LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

BREAKING : ಬೆಂಗಳೂರಲ್ಲಿ ಇಂಧನ ಭವನದಿಂದ ಜಿಗಿದು 'KPTCL' ಸಿಬ್ಬಂದಿ ಆತ್ಮಹತ್ಯೆ!

ಬೆಂಗಳೂರು: ನಗರದ ರೇಸ್‌ಕೋರ್ಸ್‌ ರಸ್ತೆಯಲ್ಲಿರುವ ಕೆಪಿಟಿಸಿಎಲ್‌ನ 'ಇಂಧನ ಭವನ'ದ 12ನೇ ಮಹಡಿಯಿಂದ ಹಾರಿ ಗ್ರೂಪ್-ಸಿ ನೌಕರರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಸಂಭವಿಸಿದೆ. ಜಯನಗರ ನಿವಾಸಿ ಹಾಗೂ ಕೆಪಿಟಿಸಿಎಲ್‌ನ ಗ್ರಾಚೂಟಿ ವಿಭಾಗದಲ್ಲಿ ಜೂನಿಯರ್ ಅಸಿಸ್ಟೆಂಟ್ ಆಗಿ ಸೇವೆ ಸಲ್ಲಿಸುತ್ತಿದ್ದ ವಜ್ರಕುಮಾರ್ (48) ಮೃತ ದುರ್ದೈವಿ. ಸಂಜೆ 5 ಗಂಟೆಯ ಸುಮಾರಿಗೆ ಇಂಧನ ಭವನ ಕಟ್ಟಡದ ಮೇಲಿಂದ ಏಕಾಏಕಿ ಕೆಳಗೆ ಹಾರಿ ಗಂಭೀರವಾಗಿ ಗಾಯಗೊಂಡಿದ್ದ ಇವರು ಸ್ಥಳದಲ್ಲಿಯೇ ಕೊನೆಯುಸಿರೆಳೆದಿದ್ದಾರೆ. ಮಾಹಿತಿ ತಿಳಿದ ಕೂಡಲೇ ಹೈಗೌಂಡ್ಸ್ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.

ಮೃತರು ಕಳೆದ ಕೆಲವು ದಿನಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದು, ಅದಕ್ಕಾಗಿ ಚಿಕಿತ್ಸೆ ಕೂಡ ಪಡೆಯುತ್ತಿದ್ದರು ಎಂದು ತಿಳಿದುಬಂದಿದೆ. ಇದರ ನಡುವೆ ಇತ್ತೀಚೆಗೆ ಅವರ 30 ವರ್ಷದ ಬಾಮೈದ (ಮೈದುನ) ಅಕಾಲಿಕ ಮರಣ ಹೊಂದಿದ್ದು, ಈ ಸಾವು ವಜ್ರಕುಮಾರ್ ಅವರ ಮನಸ್ಸಿನ ಮೇಲೆ ತೀವ್ರವಾದ ಪರಿಣಾಮ ಬೀರಿದೆ. ಬಾಮೈದನ ಅಗಲಿಕೆಯ ದುಃಖ ಮತ್ತು ನಿರಂತರ ಚಿಂತೆಯೇ ಈ ಕಠಿಣ ನಿರ್ಧಾರಕ್ಕೆ ಪ್ರಮುಖ ಕಾರಣವೆಂದು ಅಧಿಕಾರಿಗಳು ಪ್ರಾಥಮಿಕ ಮಾಹಿತಿ ನೀಡಿದ್ದಾರೆ. ಮತ್ತೊಂದೆಡೆ, ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ವಜ್ರಕುಮಾರ್ ಅವರು ವಿವಾಹ ವಿಚ್ಛೇದನಕ್ಕೂ ಅರ್ಜಿ ಸಲ್ಲಿಸಿದ್ದರು ಎಂಬುದು ತನಿಖೆಯಿಂದ ಬೆಳಕಿಗೆ ಬಂದಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುಂಬೈ ಅಂತರ ಶಾಲಾ ಬಾಸ್ಕೆಟ್‌ಬಾಲ್ ಧಮಾಕಾ: ಡಾನ್ ಬೊಸ್ಕೊ ಮಣಿಸಿ ಟ್ರೋಫಿ ಎತ್ತಿಹಿಡಿದ ಅಂಡೇರಿಯಾ ಎಂಪಿಎಸ್!Motorola Signature 27 Snapdragon 8 Elite Extreme Gen 6 ಮತ್ತು 200MP ಟೆಲಿಫೋಟೋ ಲೆನ್ಸ್‌ನೊಂದಿಗೆ ಅನಾವರಣಬಾಲಿವುಡ್ ಅಂಗಳದಲ್ಲಿ ಹೊಸ ಲವ್ ಸ್ಟೋರಿ: ಗೆಳತಿ ಜೊತೆ ಮನೀಶ್ ಮಲ್ಹೋತ್ರಾ ಪಾರ್ಟಿಯಲ್ಲಿ ಮಾಧುರಿ ದೀಕ್ಷಿತ್ ಮಗ!ಬ್ಯಾಂಕ್ ಲಾಕರ್’ ನಲ್ಲಿ ಇಟ್ಟಿದ್ದ ₹47 ಲಕ್ಷದ ಚಿನ್ನಾಭರಣ ನಾಪತ್ತೆ! ಮಹಿಳೆಯ ಹೋರಾಟಕ್ಕೆ ಕೊನೆಗೂ ಸಿಕ್ತು ಜಯ!ರಾಮಾಯಣ’ದಲ್ಲಿ ರಾಮನಾಗಿ ರಣಬೀರ್, ರಾವಣನಾಗಿ ಯಶ್; ಇಬ್ಬರಲ್ಲಿ ಶ್ರೀಮಂತ ನಟ ಯಾರು?ಕೈ ಕೈ ಹಿಡಿದು ಬಂದ ಐಶ್ವರ್ಯಾ ರೈ–ಅಭಿಷೇಕ್ ಜೋಡಿ; ರೊಮ್ಯಾಂಟಿಕ್ ಕ್ಷಣ ವೈರಲ್! ವಿಚ್ಛೇದನದ ವದಂತಿಗಳಿಗೆ ಬ್ರೇಕ್?ಆಸೀಸ್ ಕ್ರಿಕೆಟರ್ ಗೆ ಕೊಕೇನ್ ಶಾಕ್: ತಪ್ಪು ಒಪ್ಪಿಕೊಂಡು ನಿಷೇಧ ಪೂರ್ಣಗೊಳಿಸಿದ ಕ್ರಿಸ್ ಲಿನ್!ಧನ್ತೇರಸ್ 2026: ಚಿನ್ನ ಖರೀದಿಗೆ ಶುಭ ಮುಹೂರ್ತ ಯಾವಾಗ? ಬೆಂಗಳೂರು ಸೇರಿ ಪ್ರಮುಖ ನಗರಗಳ ಪೂಜಾ ಸಮಯ ಇಲ್ಲಿದೆಉತ್ತರ ಪ್ರದೇಶದಲ್ಲಿ ಮೂರನೇ ಅವಧಿಗಾಗಿ ಬಿಜೆಪಿಯ ತಂತ್ರ: ಕಲ್ಯಾಣ ಯೋಜನೆ, ಮಹಿಳಾ ಮತ ಮತ್ತು ಯೋಗಿ ವರ್ಚಸ್ಸಿನ ಮೇಲೆ ಭರವಸೆಭಾರತದಲ್ಲಿ ಅತಿ ಹೆಚ್ಚು ಸಕ್ಕರೆ ಉತ್ಪಾದಿಸುವ ಟಾಪ್ 5 ಕಂಪನಿಗಳು ಯಾವುದು ಗೊತ್ತಾ? ಇಲ್ಲಿದೆ ಮಾಹಿತಿ!