LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ವಾಹನಗಳಲ್ಲಿ ವೇಗ ನಿಯಂತ್ರಕ, ಟ್ರ್ಯಾಕಿಂಗ್, ಪ್ಯಾನಿಕ್ ಬಟನ್ ಕಡ್ಡಾಯ: ಇಲ್ಲದಿದ್ರೆ FC ನೀಡದಂತೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ

ನವದೆಹಲಿ: ದೇಶದಲ್ಲಿ ಹೆಚ್ಚುತ್ತಿರುವ ರಸ್ತೆ ಅಪಘಾತ ತಡೆಗಟ್ಟುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಬುಧವಾರ ಮಹತ್ವದ ಆದೇಶ ನೀಡಿದೆ.

ಸಾರ್ವಜನಿಕ ಸಾರಿಗೆ ವಾಹನಗಳಲ್ಲಿ ವೇಗ ನಿಯಂತ್ರಕ, ವಾಹನಗಳ ಟ್ರ್ಯಾಕಿಂಗ್ ಸಾಧನ ಮತ್ತು ತುರ್ತು ಪರಿಸ್ಥಿತಿಯಲ್ಲಿ ಬಳಸುವ ಪ್ಯಾನಿಕ್ ಬಟನ್ ಗಳನ್ನು ಅಳವಡಿಸುವುದನ್ನು ಕಡ್ಡಾಯಗೊಳಿಸಿರುವ ಕೇಂದ್ರ ಸರ್ಕಾರದ ಮೋಟಾರ್ ವಾಹನ ನಿಯಮಗಳನ್ನು ತಕ್ಷಣವೇ ಜಾರಿಗೊಳಿಸುವಂತೆ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚನೆ ನೀಡಿದೆ.

ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಾದ ಜೆ.ಬಿ. ಪರ್ದಿವಾಲಾ ಮತ್ತು ಕೆ.ವಿ. ವಿಶ್ವನಾಥನ್ ಅವರಿದ್ದ ಪೀಠವು ರಸ್ತೆ ಸುರಕ್ಷತೆಗೆ ಸಂಬಂಧಿಸಿದ, ಅರ್ಜಿಯ ವಿಚಾರಣೆ ನಡೆಸುವಾಗ ಈ ನಿರ್ದೇಶನ ನೀಡಿದೆ.

ಸಂಸತ್ತಿನಲ್ಲಿ ಮಂಡಿಸಲಾದ ಅಂಕಿ ಅಂಶಗಳ ಪ್ರಕಾರ, ದೇಶದಲ್ಲಿ ಶೇಕಡ 5ಕ್ಕಿಂತ ಕಡಿಮೆ ಸಾರಿಗೆ ವಾಹನಗಳಲ್ಲಿ ಮಾತ್ರ ವೇಗ ನಿಯಂತ್ರಕಗಳಿವೆ. ಶೇಕಡ 1ರಷ್ಟು ವಾಹನಗಳಲ್ಲಿ ಟ್ರ್ಯಾಕಿಂಗ್ ಸಾಧನಗಳಿವೆ ಎನ್ನುವ ಮಾಹಿತಿ ಇದೆ. ಈ ಬಗ್ಗೆ ಸುಪ್ರೀಂಕೋರ್ಟ್ ತೀವ್ರ ಕಳವಳ ವ್ಯಕ್ತಪಡಿಸಿದ್ದು, ನಿಯಮಗಳನ್ನು ಉಲ್ಲಂಘಿಸುವ ಸಾರ್ವಜನಿಕ ವಾಹನಗಳಿಗೆ ಫಿಟ್ನೆಸ್ ಪ್ರಮಾಣ ಪತ್ರ(ಎಫ್.ಸಿ.) ಅಥವಾ ಪರ್ಮಿಟ್ ಗಳನ್ನು ನೀಡಬಾರದು ಎಂದು ಆದೇಶ ನೀಡಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿಮಕ್ಕಳ ಮನಸ್ಸು, ಮೆದುಳಿನ ಶಕ್ತಿಗೆ ದಾರಿದೀಪ ಈ ಪುಸ್ತಕ: ತಪ್ಪದೇ ಖರೀದಿಸಿ, ನಿಮ್ಮ ಮಕ್ಕಳಿಗೆ ತಪ್ಪದೇ ಓದಿಸಿ!ಹಿಂದೂಗಳ ಆಚರಣೆಗೆ ಸರ್ಕಾರ ಅಡ್ಡಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಕಾಂಗ್ರೆಸ್ ಪಕ್ಷ ಸಂಘಟನೆ ಬಲವರ್ಧನೆಗೆ 'ಕೆಪಿಸಿಸಿ ಕನೆಕ್ಟ್ ಸೆಂಟರ್' ಸ್ಥಾಪನೆ: ಪದಾಧಿಕಾರಿಗಳ ನೇಮಕ