕ್ತಿಗೆ ಸೂಚಿಸಿದ್ದಾರೆ. ಅಷ್ಟೇ ಅಲ್ಲದೆ, ಭದ್ರತೆಯ ದೃಷ್ಟಿಯಿಂದ ಬೆಂಗಳೂರು ನಗರ ಪೊಲೀಸರಿಗೆ (Bengaluru City Police) ಟ್ಯಾಗ್ ಮಾಡುವ ಮೂಲಕ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

ವಿಧಾನಸೌಧದಂತಹ ಅತಿ ಪ್ರಮುಖ ಹಾಗೂ ಭದ್ರತಾ ವಲಯಕ್ಕೆ ಸೇರಿದ ಕಟ್ಟಡದ ಕುರಿತು ಸಾರ್ವಜನಿಕರಲ್ಲಿ ಭಯ ಹುಟ್ಟಿಸುವ ಉದ್ದೇಶದಿಂದ ಈ ವಿಡಿಯೋ ಸೃಷ್ಟಿಸಲಾಗಿದೆಯೇ ಎಂಬ ಅನುಮಾನಗಳು ವ್ಯಕ್ತವಾಗಿವೆ. ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು, ವಿಡಿಯೋ ಅಪ್‌ಲೋಡ್ ಮಾಡಿದ ವ್ಯಕ್ತಿಯ ಐಪಿ ವಿಳಾಸ ಹಾಗೂ ಆತನ ಮೂಲ ಉದ್ದೇಶವನ್ನು ಪತ್ತೆ ಹಚ್ಚಲು ಸೈಬರ್ ಪೊಲೀಸ್ ತಂಡದೊಂದಿಗೆ ಕಾರ್ಯಾಚರಣೆ ಆರಂಭಿಸಿದ್ದು, ಆರೋಪಿಯನ್ನು ಶೀಘ್ರದಲ್ಲೇ ವಶಕ್ಕೆ ಪಡೆಯಲು ಬಲೆ ಬೀಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸೇವೆಯಲ್ಲಿರುವ ಅಗ್ನಿವೀರರಿಗೆ ಮಾತ್ರ ಹೊಸ ಬದಲಾವಣೆ‘ರಾಮಾಯಣ’ ಸಿನಿಮಾ ನೋಡಿ ಭಾವುಕರಾದ ಅನುಪಮ್ ಖೇರ್: ಭಾರತೀಯ ಚಿತ್ರರಂಗದ ಸರ್ವಶ್ರೇಷ್ಠ ಸಿನಿಮಾ ಎಂದ ನಟ!ಮುಂಬೈ ಅಂತರ ಶಾಲಾ ಬಾಸ್ಕೆಟ್‌ಬಾಲ್ ಧಮಾಕಾ: ಡಾನ್ ಬೊಸ್ಕೊ ಮಣಿಸಿ ಟ್ರೋಫಿ ಎತ್ತಿಹಿಡಿದ ಅಂಡೇರಿಯಾ ಎಂಪಿಎಸ್!Motorola Signature 27 Snapdragon 8 Elite Extreme Gen 6 ಮತ್ತು 200MP ಟೆಲಿಫೋಟೋ ಲೆನ್ಸ್‌ನೊಂದಿಗೆ ಅನಾವರಣಬಾಲಿವುಡ್ ಅಂಗಳದಲ್ಲಿ ಹೊಸ ಲವ್ ಸ್ಟೋರಿ: ಗೆಳತಿ ಜೊತೆ ಮನೀಶ್ ಮಲ್ಹೋತ್ರಾ ಪಾರ್ಟಿಯಲ್ಲಿ ಮಾಧುರಿ ದೀಕ್ಷಿತ್ ಮಗ!ಬ್ಯಾಂಕ್ ಲಾಕರ್’ ನಲ್ಲಿ ಇಟ್ಟಿದ್ದ ₹47 ಲಕ್ಷದ ಚಿನ್ನಾಭರಣ ನಾಪತ್ತೆ! ಮಹಿಳೆಯ ಹೋರಾಟಕ್ಕೆ ಕೊನೆಗೂ ಸಿಕ್ತು ಜಯ!ರಾಮಾಯಣ’ದಲ್ಲಿ ರಾಮನಾಗಿ ರಣಬೀರ್, ರಾವಣನಾಗಿ ಯಶ್; ಇಬ್ಬರಲ್ಲಿ ಶ್ರೀಮಂತ ನಟ ಯಾರು?ಕೈ ಕೈ ಹಿಡಿದು ಬಂದ ಐಶ್ವರ್ಯಾ ರೈ–ಅಭಿಷೇಕ್ ಜೋಡಿ; ರೊಮ್ಯಾಂಟಿಕ್ ಕ್ಷಣ ವೈರಲ್! ವಿಚ್ಛೇದನದ ವದಂತಿಗಳಿಗೆ ಬ್ರೇಕ್?ಆಸೀಸ್ ಕ್ರಿಕೆಟರ್ ಗೆ ಕೊಕೇನ್ ಶಾಕ್: ತಪ್ಪು ಒಪ್ಪಿಕೊಂಡು ನಿಷೇಧ ಪೂರ್ಣಗೊಳಿಸಿದ ಕ್ರಿಸ್ ಲಿನ್!ಧನ್ತೇರಸ್ 2026: ಚಿನ್ನ ಖರೀದಿಗೆ ಶುಭ ಮುಹೂರ್ತ ಯಾವಾಗ? ಬೆಂಗಳೂರು ಸೇರಿ ಪ್ರಮುಖ ನಗರಗಳ ಪೂಜಾ ಸಮಯ ಇಲ್ಲಿದೆ