LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

BREAKING : ಕರ್ನಾಟಕದ ನೂತನ ‘CM’ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರಕ್ಕೆ ಮುಹೂರ್ತ ಫಿಕ್ಸ್ |D.K Shivakumar

ಬೆಂಗಳೂರು : ಜೂನ್ 3 ರಂದು ಬುಧವಾರ ಸಂಜೆ 4 ಗಂಟೆಗೆ ಕೆಪಿಸಿಸಿ ಅಧ್ಯಕ್ಷ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಬೆಂಗಳೂರಿನ ಲೋಕಭವನದ ಗ್ಲಾಸ್ ಹೌಸ್‌ನಲ್ಲಿ ಜೂನ್ 3 ರಂದು ಪ್ರಮಾಣವಚನ ಸಮಾರಂಭ ನಡೆಯಲಿದೆ.

ಪಕ್ಷದ ಸೂಚನೆಯಂತೆ, ಕಾರ್ಯಕ್ರಮವನ್ನು ಅದ್ದೂರಿಯಿಲ್ಲದೆ ಅತ್ಯಂತ ಸರಳವಾಗಿ ನಡೆಸಲು ನಿರ್ಧರಿಸಲಾಗಿದೆ. ಆಡಂಬರಕ್ಕಿಂತ ಕೆಲಸ ಮತ್ತು ಸೇವೆಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಕಾಂಗ್ರೆಸ್ ನಾಯಕರು ತಿಳಿಸಿದ್ದಾರೆ.ಕಾರ್ಯಕ್ರಮಕ್ಕೆ ಸಾವಿರಾರು ಮಂದಿ ಬರುವುದರಿಂದ ಟ್ರಾಫಿಕ್ ಸಮಸ್ಯೆ ಮತ್ತು ಅನಾನುಕೂಲ ಉಂಟಾಗುವುದನ್ನು ತಪ್ಪಿಸಲು, ಕಾರ್ಯಕರ್ತರು ಮತ್ತು ಬೆಂಬಲಿಗರು ಸ್ಥಳಕ್ಕೆ ಬರುವ ಸಾಹಸ ಮಾಡಬೇಡಿ ಎಂದು ಮನವಿ ಮಾಡಲಾಗಿದೆ. ಮುಖ್ಯಮಂತ್ರಿಯಾದ ನಂತರ ಡಿ.ಕೆ. ಶಿವಕುಮಾರ್ ಅವರೇ ಸ್ವತಃ ಎಲ್ಲಾ ಜಿಲ್ಲಾ ಕೇಂದ್ರಗಳಿಗೆ ಭೇಟಿ ನೀಡಿ ಸಾರ್ವಜನಿಕರನ್ನು ಭೇಟಿಯಾಗಲಿದ್ದಾರೆ.

ಕರ್ನಾಟಕದ ರಾಜಕೀಯದಲ್ಲಿ ಕಳೆದ ಕೆಲವು ದಿನಗಳಿಂದ ನಡೆಯುತ್ತಿದ್ದ ಕುತೂಹಲಕಾರಿ ಬೆಳವಣಿಗೆಗಳಿಗೆ ತೆರೆಬಿದ್ದಿದ್ದು, ಕೆಪಿಸಿಸಿ ಅಧ್ಯಕ್ಷ ಮತ್ತು ಹಾಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುವುದು ಖಚಿತವಾಗಿದೆ. ಮೇ 28ರಂದು ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ, ಕಾಂಗ್ರೆಸ್ ಹೈಕಮಾಂಡ್‌ನ ನಿರ್ದೇಶನದ ಮೇರೆಗೆ ಈ ಅಧಿಕಾರ ಹಸ್ತಾಂತರ ಪ್ರಕ್ರಿಯೆ ನಡೆಯುತ್ತಿದೆ.

ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ, ಕಾಂಗ್ರೆಸ್ ಹೈಕಮಾಂಡ್ ಸೂಚನೆಯ ಮೇರೆಗೆ ಡಿ.ಕೆ. ಶಿವಕುಮಾರ್ ಅವರನ್ನು ನೂತನ ಸಿಎಂ ಆಗಿ ಆಯ್ಕೆ ಮಾಡಲಾಗಿದೆ.

ನಾಯಕತ್ವದ ಬದಲಾವಣೆ: 2023ರ ವಿಧಾನಸಭಾ ಚುನಾವಣೆಯ ನಂತರ ರೂಪಿಸಲಾಗಿದ್ದ ಆಂತರಿಕ ನಾಯಕತ್ವದ ಒಪ್ಪಂದದ ಭಾಗವಾಗಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ್ದು, ಡಿ.ಕೆ. ಶಿವಕುಮಾರ್ ಅವರಿಗೆ ಅಧಿಕಾರ ಹಸ್ತಾಂತರವಾಗಿದೆ.

ಸಾರ್ವಜನಿಕರಿಗೆ ಮನವಿ: ಕಾರ್ಯಕ್ರಮಕ್ಕೆ ಸಾವಿರಾರು ಮಂದಿ ಸೇರುವುದರಿಂದ ಟ್ರಾಫಿಕ್ ದಟ್ಟಣೆ ಮತ್ತು ಸಾರ್ವಜನಿಕರಿಗೆ ಅನಾನುಕೂಲವಾಗಬಹುದು ಎಂಬ ಹಿನ್ನೆಲೆಯಲ್ಲಿ, ಬೆಂಬಲಿಗರು ಬೆಂಗಳೂರಿಗೆ ಬರುವ ಸಾಹಸ ಮಾಡಬೇಡಿ ಎಂದು ಪಕ್ಷದ ನಾಯಕರು ಮನವಿ ಮಾಡಿದ್ದಾರೆ. ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ನಂತರ, ಡಿ.ಕೆ. ಶಿವಕುಮಾರ್ ಅವರೇ ಸ್ವತಃ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಿಗೆ ಭೇಟಿ ನೀಡಿ ಜನರ ಆಶೀರ್ವಾದ ಪಡೆಯಲಿದ್ದಾರೆ.

ಸಚಿವ ಸಂಪುಟ: ಡಿ.ಕೆ. ಶಿವಕುಮಾರ್ ಅವರೊಂದಿಗೆ ಸುಮಾರು 8 ರಿಂದ 10 ಮಂದಿ ಸಚಿವರೂ ಪ್ರಮಾಣವಚನ ಸ್ವೀಕರಿಸುವ ನಿರೀಕ್ಷೆಯಿದೆ. ಮುಂದಿನ ರಾಜ್ಯಸಭಾ ಚುನಾವಣೆಯ ನಂತರ ಸಚಿವ ಸಂಪುಟದ ಪೂರ್ಣ ವಿಸ್ತರಣೆಯಾಗುವ ಸಾಧ್ಯತೆ ಇದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ