LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

BREAKING : ನಟ ಯಶ್ ನಟನೆಯ ‘ಟಾಕ್ಸಿಕ್’ ಚಿತ್ರದ ಮತ್ತೊಂದು ಟೀಸರ್ ರಿಲೀಸ್ : ಐವರು ನಾಯಕಿಯರ ಮಸ್ತ್ ಎಂಟ್ರಿ |WATCH TEASER

ಬೆಂಗಳೂರು :  ನಟ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್’ (Toxic) ಸಿನಿಮಾದ ಮತ್ತೊಂದು ವಿಶೇಷ ಟೀಸರ್ ರಿಲೀಸ್ ಆಗಿದೆ. ಜುಲೈ 1 ರಂದು ಬೆಳಿಗ್ಗೆ 11:33 ಕ್ಕೆ ಬಿಡುಗಡೆಯಾಗಿರುವ ಟೀಸರ್ ನಲ್ಲಿ ಚಿತ್ರದ ಪ್ರಮುಖ ಪಾತ್ರವರ್ಗದ ಹೆಣ್ಣುಮಕ್ಕಳ (ನಾಯಕಿಯರ) ಎಂಟ್ರಿ ಅನ್ನು ಅನಾವರಣಗೊಳಿಸಲಾಗಿದೆ.

ಈ ಹೊಸ ಟೀಸರ್‌ನಲ್ಲಿ ನಯನತಾರಾ, ಕಿಯಾರಾ ಅಡ್ವಾನ್ವಿ, ತಾರಾ ಸುತಾರಿಯಾ, ಹುಮಾ ಖುರೇಷಿ ಮತ್ತು ರುಕ್ಮಿಣಿ ವಸಂತ್ ಅವರ ಪಾತ್ರಗಳನ್ನು ಪರಿಚಯಿಸಲಾಗಿದೆ.ಈ ಚಿತ್ರಕ್ಕೆ ಗೀತು ಮೋಹನ್ ದಾಸ್ ಆಕ್ಷನ್-ಕಟ್ ಹೇಳಿದ್ದಾರೆ.ಚಿತ್ರವು ಇದೇ ವರ್ಷ ಆಗಸ್ಟ್26, 2026 ರಂದು ವಿಶ್ವದಾದ್ಯಂತ ಅದ್ಧೂರಿಯಾಗಿ ತೆರೆಗೆ ಬರಲು ಸಜ್ಜಾಗಿದೆ.

ಈ ಟೀಸರ್‌ನಲ್ಲಿ ಐವರು ಪ್ರಮುಖ ನಾಯಕಿಯರ ಎಂಟ್ರಿಯನ್ನು ಅಧಿಕೃತವಾಗಿ ತೋರಿಸಲಾಗಿದೆ . ಈ ಮೂಲಕ ಚಿತ್ರದಲ್ಲಿ ದೊಡ್ಡ ತಾರಾಗಣವಿದೆ ಎಂಬುದು ಮತ್ತೊಮ್ಮೆ ಸ್ಪಷ್ಟವಾಗಿದೆ. ಈ ಹಿಂದೆಯೇ ಚಿತ್ರದಲ್ಲಿ ಹಲವು ಟಾಪ್ ನಟಿಯರು ಭಾಗವಹಿಸಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು.

ಟಾಕ್ಸಿಕ್ ಚಿತ್ರವನ್ನು ನಿರ್ದೇಶಕಿ ಗೀತು ಮೋಹನದಾಸ್ ನಿರ್ದೇಶಿಸುತ್ತಿದ್ದು, ಇದು ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ಚಿತ್ರದ ಬೃಹತ್ ಬಜೆಟ್ ಮತ್ತು ಸ್ಟಾರ್ ಕಾಸ್ಟ್ ಈಗಾಗಲೇ ದೇಶಾದ್ಯಂತ ದೊಡ್ಡ ಚರ್ಚೆಗೆ ಕಾರಣವಾಗಿದೆ. ಚಿತ್ರದ ಹೊಸ ಟೀಸರ್ ಬಿಡುಗಡೆ ನಂತರ ಅಭಿಮಾನಿಗಳಲ್ಲಿ ಇನ್ನಷ್ಟು ನಿರೀಕ್ಷೆ ಹೆಚ್ಚಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಟ್ರೆಂಡ್ ಆಗುತ್ತಿದೆ.

ನಿರ್ದೇಶಕಿ ಗೀತು ಮೋಹನದಾಸ್ ಅವರ ಈ ಪ್ಯಾನ್-ಇಂಡಿಯಾ ಸಿನಿಮಾ ಭಾರೀ ಬಜೆಟ್‌ನಲ್ಲಿ ನಿರ್ಮಾಣವಾಗುತ್ತಿದೆ.ಚಿತ್ರವು 1940ರ ದಶಕದ ಗೋವಾ ಹಿನ್ನೆಲೆಯಲ್ಲಿರುವ ಕ್ರೈಂ-ಥ್ರಿಲ್ಲರ್ ಕಥೆಯಾಗಿದ್ದು, ಅಲ್ಲಿ ಅಧಿಕಾರ, ದ್ರೋಹ ಮತ್ತು ಕ್ರಿಮಿನಲ್ ಸಾಮ್ರಾಜ್ಯದ ಹೋರಾಟವನ್ನು ತೋರಿಸುತ್ತದೆ.

ಚಿತ್ರದ ಟೀಸರ್‌ಗಳು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಅಭಿಮಾನಿಗಳಲ್ಲಿ ಭಾರೀ ನಿರೀಕ್ಷೆ ಮೂಡಿಸಿದೆ. ಚಿತ್ರವನ್ನು “ಡಾರ್ಕ್ ಫೇರಿ ಟೇಲ್” ಶೈಲಿಯಲ್ಲಿ ಚಿತ್ರಿಸಲಾಗಿದೆ ಎಂದು ಹೇಳಲಾಗಿದೆ.  ‘ಟಾಕ್ಸಿಕ್’ ಸಿನಿಮಾ ಯಶ್ ಅವರ ಮುಂದಿನ ದೊಡ್ಡ ಪ್ಯಾನ್-ಇಂಡಿಯಾ ಪ್ರಾಜೆಕ್ಟ್ ಆಗಿದ್ದು, ಸ್ಟಾರ್ ಕಾಸ್ಟ್, ವಿಭಿನ್ನ ಕಥಾಹಂದರ ಮತ್ತು ಭರ್ಜರಿ ನಿರ್ಮಾಣದಿಂದ ದೇಶಾದ್ಯಂತ ಗಮನ ಸೆಳೆಯುತ್ತಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ