LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಹೊಸ ಮುಖ್ಯಮಂತ್ರಿ ಆಯ್ಕೆಗೆ ಇಂದು ಸಂಜೆ CLP ಸಭೆ: ನಾಲ್ವರು ಶಾಸಕರು ಗೈರು

ಬೆಂಗಳೂರು: ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಹಾಗೂ ಹಂಗಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಶನಿವಾರ ಸಂಜೆ 4 ಗಂಟೆಗೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮಹತ್ವದ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ.

ಮುಂದಿನ ಶಾಸಕಾಂಗ ಪಕ್ಷದ ನಾಯಕರಾಗಿ ಡಿ.ಕೆ. ಶಿವಕುಮಾರ್ ಅವರನ್ನು ಅವಿರೋಧವಾಗಿ ಆಯ್ಕೆ ಮಾಡುವುದು ಬಹುತೇಕ ಖಚಿತವಾಗಿದೆ. ಸಿದ್ದರಾಮಯ್ಯ ಅವರೇ ಮುಂದಿನ ಶಾಸಕಾಂಗ ಪಕ್ಷದ ನಾಯಕನ ಸ್ಥಾನಕ್ಕೆ ಡಿ.ಕೆ. ಶಿವಕುಮಾರ್ ಅವರ ಹೆಸರು ಸೂಚಿಸಲಿದ್ದು, ಶಾಸಕಾಂಗ ಪಕ್ಷದ ಸದಸ್ಯರು ಅವಿರೋಧವಾಗಿ ನೂತನ ನಾಯಕರನ್ನಾಗಿ ಡಿ.ಕೆ. ಶಿವಕುಮಾರ್ ಅವರನ್ನು ಆಯ್ಕೆ ಮಾಡುವ ಸಾಧ್ಯತೆ ಇದೆ.

ಶಾಸಕಾಂಗ ಪಕ್ಷದ ನಿರ್ಣಯ ಆಧರಿಸಿ ನೂತನ ಮುಖ್ಯಮಂತ್ರಿ ಹೆಸರನ್ನು ಎಐಸಿಸಿ ಅಧಿಕೃತವಾಗಿ ಘೋಷಿಸಲಿದೆ. ನೂತನ ಮುಖ್ಯಮಂತ್ರಿ ಪ್ರಮಾಣ ವಚನ ದಿನಾಂಕದ ಬಗ್ಗೆ ನಿರ್ಧಾರವಾಗಲಿದೆ. ವಿಧಾನಸೌಧ ಭವ್ಯ ಮೆಟ್ಟಿಲಿನ ಎದುರು ಸಿದ್ಧತೆ ನಡೆಸಲಾಗಿದೆ.

ಸಭೆಯ ನಂತರ ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ ಸೇರಿದಂತೆ ಹಿರಿಯ ನಾಯಕರು ಲೋಕಭವನಕ್ಕೆ ತೆರಳಿ ರಾಜ್ಯಪಾಲರ ಭೇಟಿ ಮಾಡಲಿದ್ದಾರೆ. ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ. ಶಿವಕುಮಾರ್ ಸರ್ಕಾರ ರಚನೆ ಹಕ್ಕು ಮಂಡಿಸಲಿದ್ದಾರೆ.

ನಾಲ್ವರು ಶಾಸಕರು ಗೈರು

ಸಿ.ಎಲ್.ಪಿ. ಸಭೆಗೆ ನಾಲ್ವರು ಶಾಸಕರು ಗೈರು ಹಾಜರಾಗುವ ಸಾಧ್ಯತೆ ಇದೆ. ಅನಾರೋಗ್ಯದ ಕಾರಣದಿಂದ ಕಾಗವಾಡ ಶಾಸಕ ರಾಜು ಕಾಗೆ ಸಿ.ಎಲ್.ಪಿ. ಸಭೆಯಲ್ಲಿ ಭಾಗವಹಿಸುವುದಿಲ್ಲ. ತಂದೆ ನಿಧನದ ಹಿನ್ನೆಲೆ ಪಾವಗಡ ಶಾಸಕ ವೆಂಕಟೇಶ್ ಕೂಡ ಬರುವುದಿಲ್ಲ. ರಹೀಂಮ್ ಖಾನ್ ಹಜ್ ಯಾತ್ರೆಯಲ್ಲಿದ್ದಾರೆ. ಕೆ.ಎನ್. ರಾಜಣ್ಣ ವಿದೇಶದಲ್ಲಿದ್ದು, ಇಂದಿನ ಸಭೆಗೆ ಗೈರು ಹಾಜರಾಗಲಿದ್ದಾರೆ ಎನ್ನಲಾಗಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ