LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

BREAKING: ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ

ಮುಂಬೈ: ಭಾರತೀಯ ಚಿತ್ರರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ವಿಧಿವಶರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು.

ವಯೋಸಹಜ ಕಾಯಿಲೆ ಹಾಗೂ ಹೃದಯದ ಸೋಂಕಿನಿಂದ ಬಳಲುತ್ತಿದ್ದ ಆಶಾ ಭೋಸ್ಲೆ ಅವರಿಗೆ ನಿನ್ನೆ ಹೃದಯಾಘಾತವಾಗಿತ್ತು. ತಕ್ಷಣ ಅವರನ್ನು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಕೊನೆಯುಸಿರೆಳೆದಿದ್ದಾರೆ.

ಆಶಾ ಭೋಸ್ಲೆ ಅವರಿಗೆ ತೀವ್ರ ನಿಗಾ ಘಟಕದಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆಗೆ ಸ್ಪಂದಿಸದ ಅವರು ಇಂದು ಮಧ್ಯಾಹ್ನದ ವೇಳೆಗೆ ನಿಧನ ಹೊಂದಿದ್ದಾರೆ. ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ವೈದ್ಯ, ಡಾ ಪ್ರತೀಕ್ ಸಂಧಾನಿ ಅವರು ಮಾಹಿತಿ ನೀಡಿದ್ದು, ಆಶಾ ಭೋಸ್ಲೆ ಅವರು ಬಹು ಅಂಗಾಂಗ ವೈಫಲ್ಯದಿಂದ ನಿಧನ ಹೊಂದಿದ್ದಾರೆ ಎಂದು ತಿಳಿಸಿದ್ದಾರೆ.

ಆಶಾ ಭೋಸ್ಲೆ ನಿಧನಕ್ಕೆ ಇಡೀ ಭಾರತೀಯ ಚಿತ್ರರಂಗವೇ ಕಂಬನಿ ಮಿಡಿದಿದೆ. ಆಶಾ ಭೋಸ್ಲೆ, ಭಾರತ ರತ್ನ ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಅವರ ಸಹೋದರಿ. ಹಿಂದಿ, ಮರಾಠಿ, ಕನ್ನಡ, ತೆಲುಗು, ತಮಿಲೂ, ಮಲಯಾಳಂ, ಅಸ್ಸಾಮಿ, ಭೋಜ್ ಪುರಿ, ನೇಪಾಳಿ, ಬಾಂಗ್ಲಾ ಸೇರಿದಂತೆ ಹಲವಾರು ಭಾಷೆಗಳಲ್ಲಿ ಹಾಡಿದ್ದ ಆಶಾ ಭೋಸ್ಲೆ ಜನಮನಗೆದ್ದಿದ್ದರು.

ಅವರ ಗಾನಸಿರಿಗೆ ಎರಡು ರಾಷ್ಟ್ರ ಪ್ರಶಸ್ತಿ, ಏಷ್ಯಾ ನೈಟಿಂಗೇಲ್, ಲತಾ ಮಂಗೇಶ್ಕರ್ ಪ್ರಶಸ್ತಿ, ಹಲವಾರಿ ಫಿಲ್ಮ್ ಫೇರ್ ಪ್ರಶಸ್ತಿಗಳು ಲಭ್ಯವಾಗಿವೆ. ಆಶಾ ಭೋಸ್ಲೆ ಅವರ ಹಾಡುಗಳು ಮೂರು ಬಾರಿ ಗ್ರ್ಯಾಮಿ ಪ್ರಶಸ್ತಿಗೆ ನಾಮಿನೇಟ್ ಕೂಡ ಆಗಿದ್ದವು.

ಆಶಾ ಭೋಸ್ಲೆ ಅವರು ‘ಭಾರತದ ನೈಟಿಂಗೇಲ್’ ಎಂದೇ ಪ್ರಸಿದ್ಧರಾಗಿದ್ದ ಗಾಯಕಿ. ಅಕ್ಕ ಲತಾ ಮಾಂಗೇಶ್ಕರ್ ಅವರಂತೆ ಭಾರತೀಯ ಸಂಗೀತ ಇತಿಹಾಸದಲ್ಲಿ ಅತ್ಯಂತ ಪ್ರಸಿದ್ಧ ಹಿನ್ನೆಲೆ ಗಾಯಕಿಯಾಗಿ ಹೆಸರುವಾಸಿಯಾಗಿದ್ದರು. 8 ದಶಕಗಳಿಗೂ ಹೆಚ್ಚಿನ ಅವಧಿಯ ವೃತ್ತಿಜೀವನದಲ್ಲಿ ಅವರು ಹಲವಾರು ಭಾರತೀಯ ಭಾಷೆಗಳ ಹಾಡುಗಳಿಗೆ ಧ್ವನಿಯಾಗಿದ್ದರು.

12 ಸಾವಿರಕ್ಕೂ ಹೆಚ್ಚು ಹಾಡುಗಳಿಗೆ ದ್ವನಿಯಾಗಿದ್ದಾರೆ. ಸಿನಿಮಾ ಮಾಯ್ರವಲ್ಲ ಖಾಸಗಿ ಆಲ್ಬಮ್‌ಗಳಲ್ಲಿಯೂ ಹಾಡಿದ್ದಾರೆ. ಭಾರತ ಮತ್ತು ವಿದೇಶಗಳಲ್ಲಿ ಲೈವ್ ಸಂಗೀತ ಕಾರ್ಯಕ್ರಮಗಳನ್ನು ನೀಡಿದ್ದಾರೆ. ಅವರು ಹಾಡಿದ ಕೊನೆಯ ಹಾಡೆಂದರೆ, 2022 ರಲ್ಲಿ ಜಾಕಿ ಶ್ರಾಫ್ ಅವರು ನಟಿಸಿದ್ದ ಲೈಫ್ಸ್ ಗುಡ್ ಸಿನಿಮಾದ ರುತ್ ಭೀಗೆ ತಾನ್.

ಆಶಾ ಭೋಸ್ಲೆ ಸಂಗೀತ ಕ್ಷೇತ್ರದಲ್ಲಿ ಮಾತ್ರವಲ್ಲ ಉದ್ಯಮಿ ಕೂಡ ಆಗಿದ್ದರು. ರೆಸ್ಟೋರೆಂಟ್ ನ್ನು ಕೂಡ ಅವರು ಹೊಂದಿದ್ದರು. ಆಶಾಸ್ ಎಂಬ ಅವರ ರೆಸ್ಟೋರೆಂಟ್ ಮುಂಬೈ, ದುಬೈ, ಕುವೈತ್ ಗಳಲ್ಲಿ ಖ್ಯಾತಿ ಪಡೆದುಕೊಂಡಿದೆ.

ಸಂಗೀತ ಕ್ಷೇತ್ರಕ್ಕೆ ಆಶಾ ಭೋಸ್ಲೆ ಅವರು ನೀಡಿದ ಅದ್ಭುತ ಕೊಡುಗೆಗಾಗಿ ಹಲವಾರು ಪ್ರಶಸ್ತಿಗಳು ಅವರನ್ನು ಅರಸಿ ಬಂದಿವೆ. 2000ದಲ್ಲಿ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ, 2008ರಲ್ಲಿ ಭಾರತದ ಎರಡನೇ ಅತ್ಯುನ್ನತ ನಾಗರಿಕ ಗೌರವವಾದ ಪದ್ಮವಿಭೂಷಣ ಸೇರಿದಂತೆ ಹಲವಾರು ಗೌರವಗಳು ಮತ್ತು ಪ್ರಶಸ್ತಿಗಳು ಲಭಿಸಿವೆ. 2011ರಲ್ಲಿ, ಸಂಗೀತ ಇತಿಹಾಸದಲ್ಲಿ ಹೆಚ್ಚು ಧ್ವನಿಮುದ್ರಣಗೊಂಡ ಕಲಾವಿದೆ ಎಂಬ ಗಿನ್ನೆಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ಕೂಡ ಇವರ ಹೆಸರಲ್ಲಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ