LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

BREAKING: ವಿದ್ಯಾರ್ಥಿಗಳ ಗಮನಕ್ಕೆ : ಜನಗಣತಿ ಹಿನ್ನೆಲೆ SSLC, ದ್ವಿತೀಯ PUC ಪರೀಕ್ಷೆ ಮುಂದೂಡುವ ಸಾಧ್ಯತೆ!

ಬೆಂಗಳೂರು: ರಾಜ್ಯದಲ್ಲಿ ಮುಂಬರುವ ಎಸ್‌ಎಸ್‌ಎಲ್‌ಸಿ (SSLC) ಮತ್ತು ದ್ವಿತೀಯ ಪಿಯುಸಿ (2nd PUC) ವಾರ್ಷಿಕ ಪಬ್ಲಿಕ್ ಪರೀಕ್ಷೆಗಳು ಮುಂದೂಡಲ್ಪಡುವ ಸಾಧ್ಯತೆ ದಟ್ಟವಾಗಿದೆ. ಕೇಂದ್ರ ಸರ್ಕಾರದ ಜನಗಣತಿ (Census) ಕಾರ್ಯಕ್ರಮದ ಎರಡನೇ ಹಂತದ ಕಾರ್ಯಾಚರಣೆ ಜನವರಿಯಿಂದ ಆರಂಭವಾಗುತ್ತಿರುವುದೇ ಇದಕ್ಕೆ ಮುಖ್ಯ ಕಾರಣವಾಗಿದೆ.

ಶಾಲಾ ಶಿಕ್ಷಕರು ಜನಗಣತಿ ಕಾರ್ಯದಲ್ಲಿ ಸಕ್ರಿಯವಾಗಿ ಭಾಗವಹಿಸಬೇಕಿರುವುದರಿಂದ, ಪರೀಕ್ಷೆಗಳ ದಿನಾಂಕಗಳಲ್ಲಿ ಬದಲಾವಣೆ ಮಾಡುವಂತೆ ಶಾಲಾ ಶಿಕ್ಷಣ ಇಲಾಖೆಗೆ 'ಕೇಂದ್ರ ಜನಗಣತಿ ಕಾರ್ಯಾಚರಣೆ ನಿರ್ದೇಶನಾಲಯ' ಅಧಿಕೃತ ಪತ್ರ ಬರೆದು ಮನವಿ ಮಾಡಿದೆ. ಕೇಂದ್ರದ ನಿರ್ದೇಶನದಂತೆ ಪರೀಕ್ಷಾ ಮಂಡಳಿಯು ಶೀಘ್ರದಲ್ಲೇ ಹೊಸ ವೇಳಾಪಟ್ಟಿಯನ್ನು ಪ್ರಕಟಿಸುವ ನಿರೀಕ್ಷೆಯಿದೆ.

ಕೇಂದ್ರ ಸರ್ಕಾರದ ಯೋಜನೆಯಂತೆ ಜನಗಣತಿಯ ಎರಡನೇ ಸುತ್ತಿನ ಕಾರ್ಯಚರಣೆಯು ಜನವರಿ 25ರಿಂದ ಆರಂಭಗೊಂಡು ಫೆಬ್ರವರಿ 28ರವರೆಗೆ ನಡೆಯಲಿದೆ. ತದನಂತರ ಮಾರ್ಚ್ 1 ರಿಂದ ಮಾರ್ಚ್ 5ರವರೆಗೆ ಪರಿಷ್ಕರಣಾ ಸುತ್ತು (Revision Round) ನಡೆಯಲಿದೆ. ಈ ಸಮಯದಲ್ಲೇ ಪರೀಕ್ಷೆಗಳೂ ಎದುರಾಗುವುದರಿಂದ ಶಿಕ್ಷಕರ ನಿಯೋಜನೆ ಹಾಗೂ ಪರೀಕ್ಷಾ ನಿರ್ವಹಣೆಗೆ ತೊಡಕಾಗಬಾರದೆಂಬ ಉದ್ದೇಶದಿಂದ ಪರೀಕ್ಷೆಗಳನ್ನು ಮುಂದೂಡುವಂತೆ ಮನವಿ ಸಲ್ಲಿಕೆಯಾಗಿದೆ.

ಈಗಾಗಲೇ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು (KSEAB) ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಗಳ ತಾತ್ಕಾಲಿಕ ವೇಳಾಪಟ್ಟಿಯನ್ನು (Provisional Timetable) ಬಿಡುಗಡೆ ಮಾಡಿತ್ತು.

ಈ ಹಿಂದೆ ಪ್ರಕಟಿಸಲಾಗಿದ್ದ ತಾತ್ಕಾಲಿಕ ವೇಳಾಪಟ್ಟಿ ವಿವರ:

  • ಎಸ್‌ಎಸ್‌ಎಲ್‌ಸಿ ಪರೀಕ್ಷೆ-1: ಮಾರ್ಚ್ 22 ರಿಂದ ಏಪ್ರಿಲ್ 5

  • ಎಸ್‌ಎಸ್‌ಎಲ್‌ಸಿ ಪರೀಕ್ಷೆ-2: ಮೇ 24 ರಿಂದ ಮೇ 31

  • ದ್ವಿತೀಯ ಪಿಯುಸಿ ಪರೀಕ್ಷೆ-1: ಫೆಬ್ರವರಿ 27 ರಿಂದ ಮಾರ್ಚ್ 17

  • ದ್ವಿತೀಯ ಪಿಯುಸಿ ಪರೀಕ್ಷೆ-2: ಮೇ 3 ರಿಂದ ಮೇ 15

ಜನಗಣತಿಯ ವೇಳಾಪಟ್ಟಿಯೊಂದಿಗೆ ಪರೀಕ್ಷಾ ದಿನಾಂಕಗಳು ಮುಖಾಮುಖಿಯಾಗುತ್ತಿರುವುದರಿಂದ, ಇಲಾಖೆಯು ಶೀಘ್ರದಲ್ಲೇ ಪರಿಷ್ಕೃತ ಅಥವಾ ಹೊಸ ವೇಳಾಪಟ್ಟಿಯನ್ನು ಬಿಡುಗಡೆ ಮಾಡುವ ನಿರೀಕ್ಷೆಯಿದೆ. ಲಕ್ಷಾಂತರ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಹೊಸ ಪ್ರಕಟಣೆಗಾಗಿ ಕಾಯುತ್ತಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುಂಬೈ ಅಂತರ ಶಾಲಾ ಬಾಸ್ಕೆಟ್‌ಬಾಲ್ ಧಮಾಕಾ: ಡಾನ್ ಬೊಸ್ಕೊ ಮಣಿಸಿ ಟ್ರೋಫಿ ಎತ್ತಿಹಿಡಿದ ಅಂಡೇರಿಯಾ ಎಂಪಿಎಸ್!Motorola Signature 27 Snapdragon 8 Elite Extreme Gen 6 ಮತ್ತು 200MP ಟೆಲಿಫೋಟೋ ಲೆನ್ಸ್‌ನೊಂದಿಗೆ ಅನಾವರಣಬಾಲಿವುಡ್ ಅಂಗಳದಲ್ಲಿ ಹೊಸ ಲವ್ ಸ್ಟೋರಿ: ಗೆಳತಿ ಜೊತೆ ಮನೀಶ್ ಮಲ್ಹೋತ್ರಾ ಪಾರ್ಟಿಯಲ್ಲಿ ಮಾಧುರಿ ದೀಕ್ಷಿತ್ ಮಗ!ಬ್ಯಾಂಕ್ ಲಾಕರ್’ ನಲ್ಲಿ ಇಟ್ಟಿದ್ದ ₹47 ಲಕ್ಷದ ಚಿನ್ನಾಭರಣ ನಾಪತ್ತೆ! ಮಹಿಳೆಯ ಹೋರಾಟಕ್ಕೆ ಕೊನೆಗೂ ಸಿಕ್ತು ಜಯ!ರಾಮಾಯಣ’ದಲ್ಲಿ ರಾಮನಾಗಿ ರಣಬೀರ್, ರಾವಣನಾಗಿ ಯಶ್; ಇಬ್ಬರಲ್ಲಿ ಶ್ರೀಮಂತ ನಟ ಯಾರು?ಕೈ ಕೈ ಹಿಡಿದು ಬಂದ ಐಶ್ವರ್ಯಾ ರೈ–ಅಭಿಷೇಕ್ ಜೋಡಿ; ರೊಮ್ಯಾಂಟಿಕ್ ಕ್ಷಣ ವೈರಲ್! ವಿಚ್ಛೇದನದ ವದಂತಿಗಳಿಗೆ ಬ್ರೇಕ್?ಆಸೀಸ್ ಕ್ರಿಕೆಟರ್ ಗೆ ಕೊಕೇನ್ ಶಾಕ್: ತಪ್ಪು ಒಪ್ಪಿಕೊಂಡು ನಿಷೇಧ ಪೂರ್ಣಗೊಳಿಸಿದ ಕ್ರಿಸ್ ಲಿನ್!ಧನ್ತೇರಸ್ 2026: ಚಿನ್ನ ಖರೀದಿಗೆ ಶುಭ ಮುಹೂರ್ತ ಯಾವಾಗ? ಬೆಂಗಳೂರು ಸೇರಿ ಪ್ರಮುಖ ನಗರಗಳ ಪೂಜಾ ಸಮಯ ಇಲ್ಲಿದೆಉತ್ತರ ಪ್ರದೇಶದಲ್ಲಿ ಮೂರನೇ ಅವಧಿಗಾಗಿ ಬಿಜೆಪಿಯ ತಂತ್ರ: ಕಲ್ಯಾಣ ಯೋಜನೆ, ಮಹಿಳಾ ಮತ ಮತ್ತು ಯೋಗಿ ವರ್ಚಸ್ಸಿನ ಮೇಲೆ ಭರವಸೆಭಾರತದಲ್ಲಿ ಅತಿ ಹೆಚ್ಚು ಸಕ್ಕರೆ ಉತ್ಪಾದಿಸುವ ಟಾಪ್ 5 ಕಂಪನಿಗಳು ಯಾವುದು ಗೊತ್ತಾ? ಇಲ್ಲಿದೆ ಮಾಹಿತಿ!