LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

CBSE ಶಾಲೆಗಳಲ್ಲಿ ತ್ರಿಭಾಷಾ ನೀತಿ ಗೊಂದಲಗಳಿಗೆ ಶಿಕ್ಷಣ ಸಚಿವ ಧಮೇಂದ್ರ ಪ್ರಧಾನ್ ತೆರೆ: ನಿಯಮ 6ನೇ ತರಗತಿಯ ಹೊಸ ವಿದ್ಯಾರ್ಥಿಗಳಿಗೆ ಮಾತ್ರ ಅನ್ವಯ

ನವದೆಹಲಿ: ಸಿಬಿಎಸ್‌ಇ ಶಾಲೆಗಳಲ್ಲಿ ‘ತ್ರಿಭಾಷಾ ನೀತಿ’ ಕಡ್ಡಾಯ ವಿಚಾರವಾಗಿ ಆರಂಭವಗೈದ್ದ ಗೊಂದಲಗಳಿಗೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತೆರೆ ಎಳೆದಿದ್ದಾರೆ.

ತ್ರಿಭಾಷಾ ನೀತಿ ಕಡ್ಡಾಯ ಎಂಬ ಹೊಸ ನಿಯಮವು ಕೇವಲ ಈ ವರ್ಷದಿಂದ 6 ನೇ ತರಗತಿಗೆ ದಾಖಲಾಗುವ ಹೊಸ ವಿದ್ಯಾರ್ಥಿಗಳಿಗೆ ಮಾತ್ರ ಅನ್ವಯಿಸುತ್ತದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಪ್ರಸ್ತುತ 7, 8 ಮತ್ತು 9 ನೇ ತರಗತಿಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ತಮ್ಮ ಭಾಷಾ ವಿಷಯಗಳನ್ನು ಬದಲಾಯಿಸುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ. ಇದರಿಂದಾಗಿ ಪೋಷಕರು ಮತ್ತು ವಿದ್ಯಾರ್ಥಿಗಳಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.

ಸಿಬಿಎಸ್‌ಇ ನೀಡಿದ್ದ ಹಿಂದಿನ ಸೂಚನೆ ತೀವ್ರ ಗೊಂದಲಕ್ಕೆ ಕಾರಣವಗಿತ್ತು. ಈಗ ಓದುತ್ತಿರುವ ಮಕ್ಕಳೂ ಭಾಷೆ ಬದಲಾಯಿಸಬೇಕೇ ಎಂಬ ಆತಂಕ ಪೋಷಕರಲ್ಲಿ ಮನೆಮಾಡಿತ್ತು. ಆದರೆ ಈಗ ನೀಡಿರುವ ಸ್ಪಷ್ಟೀಕರಣದ ಪ್ರಕಾರ, ಪ್ರಸ್ತುತ ಎರಡು ವಿದೇಶಿ ಭಾಷೆಗಳನ್ನು ಕಲಿಯುತ್ತಿರುವ ವಿದ್ಯಾರ್ಥಿಗಳು ತಮ್ಮ 10 ನೇ ತರಗತಿಯ ಬೋರ್ಡ್ ಪರೀಕ್ಷೆಯವರೆಗೆ ಅದೇ ವಿಷಯಗಳೊಂದಿಗೆ ಮುಂದುವರಿಯಬಹುದು. ಸಿಬಿಎಸ್‌ಇ ಶೀಘ್ರದಲ್ಲೇ ಈ ಬಗ್ಗೆ ಪರಿಷ್ಕೃತ ಅಧಿಕೃತ ಆದೇಶ ಹೊರಡಿಸಲಿದೆ.

ಹೊಸ ಶಿಕ್ಷಣ ನೀತಿಯನ್ನು ವ್ಯವಸ್ಥಿತವಾಗಿ ಜಾರಿಗೊಳಿಸಲು ಭಾಷೆಗಳನ್ನು 3 ಹಂತಗಳಾಗಿ ವಿಂಗಡಿಸಲಾಗಿದೆ. R1, R2 ಮತ್ತು R3 ಎಂದು ಭಾಷಾ ಚೌಕಟ್ಟು ಹಾಕಲಾಗಿದೆ.

R1 (ಪ್ರಥಮ ಭಾಷೆ): ಇದು ಶಾಲೆಯ ಮುಖ್ಯ ಬೋಧನಾ ಮಾಧ್ಯಮವಾಗಿರುತ್ತದೆ (ಉದಾಹರಣೆಗೆ: ಇಂಗ್ಲಿಷ್ ಅಥವಾ ಹಿಂದಿ).

R2 (ದ್ವಿತೀಯ ಭಾಷೆ): ಇದು ಮೊದಲ ಭಾಷೆಯನ್ನು ಹೊರತುಪಡಿಸಿ ಮತ್ತೊಂದು ಭಾಷೆಯಾಗಿರುತ್ತದೆ.

R3 (ಮೂರನೇ ಭಾಷೆ): ಇದು ಮೊದಲ ಎರಡು ಭಾಷೆಗಳಿಗಿಂತ ಸಂಪೂರ್ಣ ಭಿನ್ನವಾಗಿರುತ್ತದೆ.

ಮುಖ್ಯ ನಿಯಮ: ವಿದ್ಯಾರ್ಥಿಗಳು ಆಯ್ಕೆ ಮಾಡಿಕೊಳ್ಳುವ ಈ 3 ಭಾಷೆಗಳಲ್ಲಿ ಕನಿಷ್ಠ 2 ಭಾಷೆಗಳು ಕಡ್ಡಾಯವಾಗಿ ಸ್ಥಳೀಯ ಭಾರತೀಯ ಭಾಷೆಗಳೇ ಆಗಿರಬೇಕು.

ಶಾಲೆಗಳಿಂದ ಜರ್ಮನ್, ಫ್ರೆಂಚ್ ನಂತಹ ವಿದೇಶಿ ಭಾಷೆಗಳನ್ನು ಸಂಪೂರ್ಣವಾಗಿ ತೆಗೆದುಹಾಕಲಾಗುತ್ತಿದೆ ಎಂಬ ಪೋಷಕರ ಕಳವಳವನ್ನು ಸಚಿವರು ತಳ್ಳಿಹಾಕಿದ್ದಾರೆ. ವಿದೇಶಿ ಭಾಷೆಗಳ ಮೇಲೆ ಯಾವುದೇ ನಿಷೇಧವಿಲ್ಲ. ವಿದ್ಯಾರ್ಥಿಗಳು ಕಡ್ಡಾಯವಾಗಿರುವ ಮೂರು ಪ್ರಾಥಮಿಕ ಭಾಷೆಗಳ ಜೊತೆಗೆ, ಹೆಚ್ಚುವರಿಯಾಗಿ ನಾಲ್ಕನೇ ಭಾಷೆಯಾಗಿ ವಿದೇಶಿ ಭಾಷೆಯನ್ನು ಆರಿಸಿಕೊಳ್ಳಬಹುದು. ದೇಶದ ಸ್ಥಳೀಯ ಭಾಷೆಗಳನ್ನು ಬಲಪಡಿಸುವುದೇ ಈ ನಿಯಮದ ಮುಖ್ಯ ಉದ್ದೇಶವಾಗಿದೆ.

ರಾಷ್ಟ್ರೀಯ ಶಿಕ್ಷಣ ನೀತಿ (NEP) 2020 ರ ಅಡಿಯಲ್ಲಿ ಈ ನಿಯಮ ಜಾರಿಯಾಗುತ್ತಿರುವುದರಿಂದ ಪಠ್ಯಪುಸ್ತಕ ಹಾಗೂ ಶಿಕ್ಷಕರ ಕೊರತೆಯ ಭೀತಿ ಎದುರಾಗಿತ್ತು. ಈ ವಿಷಯ ನ್ಯಾಯಾಲಯದ ಮೆಟ್ಟಿಲನ್ನೂ ಏರಿತ್ತು.

ಈ ಬಗ್ಗೆ ಭರವಸೆ ನೀಡಿರುವ ಸಚಿವ ಧರ್ಮೇಂದ್ರ ಪ್ರಧಾನ್, ದೇಶದ 22 ಅಧಿಕೃತ ಭಾರತೀಯ ಭಾಷೆಗಳಲ್ಲಿ ಹೊಸ ಪಠ್ಯಪುಸ್ತಕಗಳು ಸಮಯಕ್ಕೆ ಸರಿಯಾಗಿ ಲಭ್ಯವಾಗಲಿವೆ. ಶಾಲೆಗಳಲ್ಲಿ ಅಗತ್ಯವಿರುವಷ್ಟು ಅರ್ಹ ಶಿಕ್ಷಕರು ಮತ್ತು ಸಂಪನ್ಮೂಲಗಳನ್ನು ಖಚಿತಪಡಿಸಿಕೊಳ್ಳುವುದು ಸಿಬಿಎಸ್‌ಇಯ ಜವಾಬ್ದಾರಿಯಾಗಿದೆ, ಯಾರೂ ಭಯಪಡುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ.

ದೇಶದ ಸುಮಾರು ಶೇ. 90 ವಿದ್ಯಾರ್ಥಿಗಳು ಈಗಾಗಲೇ ಮೂರು ಭಾಷೆಗಳನ್ನು ಕಲಿಯುತ್ತಿದ್ದು, ಸಿಬಿಎಸ್‌ಇ ಯಲ್ಲಿ ಕೇವಲ ಶೇ. 1.3 ವಿದ್ಯಾರ್ಥಿಗಳು ಮಾತ್ರ ಎರಡು ವಿದೇಶಿ ಭಾಷೆಗಳನ್ನು ಓದುತ್ತಿರುವುದರಿಂದ ಈ ಬದಲಾವಣೆಯಿಂದ ಯಾರಿಗೂ ಸಮಸ್ಯೆಯಾಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ