LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರಸಗೊಬ್ಬರ ಖರೀದಿಸಲು ಇನ್ಮುಂದೆ ‘FID’ ಕಡ್ಡಾಯ ; ರಸಗೊಬ್ಬರ ವಿತರಣೆ ಮೇಲೆ ವಿಶೇಷ ನಿಗಾ

ರಸಗೊಬ್ಬರ ಖರೀದಿಗೆ ಇನ್ಮುಂದೆ ರೈತರು ಕಡ್ಡಾಯವಾಗಿ ಎಫ್‍ಐಡಿ ಹೊಂದಿರಬೇಕು. ಅಷ್ಟೇ ಅಲ್ಲ ತಮ್ಮ ಭೂಮಿಯನ್ನು ಸಹ ಎಫ್‍ಐಡಿಗೆ ಜೋಡಿಸಿರಬೇಕು. ಇದರ ಆಧಾರದಲ್ಲಿಯೇ ರಸಗೊಬ್ಬರವನ್ನು ಕೆ.ಕಿಸಾನ್ ತಂತ್ರಜ್ಞಾನದ ಮೂಲಕ ವಿತರಣೆ ಮಾಡಲಾಗುತ್ತದೆ.

ಹೌದು. ರಸಗೊಬ್ಬರ ತಯಾರಿಕೆಗೆ ವಿದೇಶದಿಂದ ಕಚ್ಚಾಸಾಮಾಗ್ರಿ ಹೆಚ್ಚು ಆಮದು ಮಾಡಿಕೊಳ್ಳಲಾಗುತ್ತಿದೆ. ಯುದ್ದದಿಂದ ರಸಗೊಬ್ಬರ ತಯಾರಿಕೆ ಕಚ್ಚಾ ಸಾಮಾಗ್ರಿಯ ಆಮದಿನಲ್ಲಿ ಭಾರಿ ಸಮಸ್ಯೆಯಾಗಿದೆ, ಹೀಗಾಗಿ ಈ ಬಾರಿ ರಸಗೊಬ್ಬರ ಉತ್ಪಾದನೆಯಲ್ಲಿ ಕುಸಿತವಾಗುವ ಸಾಧ್ಯತೆ ಇದೆ. ಇದರಿಂದ ರಸಗೊಬ್ಬರ ವಿತರಣೆಯ ಮೇಲೆ ವಿಶೇಷ ನಿಗಾ ಇರಿಸಲು ನಿರ್ಧರಿಸಲಾಗಿದೆ.

ಈ ಕುರಿತು ರಾಜ್ಯ ಸರ್ಕಾರದ ಕೃಷಿ ಇಲಾಖೆ ಕಟ್ಟನಿಟ್ಟಿನ ಸೂಚನೆ ನೀಡಿದ್ದು, ರೈತರು ರಸಗೊಬ್ಬರ ಖರೀದಿ ಮಾಡಬೇಕು ಎಂದಾದರೆ ಮೊದಲು ಎಫ್‍ಐಡಿ ಹೊಂದುದು ಕಡ್ಡಾಯ. ಅದಾದ ನಂತರ ಎಫ್‍ಐಡಿಗೆ ರೈತರು ತಮ್ಮ ಭೂಮಿಯನ್ನೆಲ್ಲ ಕಡ್ಡಾಯವಾಗಿ ಜೋಡಿಸಬೇಕು, ಇದರ ಆಧಾರದ ಮೇಲೆ ಹಾಕಿದ ಬೆಳೆಗೆ ರಸಗೊಬ್ಬರವನ್ನು ರೈತರಿಗೆ ಕೆ-ಕಿಸಾನ್ ತಂತ್ರಜ್ಞಾನದ ಮೂಲಕವೇ ವಿತರಣೆ ಮಾಡಲಾಗುವುದು.

ಕಾಳಸಂತೆಗೆ ಬ್ರೇಕ್: ರೈತರ ಹೆಸರಿನಲ್ಲಿ ರಸಗೊಬ್ಬರ ಖರೀದಿಸಿ ಕಾಳಸಂತೆಯಲ್ಲಿ ದಂಧೆ ಮಾಡುತ್ತಿರುವುದಕ್ಕೆ ಬ್ರೇಕ್ ಹಾಕುವುದು ಮತ್ತು ರೈತರು ಸಹ ಮಿತವ್ಯಯವಾಗಿ ರಸಗೊಬ್ಬರ ಬಳಕೆ ಮಾಡುವಂತಾಗಬೇಕು ಎನ್ನುವ ಕಾರಣಕ್ಕಾಗಿ ಕೆ.ಕಿಸಾನ್ ತಂತ್ರಜ್ಞಾನದ ಮೂಲಕ ರಸಗೊಬ್ಬರ ವಿತರಣೆ ಮಾಡಲಾಗುತ್ತದೆ. ಅಂದರೆ ರೈತರ ಭೂಮಿ, ಹಾಕಿದ ಬೆಳೆಯ ಆಧಾರದಲ್ಲಿ ಬೇಕಾಗುವ ಪ್ರಮಾಣದ ರಸಗೊಬ್ಬರ ಮಾತ್ರ ಕೆ.ಕಿಸಾನ್ ತಂತ್ರಜ್ಞಾನದ ಮೂಲಕವೇ ವಿತರಣೆ ಮಾಡಲಾಗುತ್ತದೆ.

ರೈತರು ಈಗಾಗಲೇ ಎಫ್‍ಐಡಿ ಹೊಂದಿದಲ್ಲಿ ಅಥವಾ ಹೊಂದಿರದೆ ಇದ್ದಲ್ಲಿ ತಮ್ಮ ಎಲ್ಲಾ ಪಹಣಿ ಹಾಗೂ ಆಧಾರ್ ಕಾರ್ಡ್ ತೆಗೆದುಕೊಂಡು ಸಮೀಪದ ರೈತ ಸಂಪರ್ಕ ಕೇಂದ್ರ ಮತ್ತು ತೋಟಗಾರಿಕೆ ಇಲಾಖೆಗೆ ಭೇಟಿ ನೀಡಬೇಕು. ಎಫ್‍ಐಡಿ ಹೊಂದಿದಲ್ಲಿ ನಿಮ್ಮ ಎಲ್ಲಾ ಸರ್ವೇ ನಂಬರ್ ಆ ಎಫ್‍ಐಡಿಗೆ ಲಿಂಕ್ ಮಾಡಿಸಿಕೊಳ್ಳಲು ಹಾಗೂ ಎಫ್‍ಐಡಿ ಹೊಂದಿರದೆ ಇದ್ದಲ್ಲಿ ಹೊಸದಾಗಿ ಎಫ್‍ಐಡಿ ಸೃಜಿಸಿಕೊಳ್ಳಬೇಕು (ಸೃಜಿಸಿಕೊಳ್ಳಲು ಅಗತ್ಯ ದಾಖಲಾತಿಗಳೊಂದಿಗೆ ಕೇಂದ್ರ ಸಂಪರ್ಕಿಸಬೇಕು) ಎನ್ನಲಾಗಿದೆ.

ರೈತರು ರಸಗೊಬ್ಬರ ಪಡೆಯಲು ಎಫ್‍ಐಡಿ ಕಡ್ಡಾಯವಾಗಿ ಹೊಂದಿರಬೇಕಾಗಿದೆ. ಹೀಗಾಗಿ ಈಗಾಗಲೇ ಮಾಡಿಸಿಕೊಂಡಿದ್ದರೆ ಸರಿ, ಮಾಡಿಸಿಕೊಳ್ಳದಿದ್ದರೆ ರೈತ ಸಂಪರ್ಕ ಕೇಂದ್ರಕ್ಕೆ ಹಾಗೂ ತೋಟಗಾರಿಕೆ ಇಲಾಖೆಗೆ ಭೇಟಿ ನೀಡಿ ಮಾಡಿಸಿಕೊಳ್ಳಬೇಕು. ತಮ್ಮ ಎಲ್ಲಾ ಭೂಮಿಯ ಪಹಣಿಯನ್ನು ಸಹ ಎಫ್‍ಐಡಿ ಜೋಡಿಸುವುದು ಕಡ್ಡಾಯ.

ಮಾರಾಟದ ಮೇಲೆಯೂ ನಿಯಂತ್ರಣ: ರಸಗೊಬ್ಬರ ಮಾರಾಟಗಾರರು ಕಡ್ಡಾಯವಾಗಿ ರಸಗೊಬ್ಬರವನ್ನು ಕೆ-ಕಿಸಾನ್ ತಂತ್ರಾಂಶದ ಮೂಲಕ ರೈತರ ಎಫ್‍ಐಡಿ ನಮೂದಿಸಿ ಮಾರಾಟ ಮಾಡಬೇಕು ಹಾಗೂ ತಮ್ಮ ಎಲ್ಲಾ ಓ ಫಾರಂ ನವೀಕರಣಗೊಳಿಸಬೇಕು. ಒಂದು ವೇಳೆ ಮಾರಾಟ ಮಾಡಿದಲ್ಲಿ ಹಾಗೂ ಗರಿಷ್ಟ ಮಾರಾಟ ಬೆಲೆಗಿಂತ ಹೆಚ್ಚಿನ ಬೆಲೆಗೆ ಮಾರಾಟ ಮಾಡುವುದು ಕಂಡುಬಂದಲ್ಲಿ ಪರವಾನಗಿ ಅಮಾನತು ಅಥವಾ ರದ್ದು ಮಾಡುವ ಎಚ್ಚರಿಕೆ ನೀಡಲಾಗಿದೆ.

ಪ್ರತ್ಯೇಕ ಸಾಪ್ಟ್‍ವೇರ್: ಇದಕ್ಕಾಗಿ ಪ್ರತ್ಯೇಕ ಸಾಪ್ಟ್‍ವೇರ್ ಸಹ ಮಾಡಲಾಗಿದ್ದು, ಪ್ರತಿಯೊಂದರ ಮೇಲೆಯೂ ನಿಗಾ ಇರಿಸಲಾಗುತ್ತದೆ. ವಿತರಣೆಯಾದ ರಸಗೊಬ್ಬರ ಯಾರಿಗೆ ವಿತರಣೆಯಾಗಿದೆ ಮತ್ತು ಬಳಕೆಯಾಗಿದೆ ಎನ್ನುವುದನ್ನು ಪರಾಮರ್ಶೆ ಮಾಡಲಾಗುತ್ತದೆ ಎನ್ನುವುದು ಗಮನಾರ್ಹ ಸಂಗತಿ.

ಕಟ್ಟುನಿಟ್ಟಿನ ಸೂಚನೆ: ರಾಜ್ಯಕ್ಕೆ ಕೇಂದ್ರ ಸರ್ಕಾರ ಕೊಡುವ ರಸಗೊಬ್ಬರ ವಿತರಣೆಯಾಗಿರುವ ದೃಡೀಕರಣವನ್ನಾಧರಿಸಿ ರಾಜ್ಯಕ್ಕೆ ಹಂತಹಂತವಾಗಿ ರಸಗೊಬ್ಬರ ವಿತರಣೆ ಮಾಡಲಾಗುತ್ತದೆ. ಹೀಗಾಗಿ, ರಾಜ್ಯ ಸರ್ಕಾರದ ಎಫ್‍ಐಡಿ ಕಡ್ಡಾಯ ಮಾಡಿ ಆದೇಶ ನೀಡಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಚಂದ್ರಶೇಖರ ಅವರು ತಿಳಿಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ