LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

BREAKING : ರಾಜ್ಯ ಸರ್ಕಾರದಿಂದ ಐವರು ‘KAS’ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ |Transfer

ಬೆಂಗಳೂರು:   ರಾಜ್ಯ ಸರ್ಕಾರವು ಹಿರಿಯ ಐಎಎಸ್ ಅಧಿಕಾರಿಗಳ ವರ್ಗಾವಣೆ ಹಾಗೂ ಹೆಚ್ಚುವರಿ ಹೊಣೆಗಾರಿಕೆ ನೀಡುವ ಕುರಿತು ಮಹತ್ವದ ಆದೇಶ ಹೊರಡಿಸಿದೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (DPAR) ಬುಧವಾರ ಪ್ರಕಟಿಸಿದ ಅಧಿಸೂಚನೆಯಂತೆ ಹಲವು ಇಲಾಖೆಗಳ ಆಡಳಿತಾತ್ಮಕ ಹುದ್ದೆಗಳಲ್ಲಿ ಬದಲಾವಣೆ ಮಾಡಲಾಗಿದೆ.

  • ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿರುವ ಅಂಜುಂ ಪರ್ವೇಜ್ (IAS) ಅವರಿಗೆ ಸಾರ್ವಜನಿಕ ಕಾಮಗಾರಿಗಳ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹುದ್ದೆಯ ಹೆಚ್ಚುವರಿ ಹೊಣೆಗಾರಿಕೆ ನೀಡಲಾಗಿದೆ.
  • ಕಂದಾಯ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿರುವ ರಾಜೇಂದ್ರ ಕುಮಾರ್ ಕಟಾರಿಯಾ (IAS) ಅವರಿಗೆ ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹುದ್ದೆಯ ಹೆಚ್ಚುವರಿ ಜವಾಬ್ದಾರಿ ವಹಿಸಲಾಗಿದೆ.
  • ವಸತಿ ಇಲಾಖೆಯ ಕಾರ್ಯದರ್ಶಿಯಾಗಿದ್ದ ಮೋಹನ್ ರಾಜ್ ಕೆ.ಪಿ. (IAS) ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸಮಾಜ ಕಲ್ಯಾಣ ಇಲಾಖೆಯ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ.
  • ಇದೇ ವೇಳೆ ಮೋಹನ್ ರಾಜ್ ಕೆ.ಪಿ. ಅವರಿಗೆ ವಸತಿ ಇಲಾಖೆಯ ಕಾರ್ಯದರ್ಶಿ ಹುದ್ದೆಯ ಹೆಚ್ಚುವರಿ ಹೊಣೆಗಾರಿಕೆಯನ್ನು ಮುಂದುವರಿಸಿ ನೀಡಲಾಗಿದೆ.
  • ಸಾರಿಗೆ ಮತ್ತು ರಸ್ತೆ ಸುರಕ್ಷತಾ ಆಯುಕ್ತರಾಗಿರುವ ಡಾ. ಸೆಲ್ವಮಣಿ ಆರ್. (IAS) ಅವರಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ವ್ಯವಸ್ಥಾಪಕ ನಿರ್ದೇಶಕರ ಹುದ್ದೆಯ ಹೆಚ್ಚುವರಿ ಜವಾಬ್ದಾರಿ ನೀಡಲಾಗಿದೆ.
  • ಹುದ್ದೆ ನಿರೀಕ್ಷೆಯಲ್ಲಿದ್ದ ಡಾ. ಮಹೇಶ್ ಎಂ. (IAS) ಅವರನ್ನು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (KUWSDB) ವ್ಯವಸ್ಥಾಪಕ ನಿರ್ದೇಶಕರಾಗಿ ನೇಮಕ ಮಾಡಲಾಗಿದೆ.
Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ