LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

CM ಡಿ.ಕೆ. ಶಿವಕುಮಾರ್ ಸರ್ಕಾರದ 100 ದಿನಗಳ ಯಶಸ್ವಿ ಆಡಳಿತ : ನಾಳೆ ವಿಧಾಸೌಧದಲ್ಲಿ `ಶತಕದ ಪಥ, ಪ್ರಗತಿಯ ರಥ’ ವಿಶೇಷ ಕಾರ್ಯಕ್ರಮ

ಬೆಂಗಳೂರು :  ಕರ್ನಾಟಕ ಸರ್ಕಾರದ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ಆಡಳಿತವು 100 ದಿನಗಳನ್ನು ಯಶಸ್ವಿಯಾಗಿ ಪೂರೈಸಿದ ಹಿನ್ನೆಲೆಯಲ್ಲಿ, "ದೃಢ ಕರ್ನಾಟಕದ ಸಂಕಲ್ಪ - ಶತಕದ ಪಥ, ಪ್ರಗತಿಯ ರಥ" ಎಂಬ ವಿಶೇಷ ಕಾರ್ಯಕ್ರಮವನ್ನು ವಿಧಾನಸೌಧದ ಬ್ಯಾಂಕ್ವೇಟ್ ಸಭಾಂಗಣದಲ್ಲಿ 2026ನೇ ಸೆಪ್ಟೆಂಬರ್ 10 ರ ಗುರುವಾರ ಬೆಳಿಗ್ಗೆ 10.00 ಗಂಟೆಗೆ ಆಯೋಜಿಸಲಾಗಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಸನ್ಮಾನ್ಯ ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಸಿದ್ಧರಾಮಯ್ಯ ಅವರು ನೆರವೇರಿಸಲಿದ್ದು, ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ. ಶಿವಕುಮಾರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ  ಉಪ ಮುಖ್ಯಮಂತ್ರಿಗಳು ಹಾಗೂ ಕಂದಾಯ ಮತ್ತು ಕ್ರೀಡಾ ಇಲಾಖೆ ಸಚಿವರಾದ ಡಾ. ಜಿ. ಪರಮೇಶ್ವರ್, .  ರಾಜ್ಯ ಸಂಪುಟದ ಎಲ್ಲಾ ಸಚಿವರು, ಶಾಸಕರು ಮತ್ತು ರಾಜ್ಯ ಸಭಾ‌ ಸದಸ್ಯರು, ಲೋಕಸಭಾ‌ ಸದಸ್ಯರು ಹಾಗೂ ವಿಧಾನಪರಿಷತ್ತಿನ ಸದಸ್ಯರು, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಸೇರಿದಂತೆ ಸರ್ಕಾರದ ಎಲ್ಲಾ ಇಲಾಖೆಗಳ ಹಿರಿಯ ಅಧಿಕಾರಿಗಳು ಭಾಗವಹಿಸಲಿದ್ದಾರೆ. 

ಫಲಾನುಭವಿಗಳೊಂದಿಗೆ ಮುಖ್ಯಮಂತ್ರಿಗಳ ಸಂವಾದ:

ಸರ್ಕಾರದ ಪ್ರಮುಖ ಐದು ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ ಯೋಜನೆ, ಗೃಹಲಕ್ಷ್ಮಿ ಯೋಜನೆ, ಶಕ್ತಿ ಯೋಜನೆ, ಯುವನಿಧಿ ಯೋಜನೆ, ಗೃಹಜ್ಯೋತಿ ಯೋಜನೆ ಹಾಗೂ ವಿವಿಧ ಕ್ಷೇತ್ರದ ಕಾರ್ಮಿಕರನ್ನು ಒಳಗೊಂಡಂತೆ, ಸಮಾಜದ ವಿವಿಧ ವರ್ಗಗಳ ಫಲಾನುಭವಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ಅವರೊಂದಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನೇರವಾಗಿ ಸಂವಾದ ನಡೆಸಲಿದ್ದಾರೆ.

ಕಾರ್ಯಕ್ರಮದಲ್ಲಿ ಕೃಷಿಕರು, ಆಟೋ ಚಾಲಕರು, ಹಮಾಲಿಗಳು, ಗಿಗ್ ಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಮತ್ತು ಪೌರಕಾರ್ಮಿಕರು ಭಾಗವಹಿಸಲಿದ್ದು, ರಾಜ್ಯ ಸರ್ಕಾರದ ಜನಪರ ಯೋಜನೆಗಳು ಜನರ ಜೀವನದಲ್ಲಿ ತಂದಿರುವ ಬದಲಾವಣೆಗಳು ಮತ್ತು ಅಭಿವೃದ್ಧಿಯ ಮುಂದಿನ ಹಾದಿಯ ಕುರಿತು  ಚರ್ಚೆ ನಡೆಯಲಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದಲ್ಲಿ ಕುಡಿಯುವ ನೀರು, ಮೇವಿನ ಕೊರತೆಗೆ ತಕ್ಷಣ ಕ್ರಮ: ಡಿಸಿಎಂ ಡಾ.ಜಿ.ಪರಮೇಶ್ವರ್ಒಂದೇ ಕುಟುಂಬದಲ್ಲಿ ಒಂದಕ್ಕಿಂತ ಹೆಚ್ಚು ರೇಷನ್ ಕಾರ್ಡ್ ಇರಬಹುದೇ? ಪ್ರತ್ಯೇಕ ಕಾರ್ಡ್ ಪಡೆಯಲು ಇರುವ ನಿಯಮಗಳಿವು!ಈಶ್ವರ ಖಂಡ್ರೆ ಭೇಟಿ ಬೆನ್ನಲ್ಲೇ ಹಿರೇಹಳ್ಳಿ ಕೆರೆ ಒತ್ತುವರಿ ತೆರವುCM ಡಿ.ಕೆ. ಶಿವಕುಮಾರ್ ಸರ್ಕಾರದ 100 ದಿನಗಳ ಯಶಸ್ವಿ ಆಡಳಿತ : ನಾಳೆ ವಿಧಾಸೌಧದಲ್ಲಿ `ಶತಕದ ಪಥ, ಪ್ರಗತಿಯ ರಥ’ ವಿಶೇಷ ಕಾರ್ಯಕ್ರಮಬ್ಯಾಂಕ್ ಖಾತೆದಾರ ಮೃತಪಟ್ಟರೆ ನಾಮಿನಿ ಇಲ್ಲದಿದ್ದರೂ ಹಣ ಪಡೆಯಬಹುದೇ? ಇಲ್ಲಿದೆ RBI ನಿಯಮರಾಜ್ಯದ ರೈತರೇ ಗಮನಿಸಿ : ಭೂಮಿ ತಂತ್ರಾಂಶದಲ್ಲಿ `ಪಹಣಿ’ ಸೃಜನೆ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶಭಾರತ್ ಜೋಡೋ ಯಾತ್ರೆ; ದೇಶದ ಜನಸಾಮಾನ್ಯರ ಸಂಕಷ್ಟಕ್ಕೆ ಸಿಕ್ಕ ಪರಿಹಾರ: ಸಿಎಂ ಡಿ ಕೆ ಶಿವಕುಮಾರ್ ಅಭಿಮತBIG NEWS : ರಾಜ್ಯದ ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣೆ: ಮತಪೆಟ್ಟಿಗೆಗಳ ಮಾಹಿತಿ ಸಲ್ಲಿಸಲು ರಾಜ್ಯ ಚುನಾವಣಾ ಆಯೋಗ ಸೂಚನೆಕನ್ನಡ ಮಾಧ್ಯಮ ಶಾಲೆಗಳಿಗೆ ಅನುದಾನ ಕೋರಿ ರಕ್ತದಲ್ಲಿ ಪತ್ರ ಬರೆದ ಶಿಕ್ಷಕಕನ್ನಡ ಮಾಧ್ಯಮ ಶಾಲೆಗಳಿಗೆ ಅನುದಾನ ಕೋರಿ ರಕ್ತದಲ್ಲಿ ಪತ್ರ ಬರೆದ ಶಿಕಾರಿಪುರದ ಶಿಕ್ಷಕ