LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

EPFO : ಮೇ 13 ರಂದು ಪಿಂಚಣಿ ಅದಾಲತ್

ಕಾರ್ಮಿಕರ ಭವಿಷ್ಯ ನಿಧಿ ಸಂಸ್ಥೆಯ ಬಳ್ಳಾರಿ ಪ್ರಾದೇಶಿಕ ಕಚೇರಿ ವತಿಯಿಂದ ಪಿಂಚಣಿದಾರರ ಕುಂದು ಕೊರತೆ ಆಲಿಸಿ, ಪರಿಹರಿಸಲು ಮೇ 13 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 01 ಗಂಟೆಯವರೆಗೆ ನಗರದ ಪ್ರಾದೇಶಿಕ ಕಚೇರಿಯಲ್ಲಿ ಪಿಂಚಣಿ ಅದಾಲತ್ ಕಾರ್ಯಕ್ರಮ ಏರ್ಪಡಿಸಲಾಗಿದೆ.

ಬಳ್ಳಾರಿ, ವಿಜಯನಗರ, ಕೊಪ್ಪಳ, ಚಿತ್ರದುರ್ಗ ಜಿಲ್ಲೆಗಳ ಪಿಂಚಣಿದಾರರು ತಮ್ಮ ಕುಂದುಕೊರತೆಗಳಿದ್ದಲ್ಲಿ ಬಳ್ಳಾರಿ ಪ್ರಾದೇಶಿಕ ಕಚೇರಿಯ ಸಾರ್ವಜನಿಕ ಸಂಪರ್ಕ ಅಧಿಕಾರಿಗೆ ಪತ್ರ ಅಥವಾ ಇ-ಮೇಲ್ ಮೂಲಕ ಪಿ.ಪಿ.ಒ ಸಂಖ್ಯೆ, ವಿಳಾಸ, ದೂರವಾಣಿ, ಮೊಬೈಲ್ ಸಂಖ್ಯೆ ಮತ್ತು ಕುಂದು ಕೊರತೆಯ ಸ್ವರೂಪ ಹಾಗೂ ಇತ್ಯಾದಿಗಳನ್ನು ಅಂಚೆ ಪತ್ರದ ಮೂಲಕ ಮೇ 10 ರೊಳಗಾಗಿ ರವಾನಿಸಬಹುದಾಗಿದೆ. ಪತ್ರ ಲಕೋಟೆ ಮೇಲೆ ಪಿಂಚಣಿ ಅದಾಲತ್ ಎಂದು ಬರೆಯಬೇಕು. ಹೆಚ್ಚಿನ ಮಾಹಿತಿಗಾಗಿ ದೂ.08392-268943 ಗೆ ಸಂಪರ್ಕಿಸಬಹುದು ಎಂದು ಕ್ಷೇತ್ರಿಯ ಭವಿಷ್ಯ ನಿಧಿ ಆಯುಕ್ತ ಕೆ.ವಿ ಪ್ರವೀಣ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಸತಿ ರಹಿತರ ಅರ್ಹ ಫಲಾನುಭವಿಗಳ ಪಟ್ಟಿ ಸೇರ್ಪಡೆಗೆ ಮೇ 15 ಕೊನೆಯ ದಿನ

ಬಳ್ಳಾರಿ : 2018ರ ವಸತಿ ರಹಿತ ಮತ್ತು ನಿವೇಶನ ರಹಿತ ಸಮೀಕ್ಷೆಯ ಪಟ್ಟಿಯಲ್ಲಿ ಬಿಟ್ಟುಹೋಗಿರುವ ಅರ್ಹ ಫಲಾನುಭವಿಗಳನ್ನು ಸೇರಿಸಲು ಹಾಗೂ ಪರಿಷ್ಕರಿಸಲು ಮೇ 15 ಕೊನೆಯ ದಿನವಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್ ಅವರು ತಿಳಿಸಿದ್ದಾರೆ.2018ರಲ್ಲಿ ನಡೆಸಲಾದ ಸಮೀಕ್ಷಾ ಪಟ್ಟಿಯನ್ನು ಪರಿಷ್ಕರಿಸಲು ಮತ್ತು ಅರ್ಹ ಕುಟುಂಬಗಳನ್ನು ಪಟ್ಟಿಗೆ ಸೇರಿಸಲು ಈಗ ಅವಕಾಶ ಕಲ್ಪಿಸಲಾಗಿದೆ. ಅರ್ಹ ಫಲಾನುಭವಿಗಳ ಹೆಸರನ್ನು ಸೇರಿಸಲು ಮೇ 15 ರವರೆಗೆ ಅಂತಿಮ ಕಾಲಾವಕಾಶ ನೀಡಲಾಗಿದೆ.

ಈ ನಿಗದಿತ ದಿನಾಂಕದ ನಂತರ ಯಾವುದೇ ಸೇರ್ಪಡೆಗೆ ಅವಕಾಶವಿರುವುದಿಲ್ಲ ಮತ್ತು ಅಂದೇ ಪಟ್ಟಿಯನ್ನು ಅಂತಿಮಗೊಳಿಸಲಾಗುವುದು. ಮೇ 15ರ ನಂತರ ಸಿದ್ಧವಾಗುವ ಪಟ್ಟಿಯನ್ನೇ ಅಂತಿಮ ‘ವಸತಿ ಮತ್ತು ನಿವೇಶನ ರಹಿತರ ಪಟ್ಟಿ’ ಎಂದು ಪರಿಗಣಿಸಲಾಗುವುದು.ಅರ್ಹ ಫಲಾನುಭವಿಗಳು ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಅಥವಾ ಹೆಸರು ಸೇರ್ಪಡೆಗಾಗಿ ತಮ್ಮ ವ್ಯಾಪ್ತಿಯ ಗ್ರಾಮ ಪಂಚಾಯತಿ ಸಿಬ್ಬಂದಿಯನ್ನು ಕೂಡಲೇ ಸಂಪರ್ಕಿಸಬಹುದಾಗಿದೆ. ವಸತಿ ಸೌಲಭ್ಯದಿಂದ ವಂಚಿತರಾದ ಅರ್ಹ ಕುಟುಂಬಗಳು ಈ ಕೂಡಲೇ ಸಂಬಂಧಪಟ್ಟ ದಾಖಲೆಗಳೊಂದಿಗೆ ಗ್ರಾಮ ಪಂಚಾಯತಿಯನ್ನು ಸಂಪರ್ಕಿಸಿ ತಮ್ಮ ಹೆಸರು ಪಟ್ಟಿಯಲ್ಲಿದೆಯೇ ಎಂದು ಖಚಿತಪಡಿಸಿಕೊಳ್ಳಬೇಕು.ಅರ್ಹ ಫಲಾನುಭವಿಗಳನ್ನು ಕೈ ಬಿಟ್ಟಿದ್ದಲ್ಲಿ ಸಂಬಂಧಿಸಿದ ಗ್ರಾಮ ಪಂಚಾಯತಿಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳನ್ನೇ ನೇರ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ