ಬೆಂಗಳೂರು: ನಟಿ ರುಕ್ಮಿಣಿ ವಸಂತ್ ಡೀಪ್ ಫೇಕ್ ಫೋಟೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಸೈಬರ್ ಕಮಾಂಡ್ ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು ನಿವಾಸಿಗಳಾದ ಚಂದ್ರಕಾಂತ್(33), ರಂಜಿತ್(25) ಮತ್ತು ಬಾಗಲಕೋಟೆ ಮೂಲದ ರವಿಕುಮಾರ್(24) ಬಂಧಿತ ಆರೋಪಿಗಳು ಎಂದು ಹೇಳಲಾಗಿದೆ. ಬಂಧಿತ ಆರೋಪಿಗಳಿಂದ ಮೊಬೈಲ್ ವಶಕ್ಕೆ ಪಡೆಯಲಾಗಿದೆ.
ಎಐ ತಂತ್ರಜ್ಞಾನ ಬಳಸಿ ರುಕ್ಮಿಣಿ ವಸಂತ್ ಅವರ ಬಿಕಿನಿ ಧರಿಸಿದ ರೀತಿಯ ವಿಡಿಯೋ ಫೋಟೋ ರಚಿಸಿ ವೈರಲ್ ಮಾಡಿದ್ದರು. ಇದೀಗ ಮೂವರು ಆರೋಪಿಗಳನ್ನು ಬಂಧಿಸಿದ ಪೊಲೀಸರು ವಿಚಾರಣೆ ನಡೆಸಿದ್ದಾರೆ ಎನ್ನಲಾಗಿದ್ದು, ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.