ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್ಸಿ) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ. ವಿಶೇಷ ನ್ಯಾಯಾಲಯವು ಪ್ರಮುಖ ಆರೋಪಿಗಳಾದ ಆಯೋಗದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಮತ್ತು ಸದಸ್ಯೆ ಬಿ.ವಿ.ಗೀತಾ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶಿಸಿದೆ.
ಅಕ್ಟೋಬರ್ 6ರಂದು ಇ.ಡಿ. (ಜಾರಿ ನಿರ್ದೇಶನಾಲಯ) ಅಧಿಕಾರಿಗಳಿಂದ ಬಂಧಿಸಲ್ಪಟ್ಟಿದ್ದ ಇಬ್ಬರು ಆರೋಪಿಗಳನ್ನು, 13 ದಿನಗಳ ಕಾಲ ತಮ್ಮ ವಶಕ್ಕೆ ಪಡೆದು ಅಧಿಕಾರಿಗಳು ತೀವ್ರ ವಿಚಾರಣೆ ನಡೆಸಿದ್ದರು. ವಿಚಾರಣಾ ಅವಧಿ ಸೋಮವಾರ ಅಂತ್ಯಗೊಂಡ ಹಿನ್ನೆಲೆಯಲ್ಲಿ ಅವರನ್ನು ಕೋರ್ಟ್ಗೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯದ ಆದೇಶದ ಮೇರೆಗೆ ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಕರೆದೊಯ್ಯಲಾಗಿದೆ.