LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

BREAKING : ಧಾರವಾಡ, ಕೋಲಾರ ಜಿಲ್ಲಾ ಕೋರ್ಟ್ ಗೆ ಬಾಂಬ್ ಬೆದರಿಕೆ ಕರೆ |Bomb Threat

ಧಾರವಾಡ: ಧಾರವಾಡ, ಕೋಲಾರ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಕರೆ ಬಂದ ಹಿನ್ನೆಲೆಯಲ್ಲಿ ನ್ಯಾಯಾಲಯ ಆವರಣದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು. ಬೆದರಿಕೆ ಮಾಹಿತಿ ಸಿಗುತ್ತಿದ್ದಂತೆ ಪೊಲೀಸರು ಹಾಗೂ ಭದ್ರತಾ ಸಿಬ್ಬಂದಿ ಎಚ್ಚೆತ್ತುಕೊಂಡು ತಕ್ಷಣ ಶೋಧ ಕಾರ್ಯಾಚರಣೆ ಆರಂಭಿಸಿದರು.

ಧಾರವಾಡ ಮತ್ತು ಕೋಲಾರ ಜಿಲ್ಲಾ ನ್ಯಾಯಾಲಯಗಳಿಗೆ ಬಾಂಬ್ ಬೆದರಿಕೆ ಕರೆ ಬಂದ ಹಿನ್ನೆಲೆಯಲ್ಲಿ ಎರಡೂ ಕೋರ್ಟ್ ಸಂಕೀರ್ಣಗಳಲ್ಲಿ ಆತಂಕದ ವಾತಾವರಣ ನಿರ್ಮಾಣವಾಯಿತು. ಮುನ್ನೆಚ್ಚರಿಕಾ ಕ್ರಮವಾಗಿ ವಕೀಲರು, ನ್ಯಾಯಾಲಯದ ಸಿಬ್ಬಂದಿ ಹಾಗೂ ಸಾರ್ವಜನಿಕರನ್ನು ಹೊರಗೆ ತೆರಳುವಂತೆ ಸೂಚಿಸಲಾಗಿದ್ದು, ಬಾಂಬ್ ನಿಷ್ಕ್ರಿಯ ದಳ ಮತ್ತು ಶ್ವಾನದಳದಿಂದ ತಪಾಸಣೆ ನಡೆಸಲಾಯಿತು. ಬೆದರಿಕೆ ಕರೆ ಹಿನ್ನೆಲೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಮುನ್ನೆಚ್ಚರಿಕಾ ಕ್ರಮವಾಗಿ ನ್ಯಾಯಾಲಯದ ಒಳಗಿದ್ದ ವಕೀಲರು, ಸಿಬ್ಬಂದಿ ಹಾಗೂ ಸಾರ್ವಜನಿಕರನ್ನು ಹೊರಗೆ ಕಳುಹಿಸಲಾಯಿತು. ನ್ಯಾಯಾಲಯದ ಆವರಣವನ್ನು ಸಂಪೂರ್ಣವಾಗಿ ಖಾಲಿ ಮಾಡಲಾಗಿದ್ದು, ಬಾಂಬ್ ನಿಷ್ಕ್ರಿಯ ದಳ ಹಾಗೂ ಶ್ವಾನದಳದಿಂದ ತಪಾಸಣೆ ನಡೆಸಲಾಯಿತು.

ಬೆದರಿಕೆ ಕರೆ ಬಂದ ಹಿನ್ನೆಲೆಯಲ್ಲಿ ನ್ಯಾಯಾಲಯದ ಕಾರ್ಯಚಟುವಟಿಕೆಗಳಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಯಿತು. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬೆದರಿಕೆಯ ಮೂಲದ ಕುರಿತು ತನಿಖೆ ಕೈಗೊಂಡಿದ್ದಾರೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಇದು ಹುಸಿ ಬೆದರಿಕೆ ಆಗಿರುವ ಸಾಧ್ಯತೆಯನ್ನೂ ಪೊಲೀಸರು ಪರಿಶೀಲಿಸುತ್ತಿದ್ದಾರೆ. ಸಂಪೂರ್ಣ ತಪಾಸಣೆ ಬಳಿಕವೇ ನ್ಯಾಯಾಲಯದ ಕಾರ್ಯಾಚರಣೆ ಪುನರಾರಂಭಿಸುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿಮಕ್ಕಳ ಮನಸ್ಸು, ಮೆದುಳಿನ ಶಕ್ತಿಗೆ ದಾರಿದೀಪ ಈ ಪುಸ್ತಕ: ತಪ್ಪದೇ ಖರೀದಿಸಿ, ನಿಮ್ಮ ಮಕ್ಕಳಿಗೆ ತಪ್ಪದೇ ಓದಿಸಿ!ಹಿಂದೂಗಳ ಆಚರಣೆಗೆ ಸರ್ಕಾರ ಅಡ್ಡಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಕಾಂಗ್ರೆಸ್ ಪಕ್ಷ ಸಂಘಟನೆ ಬಲವರ್ಧನೆಗೆ 'ಕೆಪಿಸಿಸಿ ಕನೆಕ್ಟ್ ಸೆಂಟರ್' ಸ್ಥಾಪನೆ: ಪದಾಧಿಕಾರಿಗಳ ನೇಮಕ