LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

GOOD NEWS : ರಾಜ್ಯದಲ್ಲಿ ಶೀಘ್ರವೇ 3000 ಪ್ರಾಧ್ಯಾಪಕರ ಹುದ್ದೆಗಳು ಭರ್ತಿ : ಸಚಿವ ಬಸವರಾಜ್ ರಾಯರೆಡ್ಡಿ

ಕೊಪ್ಪಳ: ರಾಜ್ಯದ ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಶೀಘ್ರವೇ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಉನ್ನತ ಶಿಕ್ಷಣ ಇಲಾಖೆ ಸಚಿವ ಬಸವರಾಜ ರಾಯರೆಡ್ಡಿ ತಿಳಿಸಿದ್ದಾರೆ. ರಾಜ್ಯದಲ್ಲಿ 2,000 ಸಹಾಯಕ ಪ್ರಾಧ್ಯಾಪಕರು ಹಾಗೂ ವಿವಿಧ ವಿಶ್ವವಿದ್ಯಾಲಯಗಳಲ್ಲಿ 1,000 ಪ್ರಾಧ್ಯಾಪಕರ ಹುದ್ದೆಗಳು ಸೇರಿದಂತೆ ಒಟ್ಟು 3,000 ಉಪನ್ಯಾಸಕರ ನೇಮಕಾತಿ ಪ್ರಕ್ರಿಯೆಯನ್ನು ಶೀಘ್ರದಲ್ಲಿಯೇ ಆರಂಭಿಸಲಾಗುವುದು. ಇದರ ಜೊತೆಗೆ ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳಲ್ಲಿ ವಿದ್ಯಾರ್ಥಿಗಳಿಗೆ ಕೃತಕ ಬುದ್ಧಿಮತ್ತೆ (AI) ತರಬೇತಿಯನ್ನು ನೀಡಲಾಗುವುದು ಎಂದು ಸಚಿವರು ಮಹತ್ವದ ಮಾಹಿತಿ ನೀಡಿದ್ದಾರೆ.

ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಮಂಗಳೂರು ಗ್ರಾಮದಲ್ಲಿ ಶನಿವಾರ ಹಮ್ಮಿಕೊಳ್ಳಲಾಗಿದ್ದ ಹೋಬಳಿ ಮಟ್ಟದ 'ಪ್ರಜಾಸೇವಾ ಆಂದೋಲನ' ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು. ಸಾರ್ವಜನಿಕರ ಕುಂದು-ಕೊರತೆಗಳನ್ನು ಸ್ಥಳದಲ್ಲೇ ಪರಿಹರಿಸುವ ನಿಟ್ಟಿನಲ್ಲಿ ಸರ್ಕಾರವು ಪ್ರಜಾಸೇವೆ ಆಂದೋಲನವನ್ನು ರೂಪಿಸಿದ್ದು, ಇದರಿಂದ ಸಾರ್ವಜನಿಕರ ಸಮಸ್ಯೆಗಳಿಗೆ ಆಡಳಿತ ಯಂತ್ರದಿಂದ ತ್ವರಿತವಾಗಿ ಸ್ಪಂದನೆ ದೊರೆಯಲಿದೆ ಎಂದು ಸಚಿವರು ಈ ಸಂದರ್ಭದಲ್ಲಿ ವಿಶ್ವಾಸ ವ್ಯಕ್ತಪಡಿಸಿದರು.

ಸಾರ್ವಜನಿಕರ ಸಮಸ್ಯೆಗಳಿಗೆ ಸ್ಥಳೀಯವಾಗಿಯೇ ಸೂಕ್ತ ಪರಿಹಾರ ಕಲ್ಪಿಸುವುದು ಮತ್ತು ಸರ್ಕಾರದ ವಿವಿಧ ಕಲ್ಯಾಣ ಯೋಜನೆಗಳ ಸೌಲಭ್ಯಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವುದು ಈ ಆಂದೋಲನದ ಪ್ರಮುಖ ಉದ್ದೇಶವಾಗಿದೆ. ಇದಕ್ಕಾಗಿ ಪ್ರತಿ ಶನಿವಾರ ತಾಲೂಕು ಕೇಂದ್ರಗಳಲ್ಲಿ 'ಪ್ರಜಾಸೇವೆ ಆಂದೋಲನ' ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಸಾರ್ವಜನಿಕರ ಹಿತದೃಷ್ಟಿಯಿಂದ ನಿರಂತರವಾಗಿ ಈ ಕುಂದುಕೊರತೆ ನಿವಾರಣಾ ಸಭೆಗಳು ನಡೆಯಲಿವೆ ಎಂದು ಅವರು ಸ್ಪಷ್ಟಪಡಿಸಿದರು.

ಪ್ರತಿ ತಿಂಗಳ ಮೊದಲ ಮತ್ತು ಎರಡನೇ ಶನಿವಾರದಂದು ಜಿಲ್ಲಾಧಿಕಾರಿಗಳ ನೇರ ಅಧ್ಯಕ್ಷತೆಯಲ್ಲಿ ಈ ಕಾರ್ಯಕ್ರಮ ನೆರವೇರಲಿದೆ. ಸಾರ್ವಜನಿಕರಿಂದ ಸ್ವೀಕರಿಸುವ ಅರ್ಜಿಗಳನ್ನು ಮತ್ತು ಕುಂದುಕೊರತೆಗಳನ್ನು ಸ್ಥಳದಲ್ಲೇ ಪರಿಶೀಲಿಸಿ, ಸಾಧ್ಯವಾದಷ್ಟು ಶೀಘ್ರವಾಗಿ ಸೂಕ್ತ ಪರಿಹಾರ ಒದಗಿಸುವ ಮೂಲಕ ಸರ್ಕಾರಿ ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಜವಾಬ್ದಾರಿಯನ್ನು ಹೆಚ್ಚಿಸುವುದು ಸರ್ಕಾರದ ಮುಖ್ಯ ಮಹತ್ವಾಕಾಂಕ್ಷೆಯಾಗಿದೆ ಎಂದು ಸಚಿವರು ಹೇಳಿದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ