LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

BREAKING : ಭಾರಿ ಮಳೆ ಹಿನ್ನೆಲೆ ; ರಾಜ್ಯದ ಈ ಜಿಲ್ಲೆಯ ಅಂಗನವಾಡಿ-ಶಾಲೆಗಳಿಗೆ ಇಂದು ರಜೆ ಘೋಷಣೆ |School Holiday

ಅಂಕೋಲಾ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನಲ್ಲಿ ಮುಂಗಾರು ಮಳೆ ತೀವ್ರಗೊಂಡಿದ್ದು, ನಿರಂತರ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಇಂದು (ಜುಲೈ 17) ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಈ ಕುರಿತು ಅಂಕೋಲಾ ತಹಶೀಲ್ದಾರ್ ಆದೇಶ ಹೊರಡಿಸಿದ್ದಾರೆ.

ಕಳೆದ ಕೆಲವು ದಿನಗಳಿಂದ ತಾಲೂಕಿನಾದ್ಯಂತ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ತಗ್ಗು ಪ್ರದೇಶಗಳಲ್ಲಿ ನೀರು ನಿಂತಿರುವುದು, ರಸ್ತೆಗಳಲ್ಲಿ ಸಂಚಾರಕ್ಕೆ ತೊಂದರೆ ಉಂಟಾಗಿರುವುದು ಹಾಗೂ ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ. ಪಾಲಕರು ಹಾಗೂ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಆಡಳಿತ ಮನವಿ ಮಾಡಿದೆ.

ಮಳೆಯ ತೀವ್ರತೆ ಮುಂದುವರಿಯುವ ಸಾಧ್ಯತೆ ಇರುವುದರಿಂದ ಅನಗತ್ಯವಾಗಿ ಹೊರಗೆ ಓಡಾಡುವುದನ್ನು ತಪ್ಪಿಸಿ, ಹವಾಮಾನ ಇಲಾಖೆ ಹಾಗೂ ಜಿಲ್ಲಾಡಳಿತದ ಸೂಚನೆಗಳನ್ನು ಪಾಲಿಸುವಂತೆ ಅಧಿಕಾರಿಗಳು ತಿಳಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಮಳೆ ಅಬ್ಬರ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಮಳೆ ಮತ್ತೆ ಅಬ್ಬರಿಸಿದ್ದು, ಮಂಗಳೂರಿನ ಹಲವು ತಗ್ಗು ಪ್ರದೇಶಗಳು ಜಲಾವೃತವಾಗಿವೆ. ವಿಶೇಷವಾಗಿ ನಗರದ ಪ್ರಮುಖ ಸಂಚಾರ ಕೇಂದ್ರವಾದ ಕೊಟ್ಟಾರ ಚೌಕಿ ಪ್ರದೇಶದಲ್ಲಿ ಮಳೆ ನೀರು ರಸ್ತೆ ಮೇಲೆ ನಿಂತ ಪರಿಣಾಮ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ.

ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದ ರಸ್ತೆಗಳಲ್ಲಿ ನೀರು ತುಂಬಿಕೊಂಡಿದ್ದು, ವಾಹನ ಸವಾರರು ಮತ್ತು ಸಾರ್ವಜನಿಕರು ಸಾಕಷ್ಟು ತೊಂದರೆ ಅನುಭವಿಸಿದ್ದಾರೆ. ಕೆಲವೆಡೆ ಟ್ರಾಫಿಕ್ ಜಾಮ್ ಉಂಟಾಗಿದ್ದು, ವಾಹನಗಳ ಸಂಚಾರ ನಿಧಾನಗತಿಯಲ್ಲಿ ಸಾಗಿತು. ತಗ್ಗು ಪ್ರದೇಶಗಳಲ್ಲಿರುವ ಮನೆಗಳಿಗೂ ಮಳೆ ನೀರು ನುಗ್ಗುವ ಆತಂಕ ಎದುರಾಗಿದೆ.

ಹವಾಮಾನ ಇಲಾಖೆ ಕರಾವಳಿ ಭಾಗದಲ್ಲಿ ಮುಂದಿನ ದಿನಗಳಲ್ಲೂ ಭಾರಿ ಮಳೆಯ ಸಾಧ್ಯತೆ ಇರುವುದಾಗಿ ಎಚ್ಚರಿಕೆ ನೀಡಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಿದೆ. ಅನಗತ್ಯವಾಗಿ ಜಲಾವೃತ ಪ್ರದೇಶಗಳಿಗೆ ತೆರಳದಂತೆ ಹಾಗೂ ಸುರಕ್ಷಿತ ಸ್ಥಳಗಳಲ್ಲಿ ಇರುವಂತೆ ಮನವಿ ಮಾಡಲಾಗಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿಮಕ್ಕಳ ಮನಸ್ಸು, ಮೆದುಳಿನ ಶಕ್ತಿಗೆ ದಾರಿದೀಪ ಈ ಪುಸ್ತಕ: ತಪ್ಪದೇ ಖರೀದಿಸಿ, ನಿಮ್ಮ ಮಕ್ಕಳಿಗೆ ತಪ್ಪದೇ ಓದಿಸಿ!ಹಿಂದೂಗಳ ಆಚರಣೆಗೆ ಸರ್ಕಾರ ಅಡ್ಡಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಕಾಂಗ್ರೆಸ್ ಪಕ್ಷ ಸಂಘಟನೆ ಬಲವರ್ಧನೆಗೆ 'ಕೆಪಿಸಿಸಿ ಕನೆಕ್ಟ್ ಸೆಂಟರ್' ಸ್ಥಾಪನೆ: ಪದಾಧಿಕಾರಿಗಳ ನೇಮಕ