LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

‘CM’ ಬದಲಾವಣೆ ಮಾಡುವ ಬಗ್ಗೆ ನನಗೆ ಯಾವುದೇ ಮಾಹಿತಿಯಿಲ್ಲ ; ಸಿಎಂ ಸಿದ್ದರಾಮಯ್ಯ

ಸಿಎಂ ಬದಲಾವಣೆ ಮಾಡುವ ಬಗ್ಗೆ ನನಗೆ ಯಾವುದೇ ಮಾಹಿತಿಯಿಲ್ಲ ಎಂದು ಸಿಎಂ ಸಿದ್ದರಾಮಯ್ಯ  ಹೇಳಿದರು. ಇಂದು ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ದಾವಣಗೆರೆ ಮತ್ತು ಬಾಗಲಕೋಟೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ರಾಜ್ಯದ ಜನರು ಕಾಂಗ್ರೆಸ್ ಸರ್ಕಾರದ ಯೋಜನೆಗಳನ್ನು ಮೆಚ್ಚಿಕೊಂಡಿರುವುದನ್ನು ಸೂಚಿಸುತ್ತದೆ. ವಿಪಕ್ಷಗಳ ಯಾವುದೇ ತಂತ್ರಗಾರಿಕೆ ನಡೆಯುವುದಿಲ್ಲ. ಅವರು ಕೇವಲ ಕುತಂತ್ರಗಳನ್ನಷ್ಟೇ ಮಾಡುತ್ತಾರೆ ಎಂದರು.

ಕಾಂಗ್ರೆಸ್ ಸರ್ಕಾರ ತನ್ನ ಐದು ವರ್ಷದ ಅವಧಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಲಿದೆ. ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಪಕ್ಷದ ವರಿಷ್ಠರ ತೀರ್ಮಾನಕ್ಕೆ ಬದ್ಧವಾಗಿರುತ್ತೇನೆ. ಸಿಎಂ ಬದಲಾವಣೆ ಮಾಡುವ ಬಗ್ಗೆ ನನಗೆ ಯಾವುದೇ ಮಾಹಿತಿಯಿಲ್ಲ. ವರಿಷ್ಠರ ಭೇಟಿಗೆ ಕರೆ ಬಂದರೆ ನವದೆಹಲಿಗೆ ಹೋಗುತ್ತೇನೆ ಎಂದರು.

ಸಿದ್ದರಾಮ ಬೆಳ್ಳಿ ಕಿರಣ’ ಪುಸ್ತಕ ಲೋಕಾರ್ಪಣೆ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮೈಸೂರು ಜಿಲ್ಲಾಡಳಿತದ ವತಿಯಿಂದ ಮೈಸೂರಿನ ಕಲಾಮಂದಿರದಲ್ಲಿ ಆಯೋಜಿಸಿದ್ದ ಸಿದ್ದರಾಮೇಶ್ವರ ಜಯಂತಿಯನ್ನು ಉದ್ಘಾಟಿಸಿ, ಹಿರಿಯ ಸಾಹಿತಿ ಪ್ರೊ.ಎಸ್.ಜಿ.ಸಿದ್ದರಾಮಯ್ಯ ಅವರಿಗೆ 2025-26ನೇ ಸಾಲಿನ “ಕಾಯಕಯೋಗಿ ಸಿದ್ದರಾಮೇಶ್ವರ ‌ಪ್ರಶಸ್ತಿ‌” ನೀಡಿ ಗೌರವಿಸಿ, ಬಳಿಕ ಸಿದ್ದರಾಮೇಶ್ವರರ ಕುರಿತು ಬರೆದಿರುವ ‘ಸಿದ್ದರಾಮ ಬೆಳ್ಳಿ ಕಿರಣ’ ಪುಸ್ತಕವನ್ನು ಲೋಕಾರ್ಪಣೆಗೊಳಿಸಿದರು.

ಬೋವಿ ಗುರುಪೀಠದ ಶ್ರೀ ಸಿದ್ಧರಾಮೇಶ್ವರ ಸ್ವಾಮೀಜಿಯವರ ದಿವ್ಯ ಸಾನ್ನಿಧ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾದ ಶಿವರಾಜ್.ಎಸ್.ತಂಗಡಗಿ, ಪಶುಸಂಗೋಪನೆ ಸಚಿವ ವೆಂಕಟೇಶ್, ಶಾಸಕರಾದ ಹರೀಶ್ ಗೌಡ, ಅನಿಲ್ ಚಿಕ್ಕಮಾದು, ವಿಧಾನ ಪರಿಷತ್ ಸದಸ್ಯರಾದ ಡಾ.ಯತೀಂದ್ರ ಸಿದ್ದರಾಮಯ್ಯ, ಡಾ.ತಿಮ್ಮಯ್ಯ, ಬೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ರಾಮಪ್ಪ, ಮೃಗಾಲಯ ಪ್ರಾಧಿಕಾರದ ಅಧ್ಯಕ್ಷರಾದ ಎನ್.ರಂಗಸ್ವಾಮಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿಯಾದ ಜೆ.ಮಂಜುನಾಥ್, ನಿರ್ದೇಶಕರಾದ ಮಂಜುನಾಥ್ ಸ್ವಾಮಿ, ಜಿಲ್ಲಾಧಿಕಾರಿಗಳಾದ ಲಕ್ಷ್ಮೀಕಾಂತ್ ರೆಡ್ಡಿ ಹಾಗೂ ಇನ್ನಿತರೆ ಗಣ್ಯರು ಉಪಸ್ಥಿತರಿದ್ದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿಮಕ್ಕಳ ಮನಸ್ಸು, ಮೆದುಳಿನ ಶಕ್ತಿಗೆ ದಾರಿದೀಪ ಈ ಪುಸ್ತಕ: ತಪ್ಪದೇ ಖರೀದಿಸಿ, ನಿಮ್ಮ ಮಕ್ಕಳಿಗೆ ತಪ್ಪದೇ ಓದಿಸಿ!ಹಿಂದೂಗಳ ಆಚರಣೆಗೆ ಸರ್ಕಾರ ಅಡ್ಡಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಕಾಂಗ್ರೆಸ್ ಪಕ್ಷ ಸಂಘಟನೆ ಬಲವರ್ಧನೆಗೆ 'ಕೆಪಿಸಿಸಿ ಕನೆಕ್ಟ್ ಸೆಂಟರ್' ಸ್ಥಾಪನೆ: ಪದಾಧಿಕಾರಿಗಳ ನೇಮಕ