LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

BREAKING : KPSC ಹಗರಣ : ತನಿಖೆಗೆ ಅಲೋಕ್ ಕುಮಾರ್ ನೇತೃತ್ವದಲ್ಲಿ SIT ರಚಿಸಿ ಹೈಕೋರ್ಟ್ ಆದೇಶ 

ಬೆಂಗಳೂರು :ಕರ್ನಾಟಕ ಲೋಕಸೇವಾ ಆಯೋಗ (KPSC) ನಡೆಸಿದ ಪಶುವೈದ್ಯಾಧಿಕಾರಿಗಳ ನೇಮಕಾತಿ ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಹಗರಣದ ತನಿಖೆಗೆ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಹಿರಿಯ ಐಪಿಎಸ್ ಅಧಿಕಾರಿ ಆಲೋಕ್ ಕುಮಾರ್ ಅವರ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ (SIT) ರಚನೆ ಮಾಡಿ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಏಕಸದಸ್ಯ ಪೀಠವು ಈ ನಿರ್ದೇಶನ ನೀಡಿದೆ. ಈ ಎಸ್‌ಐಟಿ ತಂಡದಲ್ಲಿ ಅನುಭವಿ ಅಧಿಕಾರಿಗಳಾದ ದಿವ್ಯಾ ಗೋಪಿನಾಥ್, ಅನೂಪ್ ಶೆಟ್ಟಿ, ಕುಶಾಲ್ ಚೌಕ್ಸೆ ಮತ್ತು ಶರ್ಮಾ ಮಿಶ್ರಾ ಅವರು ಸದಸ್ಯರಾಗಿರಲಿದ್ದಾರೆ.

ನೇಮಕಾತಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ (ED) ಅಧಿಕಾರಿಗಳಿಗೂ ಅಗತ್ಯ ಸಹಕಾರ ಹಾಗೂ ಮಾಹಿತಿ ನೀಡುವಂತೆ ಎಸ್‌ಐಟಿಗೆ ಹೈಕೋರ್ಟ್ ಸೂಚಿಸಿದೆ. ಹಿರಿಯ ಮತ್ತು ಅನುಭವಿ ಪೊಲೀಸ್ ಅಧಿಕಾರಿಗಳನ್ನು ಒಳಗೊಂಡ ಈ ವಿಶೇಷ ತಂಡದಿಂದ ಸಮಗ್ರ ತನಿಖೆ ನಡೆಯಲಿದ್ದು, ಹಗರಣದ ಸತ್ಯಾಸತ್ಯತೆ ಶೀಘ್ರದಲ್ಲೇ ಹೊರಬರಲಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING: ನಾಳೆಯಿಂದ ರಾಜ್ಯಾದ್ಯಂತ '108' ಆಂಬುಲೆನ್ಸ್ ಸೇವೆ ಬಂದ್: ಸಾಮೂಹಿಕ ರಾಜೀನಾಮೆಗೆ ನೌಕರರ ತೀರ್ಮಾನಪಶ್ಚಿಮಘಟ್ಟದ ಮೇಲೆ ಕಸ್ತೂರಿ ರಂಗನ್ ವರದಿ ತೂಗುಗತ್ತಿ: ಸಚಿವ ಈಶ್ವರ ಖಂಡ್ರೆವಿಶ್ವವಿಖ್ಯಾತ ಮೈಸೂರು ದಸರಾ 2026: ಖಾಸಗಿ ದರ್ಬಾರ್‌ ದಿನಾಂಕ ಪ್ರಕಟಿಸಿದ ರಾಜಮಾತೆ ಪ್ರಮೋದಾದೇವಿ ಒಡೆಯರ್ಹಿರಿಯೂರಲ್ಲಿ ಇಸ್ಪಿಟ್ ಅಡ್ಡೆಯ ಮೇಲೆ ಪೊಲೀಸರ ಭರ್ಜರಿ ದಾಳಿ; 13 ಮಂದಿ ಅರೆಸ್ಟ್, ₹3.36 ಲಕ್ಷ ನಗದು ಜಪ್ತಿ!BIG NEWS: ಅಕ್ಕಿಯಿಂದ 'ಆಹಾರ ಕಿಟ್'​​ಗೆ ಬದಲಾವಣೆ: 'ಇಂದಿರಾ ಕಿಟ್​ ಯೋಜನೆ' ಪುನರ್​ ರಚಿಸಲು ಮುಂದಾದ ರಾಜ್ಯ ಸರ್ಕಾರ!ಹಿರಿಯೂರಲ್ಲಿ ಇಸ್ಪಿಟ್ ಅಡ್ಡೆಯ ಮೇಲೆ ಪೊಲೀಸರ ಭರ್ಜರಿ ದಾಳಿ; 13 ಮಂದಿ ಅರೆಸ್ಟ್, ₹3.36 ಲಕ್ಷ ನಗದು ಜಪ್ತುಪಶ್ಚಿಮ ಘಟ್ಟ ರಕ್ಷಣೆಗೆ, ಸ್ಥಳೀಯರ ಹಿತಾಸಕ್ತಿ ಕಾಯಲು ಸರ್ಕಾರ ಬದ್ಧ: ವಿಧಾನಸಭೆಯಲ್ಲಿ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆRain In Bengaluru: ಬೆಂಗಳೂರಲ್ಲಿ ವರುಣನ ಆರ್ಭಟ: ಜಲಾವೃತಗೊಂಡ ರಸ್ತೆಗಳು, ವಾಹನ ಸವಾರರ ಪರದಾಟರಾಜ್ಯದ ರೈತರು, ಜನರ ರಕ್ಷಣೆಗೆ ಬದ್ಧ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್BREAKING : KPSC ಹಗರಣ : ತನಿಖೆಗೆ ಅಲೋಕ್ ಕುಮಾರ್ ನೇತೃತ್ವದಲ್ಲಿ SIT ರಚಿಸಿ ಹೈಕೋರ್ಟ್ ಆದೇಶ