LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

BREAKING NEWS: ಬೆಂಗಳೂರಿನಲ್ಲಿ ಮಹಾಮಳೆಗೆ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು ಘೋರ ದುರಂತ: ಮೂವರು ಮಕ್ಕಳು ಸೇರಿ 7 ಜನ ಬಲಿ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮಹಾಮಳೆಗೆ ಮೂವರು ಮಕ್ಕಳು ಸೇರಿದಂತೆ ಏಳು ಮಂದಿ ಬಲಿಯಾಗಿದ್ದಾರೆ.

ಶಿವಾಜಿನಗರ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿದು ಅವಘಡ ಸಂಭವಿಸಿದೆ. ಘಟನೆಯಲ್ಲಿ ಮೂವರು ಮಕ್ಕಳು ಸೇರಿ ಏಳು ಜನ ಸಾವನ್ನಪ್ಪಿದ್ದಾರೆ. ಬೆಂಗಳೂರಿನಲ್ಲಿ ಅರ್ಧ ಗಂಟೆ ಸುರಿದ ಭಾರಿ ಮಳೆಯಿಂದಾಗಿ ಶಿಥಿಲಗೊಂಡಿದ್ದ ಕಾಂಪೌಂಡ್ ಗೋಡೆ ಕುಸಿದು ಬಿದ್ದಿದೆ. ಕಾಂಪೌಂಡ್ ಗೆ ಹೊಂದಿಕೊಂಡಂತೆ ವ್ಯಾಪಾರ ಮಾಡುತ್ತಿದ್ದವರು ಸೇರಿ ಹಲವರು ಮೃತಪಟ್ಟಿದ್ದು, ಗಾಯಗೊಂಡವರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೆಂಗಳೂರಿನ ಬೊಮ್ಮನಹಳ್ಳಿ, ಕಾಟನ್ ಪೇಟೆ, ಹೆಚ್ಎಎಲ್ ವಿಮಾನ ನಿಲ್ದಾಣ, ಬಿಟಿಎಂ ಲೇಔಟ್ ಸೇರಿ ಹಲವೆಡೆ ಮಳೆಯಾಗಿದೆ.

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು ಏಳು ಜನ ಮೃತಪಟ್ಟ ಬಗ್ಗೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಾಹಿತಿ ಪಡೆದುಕೊಂಡಿದ್ದಾರೆ. ಶಿವಾಜಿನಗರದಲ್ಲಿರುವ ಬೌರಿಂಗ್ ಆಸ್ಪತ್ರೆಗೆ ತೆರಳಿದ್ದಾರೆ. ಬೆಂಗಳೂರು ಅಭಿವೃದ್ಧಿ ಸಚಿವರು ಆಗಿರುವ ಡಿ.ಕೆ. ಶಿವಕುಮಾರ್ ಮಾಹಿತಿ ಪಡೆದ ಕೂಡಲೇ ಸ್ಥಳಕ್ಕೆ ತೆರಳಿದ್ದಾರೆ. ಮಳೆಯಿಂದಾದ ಸಮಸ್ಯೆಗಳ ನಿವಾರಣೆಗೆ ತುರ್ತು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಬಸವನಗುಡಿಯಲ್ಲಿ ಭಾರಿ ಗಾತ್ರದ ಮರ ಬಿದ್ದ ಪರಿಣಾಮ ಬಸ್, ಲಾರಿ, ಬೈಕ್ ಸೇರಿದಂತೆ ಹಲವು ವಾಹನಗಳಿಗೆ ಹಾನಿಯಾಗಿದೆ. ರಸ್ತೆಯಲ್ಲಿ ಹೋಗುತ್ತಿದ್ದ ಲಾರಿಯ ಮೇಲೆ ಮರ ಬಿದ್ದು ದುರ್ಘಟನೆ ಸಂಭವಿಸಿದೆ. ರಸ್ತೆ ಬದಿ ನಿಲ್ಲಿಸಿದ್ದ ಬಸ್ ಮತ್ತು ಬೈಕ್ ಗಳು ಜಖಂಗೊಂಡಿವೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ