LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕೇಂದ್ರ ಸರ್ಕಾರಿ ನೌಕರರು, ಪಿಂಚಣಿದಾರರಿಗೆ ಸಿಹಿಸುದ್ದಿ; ದೀಪಾವಳಿ ಉಡುಗೊರೆಯಾಗಿ DA ಹೆಚ್ಚಳ ?

ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರು 2026ರ ಜುಲೈ ತಿಂಗಳಿಂದ ಜಾರಿಗೆ ಬರಬೇಕಿರುವ ತುಟ್ಟಿಭತ್ಯೆ (DA) ಹಾಗೂ ತುಟ್ಟಿ ಪರಿಹಾರ (DR) ಹೆಚ್ಚಳದ ಸುದ್ದಿಗಾಗಿ ಈ ಹಬ್ಬದ ಋತುವಿನಲ್ಲಿ ಕಾತರದಿಂದ ಕಾಯುತ್ತಿದ್ದಾರೆ.

ಹೌದು. ದೀಪಾವಳಿ ಹಬ್ಬದ ಸಂಭ್ರಮದಲ್ಲಿರುವ ಕೇಂದ್ರ ಸರ್ಕಾರಿ ನೌಕರರು ಹಾಗೂ ಪಿಂಚಣಿದಾರರಿಗೆ ಸಿಹಿಸುದ್ದಿ ಸಿಗುವ ನಿರೀಕ್ಷೆಯಿದೆ. 2026ರ ಜುಲೈ ತಿಂಗಳಿಂದ ಅನ್ವಯವಾಗಬೇಕಿರುವ ತುಟ್ಟಿಭತ್ಯೆ (DA) ಮತ್ತು ತುಟ್ಟಿ ಪರಿಹಾರ (DR)ವನ್ನು ಶೇ.3ರಷ್ಟು ಹೆಚ್ಚಿಸುವ ಸಾಧ್ಯತೆ ಕುರಿತು ಚರ್ಚೆ ನಡೆಯುತ್ತಿದೆ. ಈ ಪ್ರಸ್ತಾವನೆಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದರೆ, ಡಿಎ ಶೇ.60ರಿಂದ ಶೇ.63ಕ್ಕೆ ಏರಿಕೆಯಾಗಲಿದ್ದು, ನೌಕರರಿಗೆ ಮೂರು ತಿಂಗಳ ಬಾಕಿ ಹಣವೂ ಸಿಗುವ ಸಾಧ್ಯತೆಯಿದೆ. ಆದರೆ, ಈ ಬಗ್ಗೆ ಕೇಂದ್ರ ಸರ್ಕಾರದಿಂದ ಇನ್ನೂ ಅಧಿಕೃತ ಘೋಷಣೆ ಹೊರಬಿದ್ದಿಲ್ಲ.

ಪ್ರಸ್ತುತ ಶೇ.60ರಷ್ಟಿರುವ ತುಟ್ಟಿಭತ್ಯೆಯನ್ನು ಶೇ.3ರಷ್ಟು ಹೆಚ್ಚಿಸಲು ಕೇಂದ್ರ ಸರ್ಕಾರ ಅನುಮೋದನೆ ನೀಡುವ ಸಾಧ್ಯತೆಯಿದೆ ಎಂಬ ನಿರೀಕ್ಷೆಗಳು ವ್ಯಕ್ತವಾಗಿವೆ.

ಈ ಪ್ರಸ್ತಾವನೆಗೆ ಅಂತಿಮ ಅನುಮೋದನೆ ದೊರೆತರೆ, ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆ ಶೇ.60ರಿಂದ ಶೇ.63ಕ್ಕೆ ಏರಿಕೆಯಾಗಲಿದೆ. ಇದರಿಂದ ನೌಕರರ ಮಾಸಿಕ ವೇತನದಲ್ಲಿ ಹೆಚ್ಚಳವಾಗಲಿದೆ.

ಉದಾಹರಣೆಗೆ, ಒಬ್ಬ ನೌಕರನ ಕನಿಷ್ಠ ಮೂಲ ವೇತನ ₹18,000 ಇದ್ದರೆ, ಪ್ರಸ್ತುತ ಶೇ.60ರ ತುಟ್ಟಿಭತ್ಯೆಯ ಪ್ರಕಾರ ತಿಂಗಳಿಗೆ ₹10,800 ದೊರೆಯುತ್ತದೆ. ಡಿಎ ಶೇ.63ಕ್ಕೆ ಏರಿಕೆಯಾದರೆ, ಈ ಮೊತ್ತ ₹11,340ಕ್ಕೆ ಹೆಚ್ಚಳವಾಗುತ್ತದೆ. ಅಂದರೆ, ನೌಕರರಿಗೆ ಪ್ರತಿ ತಿಂಗಳು ಹೆಚ್ಚುವರಿಯಾಗಿ ₹540 ಲಭಿಸಲಿದೆ.

ಈ ಹೆಚ್ಚಳವು 2026ರ ಜುಲೈ ತಿಂಗಳಿಂದಲೇ ಜಾರಿಗೆ ಬಂದರೆ, ನೌಕರರಿಗೆ ಜುಲೈ, ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳ ಮೂರು ತಿಂಗಳ ಬಾಕಿ ಹಣವೂ (ಅರಿಯರ್ಸ್) ಒಟ್ಟಿಗೆ ಸಿಗುವ ಸಾಧ್ಯತೆಯಿದೆ. ದೀಪಾವಳಿ ಹಬ್ಬ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ, ಕೇಂದ್ರ ಸರ್ಕಾರ ಹಬ್ಬದ ಉಡುಗೊರೆಯಾಗಿ ಈ ಘೋಷಣೆ ಮಾಡಬಹುದು ಎಂದು ನೌಕರರ ಸಂಘಟನೆಗಳು ನಿರೀಕ್ಷಿಸುತ್ತಿವೆ.

ಕಳೆದ ಐದು ವರ್ಷಗಳ ಬೆಳವಣಿಗೆಗಳನ್ನು ಗಮನಿಸಿದರೆ, ಜುಲೈ ಅವಧಿಯ ಡಿಎ ಹೆಚ್ಚಳದ ನಿರ್ಧಾರವನ್ನು ಕೇಂದ್ರ ಸರ್ಕಾರ ಸಾಮಾನ್ಯವಾಗಿ ಸೆಪ್ಟೆಂಬರ್ ಕೊನೆಯ ವಾರದಲ್ಲಿ ಅಥವಾ ಅಕ್ಟೋಬರ್ ತಿಂಗಳಲ್ಲಿ ಪ್ರಕಟಿಸುತ್ತಾ ಬಂದಿದೆ. ಈ ಬಾರಿ ಘೋಷಣೆ ವಿಳಂಬವಾಗಿದ್ದರೂ, ದೀಪಾವಳಿಗೂ ಮುನ್ನ ಕೇಂದ್ರ ಸಚಿವ ಸಂಪುಟದಿಂದ ಅಧಿಕೃತ ಪ್ರಕಟಣೆ ಹೊರಬೀಳಬಹುದು ಎಂಬ ನಿರೀಕ್ಷೆ ಇದೆ.

ಆದರೆ, ಡಿಎ ಹೆಚ್ಚಳದ ಪ್ರಮಾಣ, ಜಾರಿಗೆ ಬರುವ ದಿನಾಂಕ ಹಾಗೂ ಬಾಕಿ ಹಣದ ಪಾವತಿ ಕುರಿತು ಅಂತಿಮ ನಿರ್ಧಾರ ಕೇಂದ್ರ ಸರ್ಕಾರದ ಅಧಿಕೃತ ಪ್ರಕಟಣೆ ಹೊರಬಿದ್ದ ನಂತರವೇ ಸ್ಪಷ್ಟವಾಗಲಿದೆ. ಸದ್ಯಕ್ಕೆ ಶೇ.3ರಷ್ಟು ಹೆಚ್ಚಳದ ಬಗ್ಗೆ ನಿರೀಕ್ಷೆಗಳು ವ್ಯಕ್ತವಾಗಿದ್ದು, ಇದನ್ನು ಖಚಿತ ನಿರ್ಧಾರವೆಂದು ಪರಿಗಣಿಸಬಾರದು.

ಅಧಿಕಾರಿಗಳು ಸರ್ಕಾರ ಮತ್ತು ಜನರ ನಡುವೆ ಸಂಪರ್ಕ ಸೇತುವೆಯಾಗಿ ಕಾರ್ಯನಿರ್ವಹಿಸಿ : ಬೇಳೂರು ಗೋಪಾಲಕೃಷ್ಣ

ಶಿವಮೊಗ್ಗ : ಪ್ರಜಾಸೇವೆ ಎಂದರೆ ಅಧಿಕಾರಿಗಳು ಸರ್ಕಾರಿ ಕಚೇರಿಯಲ್ಲಿದ್ದು ಕರ್ತವ್ಯ ನಿರ್ವಹಿಸುವುದು ಮಾತ್ರವಲ್ಲ, ಜನರ ನೋವು-ನಲಿವುಗಳಿಗೆ ಸ್ಪಂದಿಸಿ, ಅವರ ಸಮಸ್ಯೆಗಳಿಗೆ ಪರಿಹಾರ ಕಂಡುಹಿಡಿದು, ಸರ್ಕಾರ ಮತ್ತು ಜನರ ನಡುವಿನ ವಿಶ್ವಾಸದ ಸೇತುವೆಯಾಗಿ ಕಾರ್ಯನಿರ್ವಹಿಸಬೇಕು ಎಂದು ಸಾಗರ ವಿಧಾನ ಸಭಾ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಹೇಳಿದರು.

ಅವರು ಸಾಗರ ತಾಲೂಕಿನ ಆನಂದಪುರದ ಕಡ್ಲೆಹಂಕ್ಲು ಶ್ರೀ ಮಾರಿಕಾಂಬಾ ದೇವಸ್ಥಾನದ ಆವರಣದಲ್ಲಿ ಆಯೋಜಿಸಲಾಗಿದ್ದ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಸಭೆಯನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

ಪ್ರಜಾಸೇವೆಯ ಮೂಲ ಉದ್ದೇಶವೇ ಜನರ ಕಲ್ಯಾಣ, ಜನರ ಸಮಸ್ಯೆಗಳಿಗೆ ಸ್ಪಂದನೆ ಹಾಗೂ ಸರ್ಕಾರದ ಸೇವೆಗಳನ್ನು ಅರ್ಹ ಫಲಾನುಭವಿಗಳಿಗೆ ಪಾರದರ್ಶಕವಾಗಿ ತಲುಪಿಸುವುದಾಗಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರೇ ಕೇಂದ್ರಬಿಂದುವಾಗಿದ್ದು, ಆಡಳಿತವು ಜನಸ್ನೇಹಿ, ಜವಾಬ್ದಾರಿಯುತ ಮತ್ತು ಪರಿಣಾಮಕಾರಿಯಾಗಿರಬೇಕು ಎಂದ ಅವರು ಸಮಾಜದ ಎಲ್ಲ ವರ್ಗಗಳ ಜನರ ಜೀವನಮಟ್ಟ ಸುಧಾರಿಸಿ, ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡುವುದು ಸರ್ಕಾರದ ಆಶಯವಾಗಿದೆ ಎಂದರು.

ಈ ಆಂದೋಲನದಲ್ಲಿ ಸ್ವೀಕರಿಸಲಾಗುವ ಸಾರ್ವಜನಿಕರ ಕುಂದುಕೊರತೆಗಳಿಗೆ ನಿಗದಿಪಡಿಸಿದ ಕಾಲಮಿತಿಯಲ್ಲಿ ಪರಿಹಾರ ಒದಗಿಸಲಾಗುವುದು. ಅಲ್ಲದೇ ಸರ್ಕಾರದ ವಿವಿಧ ಇಲಾಖೆಗಳಿಂದ ಅನುಷ್ಠಾನಗೊಳ್ಳುವ ಜನಪರ ಯೋಜನೆಗಳು ಮತ್ತು ಅವುಗಳ ಸೌಲಭ್ಯಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವುದಾಗಿದೆ ಎಂದರು.

ಈ ನಿಟ್ಟಿನಲ್ಲಿ ರಾಜ್ಯದ ಮಾನ್ಯ ಮುಖ್ಯಮಂತ್ರಿಗಳ ಆಶಯದಂತೆ ಭ್ರಷ್ಟಾಚಾರಕ್ಕೆ ಅವಕಾಶವಿಲ್ಲದಂತೆ ಪ್ರಾಮಾಣಿಕತೆ, ಪಾರದರ್ಶಕತೆ ಮತ್ತು ಹೊಣೆಗಾರಿಕೆಯಿಂದ ಆಡಳಿತ ಯಂತ್ರ ಕಾರ್ಯನಿರ್ವಹಿಸಲು ಹಾಗೂ ಅಧಿಕಾರಿಗಳಿಗೆ ಚುರುಕು ಮುಟ್ಟಿಸಲು ಉದ್ದೇಶಿಸಲಾಗಿದೆ ಎಂದರು.

ವಿಶೇಷವಾಗಿ ಈ ಕಾರ್ಯಕ್ರಮದಲ್ಲಿ ಅಭಿವೃದ್ಧಿ ಕಾರ್ಯಗಳಲ್ಲಿ ಸಾರ್ವಜನಿಕರ ಅಭಿಪ್ರಾಯ ಮತ್ತು ಸಹಭಾಗಿತ್ವಕ್ಕೆ ಅವಕಾಶ ಕಲ್ಪಿಸಲಾಗಿದೆ. ಮೂಲಸೌಕರ್ಯ, ಶಿಕ್ಷಣ, ಆರೋಗ್ಯ, ಕುಡಿಯುವ ನೀರು, ಸ್ವಚ್ಛತೆ ಮತ್ತು ಉದ್ಯೋಗಾವಕಾಶಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ ಹಾಗೂ ಗ್ರಾಮೀಣ ಜನರ ವೈಯಕ್ತಿಕ ಸಮಸ್ಯೆಗಳಿಗೆ ತಕ್ಷಣದ ಪರಿಹಾರ ಕೊಡಿಸಲು ವಿಶೇಷ ಗಮನಹರಿಸಲಾಗುವುದು ಎಂದರು.

ಪ್ರತಿಯೊಬ್ಬ ಸರ್ಕಾರಿ ಅಧಿಕಾರಿ ಮತ್ತು ಸಿಬ್ಬಂದಿಗಳು ಸೇವಾ ಮನೋಭಾವ, ಪ್ರಾಮಾಣಿಕತೆ, ಕರ್ತವ್ಯನಿಷ್ಠೆ ಹಾಗೂ ಮಾನವೀಯತೆಯಿಂದ ಕಾರ್ಯನಿರ್ವಹಿಸಿದಲ್ಲಿ ಪ್ರಜಾಸೇವೆಯ ಉದ್ದೇಶ ಸಫಲವಾಗಲಿದೆ ಎಂದರು.

ಕಸ್ತೂರಿ ರಂಗನ್ ವರದಿ, ಅರಣ್ಯ ಕಾಯ್ದೆಗಳು ಮಲೆನಾಡಿನ ಜನರನ್ನು ಚಿಂತಾಕ್ರಾಂತರನ್ನಾಗಿಸಿದೆ. ಇಂತಹ ಸಂದರ್ಭದಲ್ಲಿ ಸರ್ಕಾರವು ರೈತರ ಪರವಾಗಿ ನಿಲ್ಲಲಿದೆ. ಅದಾಗ್ಯೂ ಪರಿಸರ ಸಮತೋಲನ ಕಾದುಕೊಳ್ಳುವಲ್ಲಿ ರೈತರು ತಮಗಿರುವ ಭೂಮಿಯಲ್ಲಿ ಗಿಡ-ಮರಗಳನ್ನು ನೆಟ್ಟು ಪೋಷಿಸುವಂತೆ ಸಲಹೆ ನೀಡಿದರು.

ಎಲ್ಲರೂ ಸ್ವಂತ ಸೂರನ್ನು ಹೊಂದಬೇಕೆಂಬ ಸದಾಶಯದಿಂದ ನಿವೇಶನ ರಹಿತರಿಗೆ ನಿವೇಶನ ಒದಗಿಸಲು ಉದ್ದೇಶಿಸಿದೆ. ಅದಕ್ಕಾಗಿ ಪ್ರತಿ ಜಿಲ್ಲೆಯಲ್ಲಿ ಅರ್ಹರಾದ 50000 ಫಲಾನುಭವಿಗಳನ್ನು ಗುರುತಿಸಿ ನಿವೇಶನ ನೀಡಲಿದೆ. ಸಾಗರ ತಾಲೂಕಿನ ಸುಮಾರು 8000 ಜನರಿಗೆ ನಿವೇಶನ ಕೊಡಿಸುವ ಆಶಯ ನನಗಿದೆ ಎಂದರು.

ಕಾರ್ಯಕ್ರಮದಲ್ಲಿ ಹೊಲಕ್ಕೆ ಕಾಲುದಾರಿ ನಿರ್ಮಿಸಿ, ಕುಡಿಯುವ ನೀರು ಪೂರೈಸಿ, ಭಾಗ್ಯಲಕ್ಷ್ಮಿ ಸೌಲಭ್ಯ ಕೊಡಿಸಿ, ಅಂಗವಿಕಲರ ವೇತನ ಕೊಡಿಸಿ, ವಿದ್ಯುತ್ ಸೌಲಭ್ಯ ಕಲ್ಪಿಸಿ, ಜಮೀನಿನ ಹಕ್ಕುಪತ್ರ ಕೊಡಿಸಿ, ದುರ್ಬಲ ಮರಗಳನ್ನು ಉರುಳಿಸಿ ಇನ್ನೂ ಮುಂತಾದ ವಿಷಯಗಳ ಅರ್ಜಿಗಳು ಸಲ್ಲಿಕೆಯಾದವು.

ಬೆಳಿಗ್ಗೆ 9ಗಂಟೆಯಿಂದಲೇ ಗ್ರಾಮೀಣ ಜನರು ತಮ್ಮ ಅಹವಾಲುಗಳನ್ನು ಸಲ್ಲಿಸಲು ಸರದಿ ಸಾಲಿನಲ್ಲಿ ನಿಂತಿದ್ದರು. ಕಾರ್ಯಕ್ರಮದ ನಡುವೆ ರೈತರಿಗೆ ಮೇವಿನ ಬೀಜದ ಪ್ಯಾಕೆಟ್ ಗಳನ್ನು ಶಾಸಕರು ವಿತರಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ, ಸಿಇಓ ರಿಷಿ ಆನಂದ್, ಎಸಿ ವೀರೇಶ್ ಕುಮಾರ್, ಎಎಸ್ಪಿ ಬೆನಕಪ್ಪ, ಡಾ. ಪ್ರತಿಭಾ ಆರ್, ಮೌನೇಶ್, ಸುಜಾತಾ, ನಂದಿನಿ, ಸಂತೋಷಕುಮಾರ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು, ಸಹಸ್ರಾರು ಸಂಖ್ಯೆಯ ಗ್ರಾಮಸ್ಥರು ಭಾಗವಹಿಸಿದ್ದರು

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುಂಬೈ ಅಂತರ ಶಾಲಾ ಬಾಸ್ಕೆಟ್‌ಬಾಲ್ ಧಮಾಕಾ: ಡಾನ್ ಬೊಸ್ಕೊ ಮಣಿಸಿ ಟ್ರೋಫಿ ಎತ್ತಿಹಿಡಿದ ಅಂಡೇರಿಯಾ ಎಂಪಿಎಸ್!Motorola Signature 27 Snapdragon 8 Elite Extreme Gen 6 ಮತ್ತು 200MP ಟೆಲಿಫೋಟೋ ಲೆನ್ಸ್‌ನೊಂದಿಗೆ ಅನಾವರಣಬಾಲಿವುಡ್ ಅಂಗಳದಲ್ಲಿ ಹೊಸ ಲವ್ ಸ್ಟೋರಿ: ಗೆಳತಿ ಜೊತೆ ಮನೀಶ್ ಮಲ್ಹೋತ್ರಾ ಪಾರ್ಟಿಯಲ್ಲಿ ಮಾಧುರಿ ದೀಕ್ಷಿತ್ ಮಗ!ಬ್ಯಾಂಕ್ ಲಾಕರ್’ ನಲ್ಲಿ ಇಟ್ಟಿದ್ದ ₹47 ಲಕ್ಷದ ಚಿನ್ನಾಭರಣ ನಾಪತ್ತೆ! ಮಹಿಳೆಯ ಹೋರಾಟಕ್ಕೆ ಕೊನೆಗೂ ಸಿಕ್ತು ಜಯ!ರಾಮಾಯಣ’ದಲ್ಲಿ ರಾಮನಾಗಿ ರಣಬೀರ್, ರಾವಣನಾಗಿ ಯಶ್; ಇಬ್ಬರಲ್ಲಿ ಶ್ರೀಮಂತ ನಟ ಯಾರು?ಕೈ ಕೈ ಹಿಡಿದು ಬಂದ ಐಶ್ವರ್ಯಾ ರೈ–ಅಭಿಷೇಕ್ ಜೋಡಿ; ರೊಮ್ಯಾಂಟಿಕ್ ಕ್ಷಣ ವೈರಲ್! ವಿಚ್ಛೇದನದ ವದಂತಿಗಳಿಗೆ ಬ್ರೇಕ್?ಆಸೀಸ್ ಕ್ರಿಕೆಟರ್ ಗೆ ಕೊಕೇನ್ ಶಾಕ್: ತಪ್ಪು ಒಪ್ಪಿಕೊಂಡು ನಿಷೇಧ ಪೂರ್ಣಗೊಳಿಸಿದ ಕ್ರಿಸ್ ಲಿನ್!ಧನ್ತೇರಸ್ 2026: ಚಿನ್ನ ಖರೀದಿಗೆ ಶುಭ ಮುಹೂರ್ತ ಯಾವಾಗ? ಬೆಂಗಳೂರು ಸೇರಿ ಪ್ರಮುಖ ನಗರಗಳ ಪೂಜಾ ಸಮಯ ಇಲ್ಲಿದೆಉತ್ತರ ಪ್ರದೇಶದಲ್ಲಿ ಮೂರನೇ ಅವಧಿಗಾಗಿ ಬಿಜೆಪಿಯ ತಂತ್ರ: ಕಲ್ಯಾಣ ಯೋಜನೆ, ಮಹಿಳಾ ಮತ ಮತ್ತು ಯೋಗಿ ವರ್ಚಸ್ಸಿನ ಮೇಲೆ ಭರವಸೆಭಾರತದಲ್ಲಿ ಅತಿ ಹೆಚ್ಚು ಸಕ್ಕರೆ ಉತ್ಪಾದಿಸುವ ಟಾಪ್ 5 ಕಂಪನಿಗಳು ಯಾವುದು ಗೊತ್ತಾ? ಇಲ್ಲಿದೆ ಮಾಹಿತಿ!