LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

DLಗೆ ಸೆ.30ರೊಳಗೆ ಮೊಬೈಲ್ ನಂಬರ್ ಅಪ್‌ಡೇಟ್ ಮಾಡದಿದ್ದರೆ ಲೈಸೆನ್ಸ್ ರದ್ದಾಗುತ್ತಾ? ವೈರಲ್ ಸುದ್ದಿಯ ಅಸಲಿಯತ್ತು ಇಲ್ಲಿದೆ!

ಡ್ರೈವಿಂಗ್ ಲೈಸೆನ್ಸ್‌ಗೆ ಮೊಬೈಲ್ ನಂಬರ್ ಲಿಂಕ್ ಮಾಡದಿದ್ದರೆ ಲೈಸೆನ್ಸ್ ರದ್ದಾಗುತ್ತದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಸೆಪ್ಟೆಂಬರ್ 30ರೊಳಗೆ ಮೊಬೈಲ್ ನಂಬರ್ ಅಪ್‌ಡೇಟ್ ಮಾಡದಿದ್ದರೆ ಡ್ರೈವಿಂಗ್ ಲೈಸೆನ್ಸ್ ರದ್ದಾಗುತ್ತದೆ ಎಂಬ ಪ್ರಚಾರವೂ ನಡೆಯುತ್ತಿದೆ. ಈ ಕುರಿತು ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದ್ದು, ಅಸಲಿ ವಿಚಾರವೇನು ಎಂಬುದನ್ನು ತಿಳಿಯೋಣ.

ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಡ್ರೈವಿಂಗ್ ಲೈಸೆನ್ಸ್‌ಗೆ ಸಂಬಂಧಿಸಿದ ನಕಲಿ ಸುದ್ದಿ ಭಾರೀ ಪ್ರಮಾಣದಲ್ಲಿ ಹರಿದಾಡುತ್ತಿದೆ. ಸೆಪ್ಟೆಂಬರ್ 30ರೊಳಗೆ ಡ್ರೈವಿಂಗ್ ಲೈಸೆನ್ಸ್‌ಗೆ ಮೊಬೈಲ್ ನಂಬರ್ ಲಿಂಕ್ ಮಾಡದಿದ್ದರೆ ಲೈಸೆನ್ಸ್ ರದ್ದಾಗುತ್ತದೆ ಎಂಬ ಸುದ್ದಿ ವೈರಲ್ ಆಗಿದೆ. ಇದರಿಂದ ವಾಹನ ಸವಾರರು ಆತಂಕಗೊಂಡಿದ್ದಾರೆ. ಮೊಬೈಲ್ ನಂಬರ್ ಲಿಂಕ್ ಮಾಡಿಸಿಕೊಳ್ಳಲು ಕೆಲವರು ಸಾರಿಗೆ ಇಲಾಖೆ ಕಚೇರಿಗಳಿಗೆ ತೆರಳಿ ಸರತಿ ಸಾಲಿನಲ್ಲಿ ನಿಲ್ಲುತ್ತಿದ್ದರೆ, ಇನ್ನು ಕೆಲವರು ಆನ್‌ಲೈನ್ ಮೂಲಕ ವಿವರಗಳನ್ನು ಅಪ್‌ಡೇಟ್ ಮಾಡಿಕೊಳ್ಳುತ್ತಿದ್ದಾರೆ.

ಈ ನಡುವೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಈ ಸುದ್ದಿಯನ್ನು ಖಂಡಿಸಿದ್ದು, ಇದು ಸಂಪೂರ್ಣವಾಗಿ ಸುಳ್ಳು ಮಾಹಿತಿ ಎಂದು ಸ್ಪಷ್ಟಪಡಿಸಿದೆ.

ವಾಹನ ಸವಾರರು ತಮ್ಮ ಡ್ರೈವಿಂಗ್ ಲೈಸೆನ್ಸ್ ಹಾಗೂ ವಾಹನ ನೋಂದಣಿ ಪ್ರಮಾಣಪತ್ರ (RC) ಸೇರಿದಂತೆ ಪ್ರಮುಖ ದಾಖಲೆಗಳಿಗೆ ತಮ್ಮ ಪ್ರಸ್ತುತ ಮೊಬೈಲ್ ನಂಬರ್‌ ಅನ್ನು ಅಪ್‌ಡೇಟ್ ಮಾಡಿಕೊಳ್ಳಬೇಕು ಎಂದು ಕೇಂದ್ರ ಸರ್ಕಾರ ಸೂಚಿಸಿದೆ. ಜನರೊಂದಿಗೆ ಸಾರಿಗೆ ಇಲಾಖೆಯ ಸಂವಹನವನ್ನು ಸುಗಮಗೊಳಿಸುವುದು ಹಾಗೂ ಸಾರಿಗೆ ಸೇವೆಗಳನ್ನು ಮತ್ತಷ್ಟು ಸರಳಗೊಳಿಸುವ ಉದ್ದೇಶದಿಂದ ಈ ಸಲಹೆ ನೀಡಲಾಗಿದೆ.

ಏಜೆಂಟ್‌ಗಳಿಂದ ತಪ್ಪು ಮೊಬೈಲ್ ನಂಬರ್ ನೋಂದಣಿ

ಹಿಂದೆ ಡ್ರೈವಿಂಗ್ ಲೈಸೆನ್ಸ್‌ಗಾಗಿ ಅರ್ಜಿ ಸಲ್ಲಿಸುವ ಪ್ರಕ್ರಿಯೆಯಲ್ಲಿ ಏಜೆಂಟ್‌ಗಳ ಪಾತ್ರ ಹೆಚ್ಚಾಗಿತ್ತು. ಈ ಸಂದರ್ಭದಲ್ಲಿ ಕೆಲವು ಏಜೆಂಟ್‌ಗಳು ಅರ್ಜಿದಾರರ ಸ್ವಂತ ಮೊಬೈಲ್ ನಂಬರ್ ಬದಲಿಗೆ ತಮ್ಮದೇ ಅಥವಾ ಬೇರೆ ಮೊಬೈಲ್ ನಂಬರ್‌ಗಳನ್ನು ದಾಖಲಿಸುತ್ತಿದ್ದರು.

ಇದರಿಂದ ಲೈಸೆನ್ಸ್ ನವೀಕರಣ, ದಂಡ, ಸಾರಿಗೆ ಇಲಾಖೆಯ ಇತರ ಪ್ರಮುಖ ಮಾಹಿತಿ ಸೇರಿದಂತೆ ಅಗತ್ಯ ಮಾಹಿತಿಯನ್ನು ವಾಹನ ಸವಾರರಿಗೆ ನೇರವಾಗಿ ತಲುಪಿಸುವಲ್ಲಿ ಸಮಸ್ಯೆಯಾಗುತ್ತಿತ್ತು.

ಈ ಸಮಸ್ಯೆಯನ್ನು ನಿವಾರಿಸಲು ವಾಹನ ಸವಾರರು ತಮ್ಮ ಡ್ರೈವಿಂಗ್ ಲೈಸೆನ್ಸ್ ಮತ್ತು RCಗೆ ತಮ್ಮದೇ ಪ್ರಸ್ತುತ ಮೊಬೈಲ್ ನಂಬರ್‌ ಅನ್ನು ಅಪ್‌ಡೇಟ್ ಮಾಡಿಕೊಳ್ಳುವಂತೆ ಸರ್ಕಾರ ಸೂಚಿಸಿದೆ.

ಸೆಪ್ಟೆಂಬರ್ 30 ಕೊನೆಯ ದಿನಲ್ಲ

ಮೊಬೈಲ್ ನಂಬರ್ ಅಪ್‌ಡೇಟ್ ಮಾಡಲು ಸೆಪ್ಟೆಂಬರ್ 30 ಕೊನೆಯ ದಿನಾಂಕ ಎಂದು ಕೇಂದ್ರ ಸರ್ಕಾರ ಯಾವುದೇ ಗಡುವು ನಿಗದಿಪಡಿಸಿಲ್ಲ. ಸೆಪ್ಟೆಂಬರ್ 30ರೊಳಗೆ ಮೊಬೈಲ್ ನಂಬರ್ ಲಿಂಕ್ ಮಾಡದಿದ್ದರೆ ಡ್ರೈವಿಂಗ್ ಲೈಸೆನ್ಸ್ ರದ್ದಾಗುತ್ತದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ತಪ್ಪು ಮಾಹಿತಿಯಾಗಿದೆ.

ಮೊಬೈಲ್ ನಂಬರ್ ಅಪ್‌ಡೇಟ್ ಮಾಡುವುದು ನಿರಂತರ ಪ್ರಕ್ರಿಯೆಯಾಗಿದ್ದು, ಇದಕ್ಕೆ ಯಾವುದೇ ಗಡುವು ಇಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಹೀಗಾಗಿ ವಾಹನ ಸವಾರರು ಆತಂಕಪಡುವ ಅಗತ್ಯವಿಲ್ಲ. ವಾಹನ ಸವಾರರು ಪರಿವಾಹನ್ ಅಥವಾ ಎಂ-ಪರಿವಾಹನ್ ಪೋರ್ಟಲ್‌ಗಳ ಮೂಲಕ ತಮ್ಮ ವಿವರಗಳನ್ನು ಪರಿಶೀಲಿಸಿ ಅಗತ್ಯವಿದ್ದರೆ ಮೊಬೈಲ್ ನಂಬರ್‌ ಅನ್ನು ಅಪ್‌ಡೇಟ್ ಮಾಡಿಕೊಳ್ಳಬಹುದು.

ಸಾಮಾಜಿಕ ಜಾಲತಾಣದ ಸುದ್ದಿಗೆ ಮರುಳಾಗಬೇಡಿ

ಡ್ರೈವಿಂಗ್ ಲೈಸೆನ್ಸ್ ರದ್ದಾಗುತ್ತದೆ ಎಂಬ ಭಯದಿಂದ ಆತುರದಲ್ಲಿ ಯಾವುದೇ ಕ್ರಮ ಕೈಗೊಳ್ಳುವ ಅಗತ್ಯವಿಲ್ಲ. ಮೊಬೈಲ್ ನಂಬರ್ ಅಪ್‌ಡೇಟ್ ಮಾಡಿಕೊಳ್ಳುವುದು ಉತ್ತಮವಾದರೂ, ಸೆಪ್ಟೆಂಬರ್ 30ರ ಗಡುವು ಎಂಬುದು ಸುಳ್ಳು ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಸಾರ್ವಜನಿಕರು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುವ ಮಾಹಿತಿಯನ್ನು ನಂಬುವ ಮೊದಲು ಅಧಿಕೃತ ಸರ್ಕಾರಿ ಮೂಲಗಳಿಂದ ಮಾಹಿತಿ ಪರಿಶೀಲಿಸಬೇಕು ಎಂದು ಕೇಂದ್ರ ಸರ್ಕಾರ ಸಲಹೆ ನೀಡಿದೆ.

 ಮೊಬೈಲ್ ನಂಬರ್ ಅಪ್‌ಡೇಟ್ ಮಾಡಲು ಸೆಪ್ಟೆಂಬರ್ 30 ಕೊನೆಯ ದಿನಾಂಕ ಎಂದು ಕೇಂದ್ರ ಸರ್ಕಾರ ಯಾವುದೇ ಗಡುವು ನಿಗದಿಪಡಿಸಿಲ್ಲ. ಸೆಪ್ಟೆಂಬರ್ 30ರೊಳಗೆ ಮೊಬೈಲ್ ನಂಬರ್ ಲಿಂಕ್ ಮಾಡದಿದ್ದರೆ ಡ್ರೈವಿಂಗ್ ಲೈಸೆನ್ಸ್ ರದ್ದಾಗುತ್ತದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ತಪ್ಪು ಮಾಹಿತಿಯಾಗಿದೆ.ಮೊಬೈಲ್ ನಂಬರ್ ಅಪ್‌ಡೇಟ್ ಮಾಡುವುದು ನಿರಂತರ ಪ್ರಕ್ರಿಯೆಯಾಗಿದ್ದು, ಇದಕ್ಕೆ ಯಾವುದೇ ಗಡುವು ಇಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಹೀಗಾಗಿ ವಾಹನ ಸವಾರರು ಆತಂಕಪಡುವ ಅಗತ್ಯವಿಲ್ಲ.

ವಾಹನ ಸವಾರರು ಪರಿವಾಹನ್ ಅಥವಾ ಎಂ-ಪರಿವಾಹನ್ ಪೋರ್ಟಲ್‌ಗಳ ಮೂಲಕ ತಮ್ಮ ವಿವರಗಳನ್ನು ಪರಿಶೀಲಿಸಿ ಅಗತ್ಯವಿದ್ದರೆ ಮೊಬೈಲ್ ನಂಬರ್‌ ಅನ್ನು ಅಪ್‌ಡೇಟ್ ಮಾಡಿಕೊಳ್ಳಬಹುದು.

ಸಾಮಾಜಿಕ ಜಾಲತಾಣದ ಸುದ್ದಿಗೆ ಮರುಳಾಗಬೇಡಿ

ಡ್ರೈವಿಂಗ್ ಲೈಸೆನ್ಸ್ ರದ್ದಾಗುತ್ತದೆ ಎಂಬ ಭಯದಿಂದ ಆತುರದಲ್ಲಿ ಯಾವುದೇ ಕ್ರಮ ಕೈಗೊಳ್ಳುವ ಅಗತ್ಯವಿಲ್ಲ. ಮೊಬೈಲ್ ನಂಬರ್ ಅಪ್‌ಡೇಟ್ ಮಾಡಿಕೊಳ್ಳುವುದು ಉತ್ತಮವಾದರೂ, ಸೆಪ್ಟೆಂಬರ್ 30ರ ಗಡುವು ಎಂಬುದು ಸುಳ್ಳು ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಸಾರ್ವಜನಿಕರು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುವ ಮಾಹಿತಿಯನ್ನು ನಂಬುವ ಮೊದಲು ಅಧಿಕೃತ ಸರ್ಕಾರಿ ಮೂಲಗಳಿಂದ ಮಾಹಿತಿ ಪರಿಶೀಲಿಸಬೇಕು ಎಂದು ಕೇಂದ್ರ ಸರ್ಕಾರ ಸಲಹೆ ನೀಡಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮೆಜಾನ್, ಫ್ಲಿಪ್‌ಕಾರ್ಟ್‌ಗಿಂತ ಕಡಿಮೆ ಬೆಲೆಗೆ ಫೋನ್‌ಗಳು; ಸೆ.30ಕ್ಕೆ ಆಫ್‌ಲೈನ್ ಆಫರ್‌ಗಳ ಅಂತ್ಯ!ಮೇಕೆದಾಟು ಯೋಜನೆ ಸ್ಥಳಕ್ಕೆ ತಮಿಳುನಾಡು ನಿಯೋಗವೂ ಬಂದು ಪರಿಶೀಲನೆ ಮಾಡಲಿ: ಸಿಎಂ ಡಿ.ಕೆ. ಶಿವಕುಮಾರ್ಬರದ ಪರಿಸ್ಥಿತಿ ಪರಿಶೀಲಿಸಲು ಕರ್ನಾಟಕ, ಮಹಾರಾಷ್ಟ್ರಕ್ಕೆ ಕೇಂದ್ರ ತಂಡಗಳ ಭೇಟಿ18 ವರ್ಷದೊಳಗಿನವರಿಗೆ ಸಾಮಾಜಿಕ ಜಾಲತಾಣಗಳ ಖಾತೆ ತೆರೆಯಲು ನಿರ್ಬಂಧ: ಹೊಸ ನಿಯಮDLಗೆ ಸೆ.30ರೊಳಗೆ ಮೊಬೈಲ್ ನಂಬರ್ ಅಪ್‌ಡೇಟ್ ಮಾಡದಿದ್ದರೆ ಲೈಸೆನ್ಸ್ ರದ್ದಾಗುತ್ತಾ? ವೈರಲ್ ಸುದ್ದಿಯ ಅಸಲಿಯತ್ತು ಇಲ್ಲಿದೆ!ನೇಪಾಳದಲ್ಲಿ ಭಾರಿ ಮಳೆಗೆ ಬೆಟ್ಟ ಕುಸಿದು 24 ಮಂದಿ ಸಾವು, 14 ಜನ ನಾಪತ್ತೆ ; ಭಯಾನಕ ವೀಡಿಯೋ ವೈರಲ್ |WATCH VIDEOUPI ಪೇಮೆಂಟ್‌ಗೆ ಮುನ್ನ ಎಚ್ಚರ! ಹಣ ಕಳುಹಿಸುವಾಗ ಈ ಮಾಹಿತಿ ನಮೂದಿಸುವುದು ಮುಖ್ಯಮತ್ತೆ ಜಾಗತಿಕ ಮಟ್ಟಕ್ಕೆ UPI: ಭಾರತದ ವ್ಯವಸ್ಥೆ ಅಳವಡಿಸಿಕೊಂಡ ಮೊದಲ ಕೆರಿಬಿಯನ್ ರಾಷ್ಟ್ರ ಟ್ರಿನಿಡಾಡ್ ಮತ್ತು ಟೊಬೆಗೊ₹500ಕ್ಕೆ ಲಾಟರಿ ಟಿಕೆಟ್ ಖರೀದಿ.. ರಾತ್ರೋರಾತ್ರಿ ಕೋಟ್ಯಾಧಿಪತಿಯಾದ ವ್ಯಕ್ತಿ! ಗೆದ್ದ ಹಣ ಎಷ್ಟು ಗೊತ್ತಾ?ಚಲಿಸುತ್ತಿದ್ದ ಬಸ್‌ನಲ್ಲೇ ಗ್ಯಾಂಗ್‌ರೇಪ್; ನಿರ್ಭಯಾ ಪ್ರಕರಣ ಉಲ್ಲೇಖಿಸಿ ಸುಪ್ರೀಂಕೋರ್ಟ್‌ನಿಂದ ಸ್ವಯಂಪ್ರೇರಿತ ವಿಚಾರಣೆ