LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಗಣೇಶ ಹಬ್ಬದ ಆಚರಣೆ ಮತ್ತು ಮೆರವಣೆಗೆ ವೇಳೆ `DJ ಸಿಸ್ಟಂ, ಕಲರ್ ಪೇಪರ್ ಬ್ಲಾಸ್ಟಿಂಗ್, ಬೈಕ್ ರ್ಯಾಲಿ ನಿಷೇಧ.!

ಗಣೇಶ ಹಬ್ಬದ ಆಚರಣೆ ಮತ್ತು ಮೆರವಣಿಗೆಯ ಹಿನ್ನೆಲೆಯಲ್ಲಿ ಸಾರ್ವಜನಿಕರ ಶಾಂತಿ ಹಾಗೂ ಸೌಹಾರ್ದತೆ ಕಾಪಾಡುವ ಉದ್ದೇಶದಿಂದ ದಿ:14/09/2026 ರಿಂದ ದಿ:13/10/2026 ರವರೆಗೆ 30 ದಿನಗಳ ಕಾಲ ಡಿಜೆ ಸಿಸ್ಟಂ, ಕಲರ್ ಪೇಪರ್ ಬ್ಲಾಸ್ಟಿಂಗ್, ಸಿಡಿಮದ್ದುಗಳನ್ನು ಸಿಡಿಸುವುದನ್ನು ಮತ್ತು ಬೈಕ್ ರ‍್ಯಾಲಿಗಳನ್ನು ನಿಷೇಧಿಸಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಆದೇಶ ಹೊರಡಿಸಿದ್ದಾರೆ.

ಸೆ.14 ರಂದು ಜಿಲ್ಲಾದ್ಯಂತ ಗಣೇಶ ಹಬ್ಬ ನಡೆಯಲಿದ್ದು, ಸಾರ್ವಜನಿಕರಿಗೆ, ವಿದ್ಯಾರ್ಥಿಗಳಿಗೆ, ವಯಸ್ಕರಿಗೆ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ತೊಂದರೆಯಾಗುವುದರೊಂದಿಗೆ ಕಾನೂನು ಸುವ್ಯವಸ್ಥೆಗೆ ಧಕ್ಕೆಯುಂಟಾಗುವ ಸಾಧ್ಯತೆಗಳಿರುತ್ತವೆ.

ಈ ಹಿನ್ನೆಲೆಯಲ್ಲಿ, ಪೊಲೀಸ್ ಅಧೀಕ್ಷಕರ ಶಿಫಾರಸಿನಂತೆ ಮುಂಜಾಗ್ರತಾ ಕ್ರಮವಾಗಿ ಕರ್ನಾಟಕ ಪೊಲೀಸ್ ಕಾಯ್ದೆ-1963 ರ ಕಲಂ 35, 36 ರ ಅಡಿಯಲ್ಲಿ ನೀಡಲಾದ ಅಧಿಕಾರವನ್ನು ಚಲಾಯಿಸಿ, ಜಿಲ್ಲಾದ್ಯಂತ ಸೆ. 14 ರಿಂದ ಅ.13 ರವರೆಗೆ ಈ ನಿಷೇಧಾಜ್ಞೆ ಜಾರಿಯಲ್ಲಿರಲಿದೆ ಎಂದು ಅವರು ತಿಳಿಸಿದ್ದಾರೆ.

ಗಣೇಶ ವಿಸರ್ಜನೆಗೆ ತೆಪ್ಪ ಬಳಕೆ: ಶಿವಮೊಗ್ಗ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರಿಂದ ಕಟ್ಟುನಿಟ್ಟಿನ ನಿಯಮ ಜಾರಿ

ಜಿಲ್ಲೆಯಲ್ಲಿ ಮುಂಬರುವ ಗಣೇಶ ಚತುರ್ಥಿ ಹಬ್ಬದ ಅಂಗವಾಗಿ ಸಾರ್ವಜನಿಕ ಸ್ಥಳಗಳಲ್ಲಿ ಪ್ರತಿಷ್ಠಾಪಿಸುವ ಗಣಪತಿ ಮೂರ್ತಿಗಳ ವಿಸರ್ಜನೆ ವೇಳೆ ಸಂಭವಿಸಬಹುದಾದ ಅನಾಹುತಗಳನ್ನು ತಡೆಯಲು ಹಾಗೂ ಸಾರ್ವಜನಿಕ ಶಾಂತಿ-ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಶಿವಮೊಗ್ಗ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರು ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೆಹಲಿ ಬ್ರಿಕ್ಸ್ ಶೃಂಗಸಭೆಯಲ್ಲಿ ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಭಾಗಿ: 7 ವರ್ಷಗಳ ನಂತರ ಭಾರತಕ್ಕೆ ಭೇಟಿಸಾಗರದಲ್ಲಿ ರೋಗಿಗಳಿಗೆ ಹಣ್ಣು-ಹಂಪಲು ವಿತರಿಸಿ 'ಬ್ಲಾಕ್ ಕಾಂಗ್ರೆಸ್'ನಿಂದ ಕಾಗೋಡು ತಿಮ್ಮಪ್ಪ ಹುಟ್ಟುಹಬ್ಬ ಆಚರಣೆ‘ಉಳುವವನೇ ಒಡೆಯ’ ತತ್ವದಡಿ ಬಡವರಿಗೆ ಹಕ್ಕುಪತ್ರ ನೀಡಿ: ಸಾಗರದಲ್ಲಿ ಮಾಜಿ ಸಚಿವ ಹಾಲಪ್ಪ ಆಗ್ರಹBREAKING: KPSC ಪಶು ವೈದ್ಯಾಧಿಕಾರಿ ನೇಮಕಾತಿ ಹಗರಣ: ಸದಸ್ಯೆ ಶಾಂತಾ ಹೊಸಮನಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿಚೆನ್ನೈ ಆಭರಣ ಮಳಿಗೆಯಲ್ಲಿ ಬಿಐಎಸ್ ಹಾಲ್ ಮಾರ್ಕ್ ಇಲ್ಲದ ಚಿನ್ನಾಭರಣಗಳ ವಶಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸ್ಪೆಷಲಿಸ್ಟ್ ಕೇಡರ್ ಆಫೀಸರ್ ಹುದ್ದೆಗಳಿಗೆ ನೇಮಕಾತಿಸಾಗರದಲ್ಲಿ ಹಕ್ಕುಪತ್ರಕ್ಕಾಗಿ ಹೋರಾಟ: ಇದೊಂದು ಕೇವಲ ರಾಜಕೀಯ ಷಡ್ಯಂತ್ರವೆಂದ ಶಾಸಕ ಗೋಪಾಲಕೃಷ್ಣ ಬೇಳೂರುಮಂಡ್ಯದ ಬಸರಾಳು ಕೆರೆಯಲ್ಲಿ ಸಾವಿರಾರು ಮೀನುಗಳ ಮಾರಣಹೋಮ: ನೀರಿಲ್ಲದೆ ಬರದ ಭೀತಿ, ಕಣ್ಣೀರಿಡುತ್ತಿರುವ ಗ್ರಾಮಸ್ಥರುಮಂಡ್ಯ ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಕುಮಾರ್ ಕೊಪ್ಪ ನೇಮಕಮಂಡ್ಯದ ಕೆ.ಆರ್ ಪೇಟೆಯಲ್ಲಿ ಮೊರಾರ್ಜಿ ಶಾಲೆಯಲ್ಲಿ ಕಲುಷಿತ ಆಹಾರ ಸೇವಿಸಿ ಮಕ್ಕಳು ಅಸ್ವಸ್ಥ: ಆಸ್ಪತ್ರೆಗೆ ದಾಖಲು