LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

BREAKING : ಕಾಂಗ್ರೆಸ್ ಮುಖಂಡನ ಮೇಲೆ ಹಲ್ಲೆ ಆರೋಪ ; MLC ಹೆಚ್. ವಿಶ್ವನಾಥ್ ವಿರುದ್ಧ ‘FIR’ ದಾಖಲು.!

ಮೈಸೂರು :   ಮೈಸೂರಿನಲ್ಲಿ ಕಾಂಗ್ರೆಸ್ ಮುಖಂಡ ಕೋಟೆಹುಂಡಿ ಮಹದೇವ್ ಅವರು ನೀಡಿದ ದೂರಿನ ಮೇರೆಗೆ ವಿಧಾನಪರಿಷತ್ ಸದಸ್ಯ (MLC) ಎಚ್. ವಿಶ್ವನಾಥ್ ಅವರ ವಿರುದ್ಧ ಮೈಸೂರಿನ ದೇವರಾಜ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ (FIR) ದಾಖಲಾಗಿದೆ.

ಹೌದು. ಮೈಸೂರಿನಲ್ಲಿ ಸಾಲದ ಹಣ ಮರುಪಾವತಿ ವಿಷಯಕ್ಕೆ ಸಂಬಂಧಿಸಿದಂತೆ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಹಿರಿಯ ವಿಧಾನಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ಅವರ ವಿರುದ್ಧ ಮೈಸೂರಿನ ದೇವರಾಜ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಕಾಂಗ್ರೆಸ್ ಮುಖಂಡ ಕೋಟೆಹುಂಡಿ ಮಹದೇವ್ ಅವರು ನೀಡಿದ ದೂರಿನ ಮೇರೆಗೆ, ನ್ಯಾಯಾಲಯದ ನಿರ್ದೇಶನದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆಯನ್ನು ಆರಂಭಿಸಿದ್ದಾರೆ. 2013ರ ಹಣಕಾಸಿನ ವ್ಯವಹಾರವೊಂದಕ್ಕೆ ಸಂಬಂಧಿಸಿದಂತೆ ಸಂಭವಿಸಿದ ಈ ಘಟನೆ ಈಗ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ.

ಸಾಲದ ಹಣವನ್ನು ವಾಪಸ್ ಕೇಳಲು ಹೋದಾಗ ಎಚ್. ವಿಶ್ವನಾಥ್ ಮತ್ತು ಅವರ ಕಡೆಯವರು ತಮ್ಮ ಮೇಲೆ ಹಲ್ಲೆ ನಡೆಸಿ, ನಿಂದಿಸಿದ್ದಾರೆ ಎಂದು ಕೋಟೆಹುಂಡಿ ಮಹದೇವ್ ದೂರಿನಲ್ಲಿ ಆರೋಪಿಸಿದ್ದಾರೆ.2013ರಲ್ಲಿ ಅಂದಿನ ಸಂಸದರಾಗಿದ್ದ ಎಚ್. ವಿಶ್ವನಾಥ್ ಅವರು ಕೋಟೆಹುಂಡಿ ಮಹದೇವ್ ಅವರಿಂದ 55 ಲಕ್ಷ ರೂಪಾಯಿ ಸಾಲ ಪಡೆದಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.ಫೆಬ್ರವರಿಯಲ್ಲಿ ಮೈಸೂರಿನ ಜಲದರ್ಶಿನಿ ಅತಿಥಿಗೃಹದಲ್ಲಿ ಸಾಲದ ಹಣವನ್ನು ಮರುಪಾವತಿಸುವಂತೆ ಕೇಳಿದಾಗ ಈ ಗಲಾಟೆ ನಡೆದಿದೆ ಎಂದು ಹೇಳಲಾಗಿದೆ. ಆರಂಭದಲ್ಲಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗದಿದ್ದಾಗ, ಸಂತ್ರಸ್ತ ಮಹದೇವ್ ಅವರು ನ್ಯಾಯಾಲಯದ ಮೊರೆ ಹೋಗಿದ್ದರು. ಕೋರ್ಟ್ ಆದೇಶದ ಮೇರೆಗೆ ಇದೀಗ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ