LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

BREAKING: ಅನೈತಿಕ ಸಂಬಂಧಕ್ಕೆ ಬೇಸತ್ತು ಪತ್ನಿ ಆತ್ಮಹತ್ಯೆ: ಬಿಜೆಪಿ ಮುಖಂಡ ಅರೆಸ್ಟ್

ಶಿವಮೊಗ್ಗ: ಅನೈತಿಕ ಸಂಬಂಧಕ್ಕೆ ಬೇಸತ್ತು ಬಿಜೆಪಿ ಮುಖಂಡನ ಪತ್ನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗ ಜಿಲ್ಲೆ ಸೊರಬ ಪಟ್ಟಣದ ಕಾನುಕೇರಿ ಬಡಾವಣೆಯಲ್ಲಿ ನಡೆದಿದೆ.

ಬಿಜೆಪಿ ಮುಖಂಡ ಪ್ರಭು ಮೇಸ್ತ್ರಿ ಪತ್ನಿ ಮಂಜುಳಾ(38) ಆತ್ಮಹತ್ಯೆ ಮಾಡಿಕೊಂಡವರು. ಮನೆಯ ಹಿಂಭಾಗದ ಮರಕ್ಕೆ ನೇಣು ಬಿಗಿದುಕೊಂಡು ಮಂಜುಳಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಾವೇರಿ ಜಿಲ್ಲೆ ಹಿರೇಕೆರೂರು ತಾಲೂಕಿನ ಹೊಸ ವೀರಾಪುರ ಗ್ರಾಮದವರಾದ ಮಂಜುಳಾ ಸೊರಬ ಪುರಸಭೆ ಮಾಜಿ ಅಧ್ಯಕ್ಷ ಪ್ರಭು ಮೇಸ್ತ್ರಿಯೊಂದಿಗೆ ಎರಡನೇ ಮದುವೆಯಾಗಿತ್ತು.

ಹಾರ್ಡ್ ವೇರ್ ಅಂಗಡಿ ಹೊಂದಿರುವ ಬಿಜೆಪಿ ಮುಖಂಡ ಪ್ರಭು ಮೇಸ್ತ್ರಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯ ಜೊತೆಗೆ ಅಕ್ರಮ ಸಂಬಂಧ ಹೊಂದಿದ್ದ. ಮಹಿಳೆಯ ಸಹವಾಸ ಬಿಡುವಂತೆ ಹಲವು ಬಾರಿ ಪತ್ನಿ ಮಂಜುಳಾ ಬುದ್ಧಿವಾದ ಹೇಳಿದ್ದರು. ಈ ಬಗ್ಗೆ ಅನೇಕ ಹಿರಿಯರು, ಸಂಬಂಧಿಕರು ಕೂಡ ಬುದ್ಧಿವಾದ ಹೇಳಿದ್ದರು. ಆದರೂ ಮಹಿಳೆಯ ಜೊತೆ ಅಕ್ರಮ ಸಂಬಂಧ ಮುಂದುವರೆಸಿದ್ದ ಆರೋಪ ಕೇಳಿಬಂದಿದೆ.

ಮಂಜುಳಾಗೆ ಮಾನಸಿಕ, ದೈಹಿಕ ಹಿಂಸೆ ನೀಡುತ್ತಿದ್ದ ಆರೋಪ ಕೂಡ ಕೇಳಿ ಬಂದಿದೆ. ಇದರಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಮಂಜುಳಾ ಪೋಷಕರು ಆರೋಪಿಸಿದ್ದಾರೆ. ಸೊರಬ ಠಾಣೆಗೆ ಮಂಜುಳಾ ಅವರ ತಾಯಿ ಶೋಭಾ ಈ ಕುರಿತಾಗಿ ದೂರು ನೀಡಿದ್ದಾರೆ. ಸೊರಬ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಭು ಮೇಸ್ತ್ರಿಯನ್ನು ಸೊರಬ ಪೊಲೀಸರು ಬಂಧಿಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ